ಕಂಕನಾಡಿ

ಸಮಾಜಮುಖಿ ಚಿಂತನೆ ಮೈಗೂಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ : ಮಟ್ಟು

ಕಂಕನಾಡಿ :- ನಮ್ಮ ಸಮಾಜದ ಯುವ ಸಮುದಾಯ ಮುಖ್ಯವಾಹಿನಿಯ ಜೊತೆಗೂಡಿ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ಭಾನುವಾರ ಕಂಕನಾಡಿಯ ಉಜ್ಜೋಡಿ ಮಾರುತಿ ಕಾಂಪ್ಲೆಕ್ಸ್ ನ ಮಹಡಿಯಲ್ಲಿ ಶುಭಾರಂಭಗೊಂಡ ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಕಛೇರಿಯನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ನೂತನ ಕಛೇರಿಯ […]

Read More

ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನಕ್ಕೆ ಯೋಗ ಸಹಕಾರಿ – ಶಾಂಭವಿ ಅಂಚನ್

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. […]

Read More

ಆರ್ಥಿಕವಾಗಿ ಸ್ವಾವಲಂಬಿಗಳಾದ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ – ಬಿ.ಎಂ. ಭಾರತಿ

ಮಂಗಳೂರು : ದಿನಾಂಕ 03.04.2022 ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಾರಥ್ಯದಲ್ಲಿ ಯುವವಾಹಿನಿ(ರಿ.) ಕಂಕನಾಡಿ ಹಾಗೂ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ “ಹೊಂಬೆಳಕು – 2022″ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದೊಂದಿಗೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ) ಕಾರ್ಯಕ್ರಮ ಜರಗಿತು. ಲಯನ್ಸ್ ಜಿಲ್ಲಾ ಗವರ್ನರ್ ರವರ ಜಿಲ್ಲಾ ಸಂಯೋಜಕಿ ಲಯನ್ ಭಾರತಿ ಬಿ .ಎಮ್ . ಮಹಿಳಾ ದಿನಾಚರಣೆ ಪ್ರಯುಕ್ತ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿ : ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ

ಯುವವಾಹಿನಿ (ರಿ.)ಕಂಕನಾಡಿ ಘಟಕದ ವತಿಯಿಂದ ದಿನಾಂಕ 15.09.2019ರಂದು  ಆದಿತ್ಯವಾರ ಸಂಜೆ 5 ಕ್ಕೆ ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತಿಯ ಪ್ರಯುಕ್ತ ಗುರುಸ್ಮರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಶ್ರೀ ಬ್ರಹ್ಮಮುಗೇರ ಶ್ರೀ ಮಹಾಂಕಾಳಿ ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರು  ಶ್ರೀನಿವಾಸ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಪಿ ಎಲ್ […]

Read More

ನಾರಾಯಣ ಗುರು ಜಯಂತಿ : ವಿಶೇಷ ಗುರುಪೂಜೆ

165 ನೇ ನಾರಾಯಣಗುರು ಜಯಂತಿ ಪ್ರಯುಕ್ತ ಯುವವಾಹಿನಿ (ರಿ.)ಕಂಕನಾಡಿ ಘಟಕದ ವತಿಯಿಂದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಭೇಟಿ ನೀಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಪ್ರಯುಕ್ತ ವಿಶೇಷ ಗುರುಪೂಜೆ ನಡೆಸಲಾಯಿತು.ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ವಿಶೇಷ ಗುರು ಪೂಜೆ ಸಲ್ಲಿಸಲಾಯಿತು.

Read More

ಗುರುನಮನ ಕಾರ್ಯಕ್ರಮ

ನಗರದ ಉಜ್ಜೋಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರನ್ನು ಗುರುತಿಸಿ ಗೌರವಿಸುವ *ಗುರುನಮನ* ಕಾರ್ಯಕ್ರಮ ಇತ್ತೀಚೆಗೆ ಉಜ್ಜೋಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾರದ ಕಾಲೇಜಿನ ಪ್ರಾಂಶುಪಾಲರಾದ ದಯಾನಂದ ಕಟೀಲ್ ಭಾಗವಹಿಸಿ ಶಿಕ್ಷಕರನ್ನು ಗುರುತಿಸಿ ಗೌರವಿಸು ಅತ್ಯಂತ ಮಹತ್ತರ ಸೇವೆ ಎಂದು ಯುವವಾಹಿನಿ ಕಂಕನಾಡಿ ಘಟಕದ ವಿವಿಧ ಚಟುವಟಿಕೆಗಳ ಬಗ್ಗೆ ಶ್ಲಾಘಿಸುತ್ತಾ ಶಿಕ್ಷಕರ ದಿನಾಚರಣೆ ಮಹತ್ವದ ಬಗ್ಗೆ ಮಾಹಿತಿ ನೀಡಿದರು.  ಶಿಕ್ಷಕರಾದ ಸೈಂಟ್ ಅಲೋಶಿಯಸ್ ಕಾಲೇಜಿನ ರಾಕೇಶ್ […]

Read More

ಯುವವಾಹಿನಿ(ರಿ) ಕಂಕನಾಡಿ ಘಟಕದ ಘಟಕದ ಪದಗ್ರಹಣ ಸಮಾರಂಭ

ಕಂಕನಾಡಿ : ಯುವವಾಹಿನಿ(ರಿ) ಕಂಕನಾಡಿ ಘಟಕದ ಪದಗ್ರಹಣ ಸಮಾರಂಭ ವು ಮಹಾಕಾಳಿ ದೈವಸ್ಥಾನದ ವಠಾರ ಉಜ್ಜೋಡಿ ಯಲ್ಲಿ ಜರಗಿತು. ಸಮಾರಂಭವನ್ನು ಶ್ರೀನಿವಾಸ ಬಂಗೇರ ಉಜ್ಜೋಡಿ ಉಧ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಅವರು ಮಾತನಾಡಿ ಯುವವಾಹಿನಿಯು ಜಾತಿ ಅಸಮಾನತೆಯನ್ನು ಹೋಗಲಾಡಿಸಿ ಯುವ ಜನತೆಯನ್ನು ಉತ್ತಮ ದಿಸೆಯಲ್ಲಿ ಕೊಂಡೊಯ್ಯುತ್ತಿದೆ ಸಂಘಟನೆಯಿಂದ ಇದು ಸಾಧ್ಯ ಗೆಜ್ಜೆಗಿರಿಯ ಶಿಲಾನ್ಯಾಸ ಸಂದರ್ಭ ಕೆಲವೇ […]

Read More

ಯುವವಾಹಿನಿ ಕುಟುಂಬದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ

ಕಂಕನಾಡಿ : ಯುವವಾಹಿನಿ ಎಂಬುದು ನಮ್ಮ ಕುಟುಂಬ. ನಾವು ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸಮಾಜ ಸೇವೆ ಸಲ್ಲಿಸಿದಾಗ ಅದರ ಉತ್ತಮ ಫಲ ನಮಗೆ ಖಂಡಿತವಾಗಿಯೂ ದೊರೆಯುತ್ತದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ಹೇಳಿದರು. ದಿನಾಂಕ 17-3-2019ನೇ ಆದಿತ್ಯವಾರದಂದು ತಣ್ಣೀರುಬಾವಿ ಟ್ರೀ ಪಾರ್ಕಲ್ಲಿ ಜರುಗಿದ ಯುವವಾಹಿನಿ (ರಿ.) ಕಂಕನಾಡಿ ಘಟಕದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿ ಉದ್ಘಾಟಿಸಿ ಸದಸ್ಯರು ಯುವವಾಹಿನಿಯಲ್ಲಿ […]

Read More

ಯುವವಾಹಿನಿ (ರಿ) ಕಂಕನಾಡಿ ಘಟಕದಿಂದ ಶೈಕ್ಷಣಿಕ ನೆರವು

ಕಂಕನಾಡಿ : ಯುವವಾಹಿನಿ (ರಿ) ಕಂಕನಾಡಿ ಘಟಕವು ಮಕ್ಕಳ ದಿನಾಚರಣೆ ಪ್ರಯುಕ್ತ ದಿನಾಂಕ 16-11-2018ರಂದು ಮಂಗಳೂರಿನ ಗೋರಿಗುಡ್ಡ ಕಿಟ್ಟೆಲ್ ಮೆಮೋರಿಯಲ್ ಶಾಲಾ ಬಡ ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ ಕಂಕನಾಡಿ ಘಟಕದ ಸದಸ್ಯರು ಹಾಗೂ ಅದೇ ಶಾಲೆಯ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಹತ್ತು ಸಾವಿರ ರೂಪಾಯಿ ಶೈಕ್ಷಣಿಕ ನೆರವು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್, ಕಾರ್ಯದರ್ಶಿ ಸುಮಾ ವಸಂತ್, ಸದಸ್ಯೆ ಚಂದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!