Yuvavahini

ಬಂಟ್ವಾಳ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ತುಳು ಪತ್ರಿಕೆ ಬಿಡುಗಡೆ

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಳಾ ಕನ್ನಡ ಸಾಹಿತ್ಯ ಪರಿಷತ್ ಇದರ ಗೌರವ ಪ್ರಧಾನ ಕಾರ್ಯದರ್ಶಿ ಬಿ.ತಮ್ಮಯ ಸಂಪಾದಕೀಯದ ತುಳು ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ದಿನಾಂಕ 13.09.2017 ರಂದು ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ, ಬಿ.ತಮ್ಮಯ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ […]

Read More

ಶಿಕ್ಷಣದ ಮೂಲಕ ಸಮಾನತೆ ಸಾರಿದ ಗುರುವರ್ಯರು – ಮಾಂಬಾಡಿ

  ಶಿಕ್ಷಣದ ಮೂಲಕ ಸಮಾನತೆ ಸಾರಿದ ಗುರುವರ್ಯರ ಸಂದೇಶ ಇಂದು ಪ್ರಸ್ತುತವಾಗಿದೆ. ಅವರ ಸಂದೇಶವನ್ನು ನಮ್ಮ ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕಾಗಿದೆ ಎಂದು ಬಂಟ್ವಾಳ ನ್ಯೂಸ್ ಸಂಪಾದಕ ಹರೀಶ್ ಮಾಂಬಾಡಿ ತಿಳಿಸಿದರು.ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ದಿನಾಂಕ 06.09.2017 ನೇ ಬುಧವಾರದಂದು ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮ ದಿನಾಚರಣೆಯನ್ನು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ […]

Read More

ಕು| ಕಾವ್ಯಾಳ ಸಂಶಯಾಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಬಂಟ್ವಾಳ ಯುವವಾಹಿನಿ ಅಗ್ರಹ

ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ 15 ವರ್ಷ ಪ್ರಾಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ಎಂಬಾಕೆಯು ದಿನಾಂಕ 20.7.2017 ರಂದು ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ.ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ಹಮ್ಮಿಕೊಳ್ಳಲಾಗುವುದು ಅನಿವಾರ್ಯವಾಗುತ್ತದೆ ಎಂಬ ಮನವಿ ಪತ್ರವನ್ನು ಬಂಟ್ವಾಳ ತಾಲೂಕಿನ ತಹಶೀಲ್ದಾರರ […]

Read More

ಬಂಟ್ವಾಳ ಯುವವಾಹಿನಿಯಿಂದ ಮನೆ ಹಸ್ತಾಂತರ

ಮಹಾ ಮಾನತಾವಾದದ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಮಾನವ ಜನಾಂಗಕ್ಕೆ ಹೊಸ ದಾರಿ ತೋರಿದವರು. ಸಮಾಜದ ಒಳಿತಿಗಾಗಿ ದುಡಿದವರು. ಅವರ ಸಂದೇಶದ ಅನುಷ್ಟಾನ ಮಾಡುತ್ತಿರುವ ಯುವವಾಹಿನಿಯಂತಹ ಯುವಶಕ್ತಿ ಸಮಾಜದ ಆದರ್ಶ ಸಂಘಟನೆಯಾಗಿದೆ ಎಂದು ಪುರೋಹಿತರಾದ ಕೇಶವ ಶಾಂತಿ ನಾಟಿ ತಿಳಿಸಿದರು. ಅವರು ದಿನಾಂಕ 23.7.2017 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜೆಕಲದ ಅಕ್ಕಮ್ಮ ಎಂಬ ತೀರಾ ಬಡ ಕುಟುಂಬಕ್ಕೆ 650 ಚ.ಅ.ಗಳ ಸುಮಾರು ರೂ. […]

Read More

ಅಧ್ಯಕ್ಷರಾಗಿ ಲೋಕೇಶ್ ಸುವರ್ಣ ಅಲೆತ್ತೂರು ಆಯ್ಕೆ

ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭೆಯ ನಾಮನಿರ್ದೇಶಕ ಸದಸ್ಯರಾದ ಲೋಕೇಶ್ ಸುವರ್ಣ ಅಲೆತ್ತೂರು ಇವರು ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳಾಗಿ                     ಉಪಾಧ್ಯಕ್ಷರು : ಗಣೇಶ್ ಪೂಂಜೆರೆಕೋಡಿ ಕಾರ್ಯದರ್ಶಿ : ದಿನೇಶ್ ಕೆ. ಸುವರ್ಣ, ಕೋಶಾಧಿಕಾರಿ : ಲೋಕೇಶ್ ಪೂಜಾರಿ. ಜತೆ ಕಾರ್ಯದರ್ಶಿ : ಕಿರಣ್ ರಾಜ್ ನಿರ್ದೇಶಕರು:- ಸಾಂಸ್ಕøತಿಕ : ಹರೀಶ್ ಕೋಟ್ಯಾನ್ ಕುದನೆ ನಾರಾಯಣಗುರು ತತ್ವ […]

Read More

ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು : ಯಶವಂತ ಪೂಜಾರಿ

ಸಂಘಟನೆಗಳು ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು ಬರುತ್ತದೆ. ತಮಗೆ ಸಿಗುವ ಅವಕಾಶವನ್ನು ಯೋಗ್ಯ ರೀತಿಯಲ್ಲಿ ನಿರ್ವಹಿಸಿದಾಗ ಮಾತ್ರ ಸಂಘಟನೆಗೂ ಸಮಾಜಕ್ಕೂ ಕೀರ್ತಿ ಲಭ್ಯವಾಗುತ್ತದೆ. ನಾಯಕತ್ವ ವಹಿಸುವುದು ಜವಾಬ್ದಾರಿ ಯ ಕೆಲಸ. ನಾಯಕನಾದವನು ತನ್ನ ಬಳಗವನ್ನು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶ್ರೀ ಯಶವಂತ […]

Read More

ಮೃತ ಯೋಗೀಶ್ ಪೂಜಾರಿ ಕುಟುಂಬಕ್ಕೆ ಸಾಂತ್ವನ

ಇತ್ತೀಚೆಗೆ ಬಡಗಬೆಳ್ಳೂರು ನಿವಾಸಿ ಯೋಗೀಶ್ ಪೂಜಾರಿ ವಿದ್ಯುತ್ ತಂತಿ ತಗುಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಈ ಸಾವಿನಿಂದಾಗಿ ಅವರ ಹೆಂಡತಿ ಹಾಗೂ ಸಣ್ಣ ನಾಲ್ಕು ಮಕ್ಕಳ ಬಡ ಸಂಸಾರ ಅನಾಥವಾಗಿದೆ.ಮೃತ ಯೋಗೀಶ್ ಪೂಜಾರಿಯವರ ಮನೆಗೆ ದಿನಾಂಕ 10.07/2017ರಂದು ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಬೇಟಿ ನೀಡಿ ರೂ 10,000/- ಸಾಂತ್ವನ ನಿಧಿ ನೀಡಲಾಯಿತು. ಹಾಗೂ ಮೂರು ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ನಿರ್ಧರಿಸಲಾಯಿತು ಈ ಸಂಧರ್ಭದಲ್ಲಿ ಯುವವಾಹಿನಿ ಅಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಅಧ್ಯಕ್ಷರಾದ […]

Read More

ತಾರಾನಾಥ್ ಅವರಿಗೆ ಯುವವಾಹಿನಿಯಿಂದ ನುಡಿನಮನ

ಮಮತೆಯ ಖನಿ,ಒಲವಿನ ಸೆಲೆ,ಆದರ್ಶ ಕರ್ತವ್ಯ ನಿಷ್ಠೆ, ಕಾರ್ಯ ತತ್ಪರತೆ, ಆಕರ್ಷಣೀಯ ವ್ಯಕ್ತಿತ್ವ, ಸ್ನೇಹ ಶೀಲತೆ, ಸಂಘಟನಾ ಚತುರ ತಾರಾನಾಥ್ ಅವರು ನಮ್ಮನ್ನಗಲಿರುವುದು ತುಂಬಲಾರದ ನಷ್ಟ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ತುಕರಾಮ್ ಎನ್ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ದಿನಾಂಕ 08.06.2017ರಂದು ಅಕಾಲಿಕವಾಗಿ ನಿಧನ ಹೊಂದಿದ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷರಾದ ತಾರಾನಾಥ್ ಅವರಿಗೆ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ದಿನಾಂಕ 11.06.2017 ರಂದು ಜರುಗಿದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾರಾನಾಥರು […]

Read More

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ನಡೆದು ಬಂದ ದಾರಿ

ಲೋಕ ಶಾಂತಿ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವಾದರ್ಶದ ನೆಲೆಯಲ್ಲಿ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬೋಧನೆಯ ಅನುಸಾರ ವಿದ್ಯೆ-ಉದ್ಯೋಗ-ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯಗಳನ್ನಿಟ್ಟುಕೊಂಡು ಸಮಾಜ ಅಭ್ಯುದಯದ ಕೈಂಕರ್ಯಕ್ಕಾಗಿ 1987  ಅಕ್ಟೋಬರ್ 2 ರಂದು ಸುಂಕದಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಅಸ್ತಿತ್ವಕ್ಕೆ ಬಂದ ಬಿಲ್ಲವ ಸಮಾಜದ ನಿಸ್ವಾರ್ಥ ಸಮಾನ ಮನಸ್ಕ ಯುವಕರ ಸಂಘಟನೆ ಯುವವಾಹಿನಿ. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಸಮಾಜದಲ್ಲಿ ಬಿಲ್ಲವರು ಬಲಿಷ್ಠರಾಗಬೇಕು ಎಂಬ ಸಂಕಲ್ಪದಲ್ಲಿ ಯುವವಾಹಿನಿ 1987 ರಿಂದಲೂ ಕೆಲಸ ನಿರ್ವಹಿಸುತ್ತಿದೆ. ದಕ್ಷಿಣ ಕನ್ನಡ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!