Yuvavahini

ಕೂಳೂರು

ಭಜನೆಯ ಪೂರ್ಣ ಫಲ ಪಡೆಯಬೇಕಾದರೆ ಪ್ರತಿಯೊಂದು ಪದದ ಅರ್ಥ ಅರಿತು ಸ್ತುತಿಸಿದಾಗ ಭಗವಂತನಿಗೆ ತಲುಪಲು ಸಾಧ್ಯ. ಪರಮಾತ್ಮನ ಮೇಲೆ ನಮಗಿರುವ ಪ್ರೀತಿ, ಭಕ್ತಿ ವ್ಯಕ್ತಪಡಿಸುವುದೇ ಸಂಕೀರ್ತನೆಯ ಸಾರ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 51ನೇ ಭಜನಾ ಕಾರ್ಯಕ್ರಮವು ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಇವರ ಮನೆಯಲ್ಲಿ ದಿನಾಂಕ 30-08-2024 ಶುಕ್ರವಾರದಂದು ಸಂಜೆ 7.00 ಗಂಟೆಗೆ ಸರಿಯಾಗಿ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. 7.00 ಗಂಟೆಯಿಂದ ಸರಿ ಸುಮಾರು […]

Read More

ಗುರು ಜಯಂತಿ

ಕೂಳೂರು : ಬ್ರಹ್ಮಶ್ರೀ ನಾರಾಯಣ ಗುರು ವರ್ಯರ 170 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಸಮಾಜ ಸೇವಾ ನಿರ್ದೇಶಕರು ಜಯಲಕ್ಷ್ಮಿ ಇವರ ಸಂಚಾಲಕತ್ವದಲ್ಲಿ ದಿನಾಂಕ 20-08-2024 ರಂದು ಸಂಜೆ ಚಿರಂತನ ಚಾರಿಟೇಬಲ್ ಟ್ರಸ್ಟ್ ಇಡ್ಯಾ ಸುರತ್ಕಲ್ ಇಲ್ಲಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಇಂದಿರಾ ಸುರೇಶ್ ವಹಿಸಿದ್ದರು. ನಾರಾಯಣ ಗುರುಗಳ ಭಾವಚಿತ್ರಕ್ಕೆ ಆಶ್ರಮದ ಹಿರಿಯರು ದಯಾನಂದ ಮೆಂಡನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ […]

Read More

ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸುಸಂದಭ೯ದಲ್ಲಿ ಧ್ವಜಾರೋಹಣವನ್ನು ಘಟಕದ ಮಾಗ೯ದಶ೯ಕರಾದ ಜಯಾನಂದ ಅಮೀನ್ ಇವರು ನಡೆಸಿಕೊಟ್ಟರು. ನಂತರ ಮಾಗ೯ದಶ೯ಕರು ಮಾತನಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಈ ದಿನ ನೆನಪುಮಾಡಿ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು. ವೇದಿಕೆಯಲ್ಲಿದ್ದ ಮಾಜಿ ಸೇನಾನಿ ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಮಾತನಾಡಿ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟ ಮಾಡಿ ಪ್ರಾಣತೆತ್ತ ಹೋರಾಟಗಾರರನ್ನು ನೆನಪು ಮಾಡಿಕೊಂಡು ನಮ್ಮಂತ ಸೈನಿಕರನ್ನು ಗುರುತಿಸಿಕೊಂಡು ಇಂದಿನ […]

Read More

ಯುವವಾಹಿನಿ ಕೂಳೂರು ಘಟಕ – ಕಾರ್ಗಿಲ್ ವಿಜಯ್ ದಿವಸ್ , ಪ್ರತಿಭಾ ಪುರಸ್ಕಾರ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 31-07-2024 ರಂದು ಜರುಗಿದ ಕಾರ್ಗಿಲ್ ವಿಜಯ್ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು . ತಮ್ಮ ಸೈನ್ಯ ಜೀವನದ ಅನುಭವಗಳನ್ನು ಹಾಗೇ ಕೆಲವೊಂದು ಕಷ್ಟದ ಸಮಯದ ಸನ್ನಿವೇಶಗಳನ್ನು ಭಾವುಕರಾಗಿ ಹಂಚಿಕೊಂಡರು. ಯುವಕರು ಸೇನೆಗೆ ಸೇರಲು ಇಚ್ಛಿಸಿದರೆ ದಯವಿಟ್ಟು ಕೈಗಳಿಗೆ ಹಚ್ಚೆ ಹಾಕಬೇಡಿ , ಹಲ್ಲು ಕೀಳಬೇಡಿ, ಸೇನೆಗೆ ಸೇರಲು ದೈಹಿಕ ಸಾಮರ್ಥ್ಯ ಅಗತ್ಯವಾಗಿರುತ್ತದೆ ಎಂದು ಕಿವಿ ಮಾತು […]

Read More

ಪರಿಸರ ಸಂರಕ್ಷಣೆಯ ಮೊದಲ ಹೆಜ್ಜೆ ಮನೆಯಿಂದಲೇ

ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 10-07-2024 ಬುಧವಾರದಂದು ಪ್ರಕೃತಿ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಮತ್ತು ಹೆತ್ತವರ ಪಾತ್ರ ಎನ್ನುವ ವಿಚಾರದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ, ನಮ್ಮ ಟಿ.ವಿ ಚಾನೆಲ್ ನಲ್ಲಿ ಪ್ರಸಾರವಾಗುವ ನಮ್ಮ ರುಚಿ ಕಾರ್ಯಕ್ರಮದ ನಿರೂಪಕಿ ಸುಕನ್ಯಾ ಇವರು ಆಗಮಿಸಿದ್ದರು. ಇವರನ್ನು ಕೋಶಾಧಿಕಾರಿ ವಿಘ್ನೇಶ್ ಹೂ ಕೊಟ್ಟು ಸಭೆಗೆ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಇವರು ಪರಿಸರ ಸಂರಕ್ಷಣೆ ಎಂದರೆ ಕೇವಲ ಗಿಡ ಮರಗಳನ್ನು ನೆಟ್ಟು ಬೆಳೆಸುವುದಲ್ಲ. ನೆಟ್ಟ ಗಿಡಗಳನ್ನು ನೀರು […]

Read More

ಅಂಚೆ ಇಲಾಖೆ – ಮಾಹಿತಿ ಕಾರ್ಯಕ್ರಮ

ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 03-07-2024 ರಂದು ನಡೆದ ಅಂಚೆ ಇಲಾಖೆಯ ಸೇವೆ ಹಾಗೂ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು. ಯತೀನ್ ಕುಮಾರ್ ಡೆವಲಪ್ಮೆಂಟ್ ಆಫೀಸರ್ ಅಂಚೆ ಇಲಾಖೆ ಮಂಗಳೂರು ಇವರು ಮಾಹಿತಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಅಂಚೆ ಇಲಾಖೆಯ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಅಂಚೆ ಇಲಾಖೆ ಈಗ ಹಿಂದಿನಂತಿಲ್ಲ. ಆಧುನಿಕ ಜಗತ್ತಿಗೆ ಸರಿಯಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಪೈಪೋಟಿ ನೀಡುತ್ತಿದೆ. ಇವುಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ, ಪೋಸ್ಟ್ ಆಫೀಸ್ ಠೇವಣಿ […]

Read More

ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ

ಕೂಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 21-06-2024 ಶುಕ್ರವಾರದಂದು ಸಂಜೆ 6.00 ಗಂಟೆಗೆ ಸರಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಮಮತಾ ಇವರ ಸಂಚಾಲಕತ್ವದಲ್ಲಿ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎನ್ನುವ ಕಾರ್ಯಕ್ರಮವನ್ನು ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಶಿಕ್ಷಕರಾಗಿ ವಿಶು ಕುಮಾರ್ ಆಗಮಿಸಿದ್ದರು. ವೇದಿಕೆಯಲ್ಲಿ ಸಹ ಶಿಕ್ಷಕರಾಗಿ ಶ್ರೀಮತಿ ರೇಖಾ ಹಾಗೂ ಘಟಕದ ಸದಸ್ಯರಾದ ಜಗದೀಶ್ ಮತ್ತು […]

Read More

ಮನೆ ಮನೆ ಭಜನೆ

ಮಂಗಳೂರು: ಭಜನೆ ಹಾಗೂ ಭಜಕರಲ್ಲಿ ಮೇಲು ಕೀಲು, ಬಡವ ಬಲ್ಲಿದ, ಬ್ರಾಹ್ಮಣ ದಲಿತ, ಪಂಡಿತ ಪಾಮರ ಎಂಬ ತಾರತಮ್ಯವಿಲ್ಲ. ಒಟ್ಟಿಗೆ ಕುಳಿತು ಸರ್ವ ನಾಮದಲ್ಲಿ ಏಕ ದೇವರನ್ನು ಕಾಣುವುದು ಭಜನೆಯಲ್ಲಿ ಮಾತ್ರ. ದೇವಸ್ಥಾನದಲ್ಲಿ ದೇವರ ಸ್ಥಾನ ಗರ್ಭಗುಡಿಯಾದರೆ, ಭಜನಾ ಮಂದಿರದಲ್ಲಿ ದೇವರ ಸ್ಥಾನ ಭಜಕನ ಹೃದಯದಲ್ಲಿ ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ […]

Read More

ಸೇವಾ ನಿಧಿ

ಕೂಳೂರು: ಭಾಗ್ಯಗಳು ಯಾವತ್ತೂ ಒಂದೇ ರೀತಿ ಇರುವುದಿಲ್ಲ ತಿರುಗುವ ಚಕ್ರದ ಪರಿಧಿಯಂತೆ ಏಳು ಬೀಳುಗಳು ಸಹಜ. ಉಳ್ಳವರು ಇಲ್ಲದವರಿಗೆ ಆಸರೆ ಆಗಬೇಕಾದುದು ಮಾನವೀಯ ಧರ್ಮ. ಪಂಜಿಮೊಗರು ವಿದ್ಯಾನಗರ ನಿವಾಸಿ ದೀಪಕ್ ಇವರಿಗೆ ಬಾಯಿಯ ಕ್ಯಾನ್ಸರ್ ಖಾಯಿಲೆ ಇದ್ದು ,ಇವರ ಇಬ್ಬರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಕೂಡ ಬಹಳ ಕಷ್ಟಕರವಾಗಿರುವುದ್ದು ನಮ್ಮ ಘಟಕದ ನೆರವು ಕೋರಿದ್ದರು. ಹಾಗಾಗಿ ಘಟಕದ ವತಿಯಿಂದ ದಿ. 13-05-2024 ರಂದು ಇವರ ಕುಟುಂಬದ ನೆರವಿಗೆ ಬೇಕಾಗಿ ಸೇವಾ ನಿಧಿ ಯೋಜನೆಯ ಅಡಿಯಲ್ಲಿ ರೂ. 15000 ಧನ […]

Read More

ಮನೆ‌ ಮನೆ ಭಜನೆ

ಮಂಗಳೂರು: ಭಜನೆ ಎಂಬ ಪದಕ್ಕೆ ವಿಶೇಷ ಅರ್ಥವಿದೆ. ‘ಭ’ ಎಂದರೆ ಭಗವಂತ, ‘ಜ’ ಎಂದರೆ ಜನ್ಮಾಂತರ, ‘ನೆ’ ಎಂದರೆ ನೆನೆಯುವುದು. ಜನ್ಮಜನ್ಮಾಂತರಗಳಿಂದ ಮಾಡಿದ ಪಾಪವನ್ನು ಕಳೆಯಲು ಹಾಗೂ ದೇವರನ್ನು ಒಲಿಸಿಕೊಳ್ಳಲು ಭಗವಂತನನ್ನು ಪೂಜಿಸುವುದೇ ಭಜನೆ. ಯುವವಾಹಿನಿ(ರಿ.) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮದ 47 ನೇ ಭಜನಾ ಕಾರ್ಯಕ್ರಮವು ಘಟಕದ ಸದಸ್ಯರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!