Yuvavahini

ಉಡುಪಿ

ಯುವವಾಹಿನಿ ಬಿಲ್ಲವ ಸಮಾಜದ ಕಣ್ಣುಗಳು – ಡಾ. ರಾಜಶೇಖರ ಕೋಟ್ಯಾನ್

ಯುವವಾಹಿನಿಯು ಬಿಲ್ಲವ ಸಮಾಜದ ಕಣ್ಣುಗಳು,  ವಜ್ರದಂತೆ ಬಲಿಷ್ಠವಾಗಿರುವ   ಬಿಲ್ಲವ ಸಮಾಜವನ್ನು ಪರಸ್ಪರ ಪ್ರೀತಿ, ವಿಶ್ವಾಸ, ಸಂಪರ್ಕದ ಮೂಲಕ ಹೊಳಪು ನೀಡುವ ಕಾರ್ಯವನ್ನು ಯುವವಾಹಿನಿ ಮಾಡುತ್ತಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 […]

Read More

ಯುವವಾಹಿನಿಯ ಯುವಕ್ರೀಡಾ ಸಂಗಮ -2017 ಉದ್ಘಾಟನೆ

  ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ,ನೆಮ್ಮದಿಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು, ಈ ನಿಟ್ಟಿನಲ್ಲಿ ಯುವಕರನ್ನು ಕ್ರೀಡೆಯ ಮೂಲಕ ಸಂಘಟಿಸುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾದುದು ಎಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷರಾದ ಶ್ರೀ ಅಶೋಕ್ ಎಂ.ಸುವರ್ಣ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ […]

Read More

ಉಡುಪಿ ಯುವವಾಹಿನಿಯ 2017-18ನೇ ಸಾಲಿನ ಪದಗ್ರಹಣ ಸಮಾರಂಭ

ಯುವವಾಹಿನಿಯ 29 ನೇ ವಾರ್ಷಿಕ ಸಮಾವೇಶ ದಾಖಲೆಯ ಪುಟ ಸೇರುವ ಮೂಲಕ ಉಡುಪಿ ಯುವವಾಹಿನಿಯ ಶಕ್ತಿ ಅನಾವರಣಗೊಂಡಿದೆ. ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಮೂಲಕ ಉಡುಪಿ ಯುವವಾಹಿನಿ ಪುಣ್ಯದ ಕಾರ್ಯ ಮಾಡುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 23.042017 ನೇ ಆದಿತ್ಯವಾರ ಉಡುಪಿಯ ಜಗನ್ನಾಥ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಉಡುಪಿ ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ನೆರವೇರಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ […]

Read More

ಉಡುಪಿ ಯುವವಾಹಿನಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ತಲೆಗೊಂದು ಸೂರು – ಇದು ಯುವವಾಹಿನಿ (ರಿ) ಉಡುಪಿ ಘಟಕದ ಶಾಶ್ವತ ಯಶಸ್ವೀ ಯೋಜನೆ – ವರುಷಕ್ಕೊಂದು ತೀರಾ ಬಡ ಕುಟುಂಬವನ್ನು ಆಯ್ಕೆ ಮಾಡಿ ಅವರಿಗೆ ಮನೆ ನಿರ್ಮಾಣ ಮಾಡಿ ಕೊಡುವುದು ಉಡುಪಿ ಯುವವಾಹಿನಿಯ ಜನಪ್ರಿಯ ಸಮಾಜಮುಖಿ ಕಾರ್ಯಕ್ರಮ. ಈ ವರ್ಷದ ತಲೆಗೊಂದು ಸೂರು ಕಾರ್ಯಕ್ರಮದಲ್ಲಿ ದಿನಾಂಕ 23.04.2017ನೇ ಆದಿತ್ಯವಾರ ಶ್ರೀಮತಿ ಇಂದಿರಾ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ. ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸಾಂಕೇತಿಕವಾಗಿ  ಶ್ರೀಮತಿ ಇಂದಿರಾ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು. ಮಾಜಿ ಸಚಿವ […]

Read More

ಉಡುಪಿ: ಸೌಂದರ್ಯವೃದ್ಧಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಗಾರ

ದಿನಾಂಕ 22-01-2017 ರಂದು ಯುವವಾಹಿನಿ(ರಿ) ಉಡುಪಿ ಘಟಕದ ನೇತೃತ್ವದಲ್ಲಿ ಮಹಿಳಾ ಸೌಂದರ್ಯವೃದ್ಧಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಎಂಬ ಮಹಿಳಾ ಕಾರ್ಯಕ್ರಮ ಶ್ರೀ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಮಲ್ಪೆ ಬಿಲ್ಲವ ಮಹಿಳಾ ಸಂಘ ಅಧ್ಯಕ್ಷೆ ಶ್ರೀಮತಿ ವಿಜಯ ಬಂಗೇರರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಸೌಂದರ್ಯ ತಜ್ಞೆಯಾದ ವೇದಾವತಿ ಸುವರ್ಣರವರು ಈ ಕಾರ್ಯಾಗಾರವನ್ನು ನಡೆಸಿಕೊಟ್ಟು ಉತ್ತಮ ಮಾಹಿತಿಯನ್ನು ನೀಡಿದರು. ಯುವವಾಹಿನಿ (ರಿ) ಮಂಗಳೂರು ಕೇಂದ್ರ ಸಮಿತಿಯ ಮಹಿಳಾ ಸಂಚಾಲಕಿ ಶ್ರೀಮತಿ ಗುಣವತಿ ರಮೇಶ್ ಅತಿಥಿಗಳಾಗಿ ಭಾಗವಹಿಸಿದರು. ಯುವವಾಹಿನಿ(ರಿ) ಉಡುಪಿ […]

Read More

ಉಡುಪಿ : ’ತಲೆಗೊಂದು ಸೂರು’ ಕಾರ್ಯಕ್ರಮದ ಶಿಲಾನ್ಯಾಸ

ಯುವವಾಹಿನಿ (ರಿ) ಉಡುಪಿ ಘಟಕದ ನೇತೃತ್ವದಲ್ಲಿ ತಾ. 14-01-2017 ರಂದು ಉದ್ಯಾವರದ ಈಂದ್ ಬೈಲಿನ ಶ್ರೀಮತಿ ಗಿರಿಜಾ ಇವರಿಗೆ, ಯುವವಾಹಿನಿಯ ಮಹತ್ವಾಕಾಂಕ್ಷೆಯ ತಲೆಗೊಂದು ಸೂರು ಕಾರ್ಯಕ್ರಮದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಮಾನ್ಯ ಶಾಸಕರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿಯವರು ಶಿಲಾನ್ಯಾಸದ ಕಾರ್ಯವನ್ನು ನೆರವೇರಿಸಿದರು. ಯುವವಾಹಿನಿಯ ಸದಸ್ಯರು, ಊರ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಾಂಗವಾಗಿ ನೆರೆವೇರಿತು. ಸುಮಾರು 3 ರಿಂದ 5 ಲಕ್ಷದ ಖರ್ಚಿನಲ್ಲಿ ಈ ಮನೆಯ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ಘಟಕದ ಅಧ್ಯಕ್ಷ […]

Read More

ಪಾದರಸದ ಓಟದ ಸರದಾರ ಮನೀಷ್ ಪೂಜಾರಿ

ಕ್ರೀಡಾ ಪಟುಗಳ ವಿಶ್ವದ ಅತ್ಯುನ್ನತ ವೇದಿಕೆ- ಒಲಿಂಪಿಕ್ಸ್ ಇದರಲ್ಲಿ ಭಾಗವಹಿಸಲು ಬೇಕಾದ ಅರ್ಹತೆಯನ್ನು ಗಳಿಸುವುದೇ ಅತ್ಯಂತ ಕಷ್ಟಕರ ಪ್ರಯಾಸಕರ ಸವಾಲು. ಕ್ರೀಡೆಯ ತನ್ನ ಆಸಕ್ತಿಗಳನ್ನು ಮಾರ್ಗದರ್ಶಕರಾದ ಶ್ರೀಯುತ ಅಬ್ಬಾಸ್ ಹಾಗೂ ಲಚ್ಚೇಂದ್ರ ರಿಂದ ಪೋಷಿಸಿಕೊಂಡು ನಂಬಲಸಾಧ್ಯ ಸಾಧನೆ- ಒಲಿಂಪಿಕ್‌ಗೆ ಆಯ್ಕೆಯ ಕನಸನ್ನು ನೆನಸಾಗಿಸಿದ ಕರ್ನಾಟಕದ ಹೆಮ್ಮೆಯ ಶ್ರೀ ಮನೀಷ್ ಪೂಜಾರಿ ಒಬ್ಬ ಧ್ರುವತಾರೆ. ಕರ್ನಾಟಕದ ಉಸೈನ್ ಬೋಲ್ಟ್ ಎಂದು ಕರೆಯಲ್ಪಡಲು ಅರ್ಹ ರಾಷ್ಟ್ರೀಯ ದಾಖಲೆಯುತ್ತ ಸಾಗುವ ಪ್ರಥಮಹಂತ, ರಾಜ್ಯ ದಾಖಲೆಯ 100ಮೀ. ಓಟದಲ್ಲಿ 10.5 ಸೆಕೆಂಡುಗಳಲ್ಲಿ ಹಾಗೂ 21.5  ಸೆ.ನಲ್ಲಿ […]

Read More

SSLC ಯಲ್ಲಿ ಶ್ರೇಷ್ಠ ಸಾಧನೆಯ ಕು| ರಕ್ಷಾ ಡಿ. ಅಂಚನ್

ವಿದ್ಯಾರ್ಥಿಯೊಬ್ಬರ ಸತತ ಪರಿಶ್ರಮದ ಸಾಧನೆಯ ಮಾನದಂಡ ಆತ/ ಆಕೆ ಗಳಿಸುವ ಶೇಕಡಾವಾರು ಅಂಕ. ಈ ನಿಟ್ಟಿನಲ್ಲಿ ಈ ಬಾರಿ SSLC ಪರೀಕ್ಷೆಯಲ್ಲಿ 625 ಕ್ಕೆ 622 ಅಂಕಗಳಸಿ ಶೇ. 99.52 % ಸಾಧನೆ ಮಾಡಿದ ಕು| ರಕ್ಷಾ ಡಿ ಅಂಚನ್ ನೋಡುವವರು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಶ್ರೀ ದೇವಿಪ್ರಸಾದ್ ಹಾಗೂ ಶ್ರೀಮತಿ ವಿನೋದಾ ದಂಪತಿಗಳ ಈ ಹೆಮ್ಮೆಯ ಕುವರಿ. ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದಾಳೆ. ಕನ್ನಡದಲ್ಲಿ 125 ಕ್ಕೆ 125, ಹಿಂದಿ, ಗಣಿತ ಹಾಗೂ ವಿಜ್ಞಾನದಲ್ಲಿ 100 ಕ್ಕೆ 100 […]

Read More

ಪ್ರತಿಭಾ ಕಾರಂಜಿ-ಹೃತ್ವಿಕ್ ಕುಮಾರ್

2015-16 ರ ಸಾಲಿನ CBSE 10 ೦ನೇ ತರಗತಿ ಪರೀಕ್ಷೆಯಲ್ಲಿ ಉದ್ಯಾವರ ಪ್ರತಾಪ್ ಕುಮಾರ್ 10 ಕ್ಕೆ 10 ಗ್ರೇಡ್ ಅಂಕ ಗಳಿಸಿರುತ್ತಾನೆ. ವಿಜ್ಞಾನ ಮಾದರಿಯಲ್ಲಿ ರಾಜ್ಯ ಮಟ್ಟದ ಪ್ರದರ್ಶನ, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯ ಜೂನಿಯರ್ ಹಾಗೂ ಸೀನಿಯರ್ ಗ್ರೇಡ್‌ನಲ್ಲಿ ವಿಶಿಷ್ಟ ಶ್ರೇಣಿ, ಅಂತರ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದ ಈತ ಕಾಲ್ಚೆಂಡು ಆಟಗಾರ ಕೂಡ. ಶಾಲೆಯಲ್ಲಿ ಪ್ರಬಂಧ, ಭಾಷಣ, ಹಾಡುಗಾರಿಕೆ, ಛದ್ಮವೇಷ, ವಿಜ್ಞಾನ ಮಾದರಿ, ಗೂಡುದೀಪ ತಯಾರಿಕೆ, […]

Read More

ವೈವಿಧ್ಯಮಯ ಪ್ರತಿಭೆಯ ಕು| ನಿಧಿಶಾ

ಕು| ನಿಧಿಶಾ-ಕರ್ನಾಟಕದ ಪ್ರೌಢ ಶಿಕ್ಷಣ ಮಂಡಳಿ ಕಳೆದ 2016 ಮಾರ್ಚ್‌ನಲ್ಲಿ ನಡೆಸಿದ SSLC  ಪರೀಕ್ಷೆಯಲ್ಲಿ 625 ಕ್ಕೆ ನಂಬಲಸಾಧ್ಯವಾದ 620 ಅಂಕಗಳಿಂದ ಕಲಿತ ಶಾಲೆಯ ಅಧ್ಯಾಪಕರು, ಪೋಷಕರು ಮತ್ತು ಬಿಲ್ಲವ ಸಮುದಾಯವೇ ಹೆಮ್ಮೆ ಪಡುವ ಸಾಧನೆ ಮಾಡಿರುತ್ತಾರೆ. ಈ ಬೆಲೆ ಕಟ್ಟಲಾಗದ ನಿಧಿ ಬರೀ ಕಲಿಕೆಗೇ ಸೀಮಿತಗೊಂಡಿಲ್ಲ. ಸಾಮಾನ್ಯವಾಗಿ ಕಲಿಕೆಯಲ್ಲಿ ಮುಂಚೂಣಿಯಲ್ಲಿರಬೇಕಾದಲ್ಲಿ ಬರೀ, ಪುಸ್ತಕ-ಓದು ಇಷ್ಟಕ್ಕೆ ಸೀಮಿತವಿರಬೇಕೆಂಬ ತಪ್ಪು ಕಲ್ಪನೆ ಹೆಚ್ಚಿನವರಲ್ಲಿದೆ. ಆದರೆ ನಿಧಿಶಾಳ ಪೋಷಕ ಲೋಕನಾಥ್-ಚಿತ್ರಕಲಾ ದಂಪತಿಗಳು ತಮ್ಮ ಮಗಳು ಇತರ ಸಾಧನೆಯನ್ನು ಮಾಡಲೂ ಪ್ರೋತ್ಸಾಹಿಸಿರುವುದು ಸಂತಸದ ವಿಚಾರ. ಪ್ರಬಂಧ ಸ್ಪರ್ಧೆಯಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!