Yuvavahini

ಯಡ್ತಾಡಿ

ಸಂಘಟನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಜಯಂತ್ ಪೂಜಾರಿ

ಯಡ್ತಾಡಿ: ಸಮಾಜದಲ್ಲಿ ಸಂಘಟನೆಗಳ ಅರ್ಥಪೂರ್ಣ ಕಾರ್ಯಗಳ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣವಾಗುತ್ತದೆ. ಈ ದಿಸೆಯಲ್ಲಿ ಯುವವಾಹಿನಿಯು ಮುಖ್ಯ ಧ್ಯೇಯಕ್ಕೆ ಪೂರಕವಾಗಿ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ ಪೂಜಾರಿ ಹೇಳಿದರು. ಅವರು ಯುವವಾಹಿನಿ (ರಿ) ಯಡ್ತಾಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನರೇಂದ್ರ ಕುಮಾರ ಕೋಟ, ಅಂತರಾಷ್ಟ್ರೀಯ ಕ್ರೀಡಾಪಟು ಸುರೇಶ ಪೂಜಾರಿ ಸಾಸ್ತನ, […]

Read More

ಹಿಂದೂ ರುದ್ರ ಭೂಮಿ ಸ್ವಚ್ಚತಾ ಕಾರ್ಯಕ್ರಮ

ಯಡ್ತಾಡಿ :- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಮ್ಮ ಘಟಕದಿಂದ ದಿನಾಂಕ 15 ಆಗಸ್ಟ್ 2022ರ ಸೋಮವಾರದಂದು ಯಡ್ತಾಡಿ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿಯವರು ಹಾಗೂ ಸದಸ್ಯರನ್ನೊಳಗೊಂಡ ತಂಡ ಸ್ಮಶಾನದ ಕಟ್ಟಡದ ಮೇಲ್ಛಾವಣಿ, ಸಲಕರಣೆ ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಘಟಕದ ದ್ವಿತೀಯ ಉಪಾಧ್ಯಕ್ಷರಾದ ಶ್ರೀ ಮಂಜುನಾಥ್ ಪೂಜಾರಿಯವರು ಹಿಂದೆ ಈ ಹಿಂದೂ ರುದ್ರಭೂಮಿಯನ್ನು ಮಾಡುವಾಗ ಪಟ್ಟ ಶ್ರಮವನ್ನು ನೆನೆದರು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಮತ್ತು […]

Read More

ಶಾಲಾ ಕೈ ತೋಟ ನಿರ್ಮಾಣ

ಯಡ್ತಾಡಿ :- ಯುವವಾಹಿನಿ (ರಿ.) ಯಡ್ತಾಡಿ ಘಟಕ ಹಾಗೂ ಸ. ಹಿ. ಪ್ರಾ. ಶಾಲೆ ಯಡ್ತಾಡಿ ಜಂಟಿಯಾಗಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ತರಕಾರಿಗಳನ್ನು ಶಾಲಾ ವಠಾರದಲ್ಲಿ ಬೆಳೆಯುವ ವಿನೂತನ ಕಾರ್ಯಕ್ರಮವನ್ನು ದಿನಾಂಕ 19 ಜೂನ್ 2022ರ ರವಿವಾರದಂದು ಸ. ಹಿ. ಪ್ರಾ. ಶಾಲೆ ಯಡ್ತಾಡಿಯಲ್ಲಿ ನಡೆಸಲಾಯಿತು.ಘಟಕದ ಅಧ್ಯಕ್ಷರಾದ ಸೋಮಪ್ಪ ಪೂಜಾರಿಯವರು ಹಾಗೂ ಕಾರ್ಯದರ್ಶಿ ಸುಶಾಂತ್ ಪೂಜಾರಿಯವರು ತರಕಾರಿ ಬೀಜಗಳನ್ನು ಮಣ್ಣಿನ ದಿಬ್ಬಗಳಲ್ಲಿ ಬಿತ್ತುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯುವವಾಹಿನಿ(ರಿ.) ಯಡ್ತಾಡಿ ಘಟಕದ ಸದಸ್ಯರು ಹಾಗೂ ಶಾಲಾ […]

Read More

ಆರೋಗ್ಯ ಕಾರ್ಡ್ ನೋಂದಣಿ ಶಿಬಿರ

ಯಡ್ತಾಡಿ :- ಯುವವಾಹಿನಿ (ರಿ.) ಯಡ್ತಾಡಿ ಹಾಗೂ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರ ಯಡ್ತಾಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ “ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನ ನೋಂದಣಿಯನ್ನು ದಿನಾಂಕ 29 ಮೇ 2022 ರ ಭಾನುವಾರದಂದು ಏರ್ಪಡಿಸಲಾಗಿತ್ತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿಯವರು ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿಯವರು ಸಾಂಕೇತಿಕವಾಗಿ ಆಯುಷ್ಮಾನ್ ಆರೋಗ್ಯ ಕಾರ್ಡನ್ನು ಫಲಾನುಭವಿಗಳಿಗೆ ವಿತರಿಸಿದರು. ಪರಿಸರದ 115 ಮಂದಿ ಫಲಾನುಭವಿಗಳಿಗೆ ಉಚಿತವಾಗಿ ಆಯುಷ್ಮಾನ್ ಆರೋಗ್ಯ […]

Read More

ಮುಗ್ಧ ಮನಸ್ಸುಗಳಿಗೆ ಚೈತನ್ಯ ತುಂಬುವ ಕೆಲಸ ಶ್ಲಾಘನೀಯ – ಪ್ರಮೋದ್ ಮಂದಾರ್ತಿ

ಭಾರತ ಪುಣ್ಯಭೂಮಿ, ವಿಶ್ವ ಸಂಸ್ಕೃತಿಯಲ್ಲಿ ತನ್ನದೇ ಮಹತ್ವ ಪಡೆದಕೊಂಡ ಈ ನಾಡಿನ ಅಂತರ್‌ಶಕ್ತಿ ವಿಶಿಷ್ಟವಾದುದು. ಇಂತಹ ಪುಣ್ಯ ಭೂಮಿಯಲ್ಲಿ ಮುಗ್ಧ ಮನಸ್ಸುಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಯಡ್ತಾಡಿ ಘಟಕ ಬೇಸಿಗೆ ಶಿಬಿರದಂತಹ ಕಾರ್ಯಕ್ರಮ ಆಯೋಜನೆ ಮೂಲಕ ಮಕ್ಕಳ ಭೌತಿಕ ವಿಕಸನದ ಮೂಲಕ ಸಂಸ್ಕಾರಯುತ ಶಿಕ್ಷಣಕ್ಕೆ ಅಡಿಪಾಯವಾಗುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನವಭಾರತ್ ಸಹಕಾರಿ ಸಂಘ ಮೈರ್ಕೊಮೆ ಅಧ್ಯಕ್ಷ ಪ್ರಮೋದ್ ಮಂದಾರ್ತಿ ಹೇಳಿದರು.ಅವರು ಯುವವಾಹಿನಿ(ರಿ) ಯಡ್ತಾಡಿ ಘಟಕ ಸಾರಥ್ಯದಲ್ಲಿ ಸ.ಹಿ.ಪ್ರಾ.ಶಾಲೆ ಯಡ್ತಾಡಿ, […]

Read More

ಯುವವಾಹಿನಿಯ ಸಮಾಜಮುಖಿ ಚಿಂತನೆಗಳು ಹೊಸ ಭವಿಷ್ಯಕ್ಕೆ ಮುನ್ನುಡಿ : ಕೋಟ ಶ್ರೀನಿವಾಸ ಪೂಜಾರಿ

ಕೋಟ: ಸಂಘಟನೆಗಳು ಸಮಾಜದ ಶ್ರೇಯಸ್ಸಿಗಾಗಿ ಸಮಾಜಮುಖಿ ಚಿಂತನೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ನೊಂದವರ, ಅಶಕ್ತರ ಬಾಳಿಗೆ ಬೆಳಕಾಗಿ ಹೊಸ ಮುನ್ನುಡಿ ಬರೆಯುತ್ತಿದೆ. ಈ ನಿಟ್ಟಿನಲ್ಲಿ ಯುವವಾಹಿನಿ(ರಿ) ಯಡ್ತಾಡಿ ಘಟಕ ಹಲವಾರು ಸಮಾಜ ಸೇವೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯ ಸ್ಥಾಪನೆಯ ಉದ್ದೇಶದಂತೆ ಹೆಜ್ಜೆ ಹಾಕುತ್ತಿರುವುದು ಶ್ಲಾಘನೀಯ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಯಡ್ತಾಡಿ ಶ್ರೀಕೃಷ್ಣ ನಿಲಯದ ವಠಾರದಲ್ಲಿ ಯುವವಾಹಿನಿ (ರಿ) ಯಡ್ತಾಡಿ […]

Read More

ನಮ್ಮ ನಡೆ ಸ್ವಚ್ಛತೆಯ ಕಡೆ

ಯುವವಾಹಿನಿ (ರಿ.) ಯಡ್ತಾಡಿ ಘಟಕದ ವತಿಯಿಂದ ಪ್ರತಿ ವರ್ಷವೂ  ಊರಿನ ಪರಿಸರದಲ್ಲಿ ಜನರಿಗೆ ಸ್ವಚ್ಛತೆಯ ಅರಿವು ಮೂಡಿಸಲು  ನಮ್ಮ ನಡೆ ಸ್ವಚ್ಛತೆಯ ಕಡೆ ಎಂಬ ವಿನೂತನ ರೀತಿಯ ಕಾರ್ಯಕ್ರಮ ಹಮ್ಮಿಕೊಂಡು ಊರಿನ ಸ್ವಚ್ಛತೆಗೆ ಆದ್ಯತೆ ನೀಡುತ್ತ ಬಂದಿರುತ್ತಾರೆ. ಜೊತೆಗೆ  ಪ್ಲಾಸ್ಟಿಕ್ ಮುಕ್ತ ಪರಿಸರ ವನ್ನಾಗಿಸಲು ಕೂಡ ಶ್ರಮಿಸುತ್ತಿದ್ದಾರೆ.  24.11.2019 ರಂದು ಯಡ್ತಾಡಿ ಚಿತ್ತೇರಿ ದೇವಸ್ಥಾನದ ದೀಪೋತ್ಸವದ  ಪೂರ್ವ ತಯಾರಿಯಾಗಿ  ಚಿತ್ತೇರಿ ದೇವಸ್ಥಾನದ ಇಕ್ಕೆಲಗಳಲ್ಲಿ  ಬೆಳೆದಿರುವ ಪೊದೆ, ಹಾಗು ಕಸ ಕಡ್ಡಿ  ಹಾಗು ಪ್ಲಾಸ್ಟಿಕ್ ಗಳನ್ನು ಶ್ರಮದಾನದ  ಮೂಲಕ […]

Read More

ಯುವವಾಹಿನಿ ಯಡ್ತಾಡಿ ಘಟಕದಿಂದ ನಮ್ಮ ನಡೆ

ಯಡ್ತಾಡಿ : ಯುವವಾಹಿನಿ ಯಡ್ತಾಡಿ ಘಟಕದಿಂದ ನಮ್ಮ ನಡೆ ಕಾರ್ಯಕ್ರಮ ದಿನಾಂಕ 25/05/2019 ರ ಶನಿವಾರ ಕಂಬಳಕಟ್ಟು ಸತೀಶ ಪೂಜಾರಿಯವರ ಮನೆಯಲ್ಲಿ ￰ಜರಗಿತು…ಈ ಕಾರ್ಯಕ್ರಮ ಈ ಹಿಂದೆ ನಡೆದ ನಮ್ಮ ನಡೆ ಕಾರ್ಯಕ್ರಮಗಳಿಗಿಂತ ವಿಭಿನ್ನ ವಾಗಿ ಮೂಡಿ ಬಂದಿತ್ತು ….ನಮ್ಮ ಯುವವಾಹಿನಿ ಸದಸ್ಯರ ಪುಟಾಣಿ ಮಕ್ಕಳೇ ನಿರೂಪಣೆ ಮಾಡಿ ಆಯೋಜಿಸಿದ್ದು ಮಕ್ಕಳೇ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿದ್ದು ವಿಶೇಷವಾಗಿತ್ತು..ಯುವವಾಹಿನಿ ಸದಸ್ಯರೆಲ್ಲರೂ ಆಟೋಟ ಕಾರ್ಯಕ್ರಮ ಹಾಗು ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಮಕ್ಕಳೊಂದಿಗೆ ಬೆರೆತು ಹಿರಿಯರು ಕಿರಿಯರು ಎಲ್ಲರೂ ಖುಷಿಯಿಂದ […]

Read More

ಅಗ್ನಿ ಸುರಕ್ಷತೆ ಮತ್ತು ಮುಂಜಾಗ್ರತೆ ಬಗ್ಗೆ ಮಾಹಿತಿ ಮತ್ತೆ ಪ್ರಾತ್ಯಕ್ಷಿಕೆ

ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಬೇಸಿಗೆ ಶಿಬಿರ, ‘ವಿಕಸನ-2019’ ರ ಅಂಗವಾಗಿ ನಾಲ್ಕನೇ ದಿನ ಮಕ್ಕಳಿಗೆ ‘ಅಗ್ನಿ ಸುರಕ್ಷತೆಯ’ ಬಗ್ಗೆ ಅರಿವು ಮೂಡಿಸಲಾಯಿತು. ಅಂಕಿ ಅಂಶಗಳ ಪ್ರಕಾರ ಹಲವಾರು ಬೆಂಕಿ ಅವಘಢಗಳು ಅರಿವಿನ ಕೊರತೆಯಿಂದ ಉಂಟಾಗುವಂತಹದು. ಬಿಸಿಲಿನ ಬೇಗೆಯ ಈ ದಿನಗಳಲ್ಲಿ ಅಗ್ನಿ ಅನಾಹುತಗಳ ಸಾಧ್ಯತೆ ಇನ್ನೂ ಹೆಚ್ಚು. ‘ಅರಿವಿನ ತಂಗಾಳಿ’ ಹೆಸರಿನಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಅಗ್ನಿ ಅನಾಹುತಗಳನ್ನು ಸರಿಯಾದ ಮಾಹಿತಿಯ ಮೂಲಕ ಆದಷ್ಟು ಕಡಿಮೆ ಮಾಡುವ ಮೂಲಕ ಉದ್ದೇಶದಿಂದ ‘ಅಗ್ನಿ ಸುರಕ್ಷತೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!