Yuvavahini

ಕೂಳೂರು

ಯುವವಾಹಿನಿ (ರಿ.) ಕೂಳೂರು ಘಟಕದಿಂದ 64ನೇ ‘ಮನೆ ಮನೆ ಭಜನೆ’ ಕಾರ್ಯಕ್ರಮ

ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ ನಿರಂತರ ‘ಮನೆ ಮನೆ ಭಜನೆ’ ಸರಣಿಯ 64ನೇ ಕಾರ್ಯಕ್ರಮವು ಇತ್ತೀಚೆಗೆ ಘಟಕದ ಪ್ರಥಮ ಉಪಾಧ್ಯಕ್ಷರಾದ ಮುಖೇಶ್ ಕುಮಾರ್ ಅವರ ನಿವಾಸದಲ್ಲಿ ಅತ್ಯಂತ ಭಕ್ತಿ-ಶ್ರದ್ಧೆಗಳಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮತ್ತು ಮಹೇಶ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ […]

Read More

ಶಿಕ್ಷಣ, ವಿಜ್ಞಾನ, ಕ್ರೀಡೆ, ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ -ಅಗಣ್ಯ

ಕುಳೂರು : ಮಹಿಳೆಯರು ಕೇವಲ ಸಾಂಸಾರಿಕ ಜೀವನದಲ್ಲಿ ಮಾತ್ರ ಸೀಮಿತವಾಗದೆ ಅಸೀಮಿತ ವಲಯದಲ್ಲಿ ಸಾಧನೆಗೆ ಹುಮ್ಮಸ್ಸು ತೋರಬೇಕು ,ಕನಸು ಕಟ್ಟಿ ಧೈರ್ಯದಿಂದ ನಿಮ್ಮ ಕ್ಷೇತ್ರದಲ್ಲಿ ಮುನ್ನುಗ್ಗಿದ್ದರೆ ಸಮಾಜ ತಾನಾಗೇ ಗುರುತಿಸಲಿದೆ ಎಂದು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಉಪ ಪರಿಶೋಧಕರಾದ ಶ್ರೀಕಲಾ ಕೆ.ಟಿ ತಿಳಿಸಿದರು. ಅವರು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಮಾರ್ಚ್ 18 ರಂದು ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಬಹಳ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. […]

Read More

ಯುವವಾಹಿನಿ ಕೂಳೂರು ಘಟಕದ ಸ್ನೇಹ ಸಮ್ಮಿಲನ

ಕಾಪು: ಸಮಾಜದ ಯುವ ಸಮುದಾಯವನ್ನು ಪರಸ್ಪರ ಸಂಪರ್ಕದಲ್ಲಿರಿಸಿ ಒಗ್ಗಟ್ಟಿನಿಂದ ಸಮಾಜ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ “ಸ್ನೇಹ ಸಮ್ಮಿಲನ–2026” ಕಾರ್ಯಕ್ರಮವನ್ನು ದಿನಾಂಕ 8-03-2026 ರಂದು ಕಾಪು ಸಮೀಪದ ನೆಕ್ಸಸ್ ಹೋಂಸ್ಟೇನಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಮಾರ್ಗದರ್ಶಕರಾದ ಚಂದಪ್ಪ ಸನಿಲ್ ಅವರು ಶ್ರೀ ಗುರುವರ್ಯರಿಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸ್ನೇಹದ ಮಹತ್ವವನ್ನು ವಿವರಿಸಿ, ಸದಸ್ಯರು ಪರಸ್ಪರ ಸಹಕಾರ ಮತ್ತು ಒಗ್ಗಟ್ಟಿನಿಂದ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಮುಂದುವರೆಸಬೇಕೆಂದು ಸಲಹೆ […]

Read More

ಗೆಜ್ಜೆಗಿರಿ ವಾರ್ಷಿಕ ಮಹೋತ್ಸವದಲ್ಲಿ ಯುವವಾಹಿನಿ ಕೂಳೂರು ಘಟಕ ಭಾಗಿ

ಮಂಗಳೂರು: ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಿಲ್‌ ಇಲ್ಲಿ ಜರುಗಿದ ವಾರ್ಷಿಕ ಮಹೋತ್ಸವ ಹಾಗೂ ನೇಮೋತ್ಸವ ಪುಣ್ಯ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ​ಸಮಾಜದ ಸಾಂಸ್ಕೃತಿಕ ಅಸ್ಮಿತೆಯ ತಾಣವಾಗಿರುವ ಗೆಜ್ಜೆಗಿರಿಗೆ ಸಂಘಟಿತವಾಗಿ ಭೇಟಿ ನೀಡಿದ ಘಟಕದ ತಂಡವು, ಕ್ಷೇತ್ರದ ದೈವಿಕ ವಿಧಿವಿಧಾನಗಳಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಣೆ ಮಾಡಿತು.

Read More

ಭಜನೆಯು ಸಂಸ್ಕಾರಯುತ ಬದುಕಿಗೆ ಪ್ರೇರಣೆ: ಕೂಳೂರು ಘಟಕದಿಂದ ಮನೆ-ಮನೆ ಭಜನೆ ಚಾಲನೆ

ಕೂಳೂರು: ಮನೆ-ಮನೆ ಭಜನೆಯು ಕುಟುಂಬದಲ್ಲಿ ಧಾರ್ಮಿಕ ಶ್ರದ್ಧೆ ಮತ್ತು ಒಗ್ಗಟ್ಟನ್ನು ಹೆಚ್ಚಿಸುತ್ತದೆ. ಯುವವಾಹಿನಿಯ ಇಂತಹ ಸತ್ಕಾರ್ಯಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ ಎಂದು ಸದಸ್ಯರು ಆಶಿಸಿದರು. ಸುಮಂಗಲ ಸಿ. ಕೋಟ್ಯಾನ್ ಅವರ ಮನೆಯಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಕ್ತಿಯಿಂದ ಪಾಲ್ಗೊಂಡಿದ್ದರು. ​ಯುವವಾಹಿನಿ ಕೂಳೂರು ಘಟಕದ ವತಿಯಿಂದ 2026-27ನೇ ಸಾಲಿನ ಪ್ರಥಮ ‘ಮನೆ-ಮನೆ ಭಜನೆ’ ಕಾರ್ಯಕ್ರದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.​ಇದೇ ಸುಸಂದರ್ಭದಲ್ಲಿ ಘಟಕದ ಮುಖವಾಣಿ […]

Read More

ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾಗಿ ಗೀತಾ ವಸಂತ್ ಆಯ್ಕೆ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೀತಾ ವಸಂತ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಗೀತಾ ವಸಂತ್ಪ್ರಥಮ ಉಪಾಧ್ಯಕ್ಷರು : ಮುಕೇಶ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ತುಳಸಿ ಸುಜೀರ್ಕಾರ್ಯದರ್ಶಿ : ವಂದೀಪ್ ಕೆ ಸುವರ್ಣಜೊತೆ ಕಾರ್ಯದರ್ಶಿ : ಮಮತಾ ಪುಷ್ಪರಾಜ್ಕೋಶಾಧಿಕಾರಿ : ಸುಮಾ ಶಿವುವ್ಯಕ್ತಿತ್ವ ವಿಕಸನ ನಿರ್ದೇಶಕರು : ವಿಪ್ಪೇಶ್ ಬೋಳೂರುಕ್ರೀಡಾ ನಿರ್ದೇಶಕರು : ಲೋಕೇಶ್ ಪೂಜಾರಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಶ್ವೇತಾ ರಾಹುಲ್ಆರೋಗ್ಯ ನಿರ್ದೇಶಕರು : […]

Read More

ಯುವವಾಹಿನಿ ಸ್ಥಾಪನಾ ಉದ್ದೇಶ ಅರಿತು ಮುನ್ನಡೆಯುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ : ವಿವೇಕಾನಂದ ಸುವರ್ಣ

ಕೂಳೂರು : ಯುವವಾಹಿನಿ ಸಂಸ್ಥೆಯು ಯಾವ ಉದ್ದೇಶದಿಂದ ಪ್ರಾರಂಭವಾಯಿತು ಎಂಬುದನ್ನು ಅರಿತು ಆ ದಿಕ್ಕಿನಲ್ಲಿ ಮುನ್ನಡೆಯುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದು ಶ್ರೀ ಕೃಷ್ಣ ಭಜನಾ ಮಂದಿರ, ವಿದ್ಯಾನಗರದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಸುವರ್ಣ ಹೇಳಿದರು. ಅವರು ದಿನಾಂಕ 18-01-2026ರಂದು ಕೂಳೂರು ಫಲ್ಗುಣಿ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ) ಕೂಳೂರು ಘಟಕದ ಪದಗ್ರಹಣ–2026 ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿರಿಯರು ಯುವವಾಹಿನಿ ಸಂಸ್ಥೆಯನ್ನು ಸ್ಥಾಪಿಸಿದ ಉದ್ದೇಶವನ್ನು ಅರಿತು ಯುವ ಪೀಳಿಗೆಯು ಮುಂದಿನ […]

Read More

ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಆಯ್ಕೆ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ನಡೆದ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶದ ಸಂದರ್ಭದಲ್ಲಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಯುವವಾಹಿನಿಯ 38 ನೇ ವಾರ್ಷಿಕ ಸಮಾವೇಶದಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಣೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೇಖಾಗೋಪಾಲ್, ಪ್ರಥಮ ಉಪಾಧ್ಯಕ್ಷರಾಗಿ ವಿದ್ಯಾ ರಾಕೇಶ್, ದ್ವಿತೀಯ ಉಪಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಕೋಶಾಧಿಕಾರಿಯಾಗಿ ಸತೀಶ್ ಕಿಲ್ಪಾಡಿ ಮೂಲ್ಕಿ, ಜತೆ ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ […]

Read More

ತುಳುನಾಡಿನ ದೀಪಾವಳಿ ಆಚರಣೆ -ಯುವವಾಹಿನಿ(ರಿ.)ಕೂಳೂರು ಘಟಕ

ದಿನಾಂಕ 30-10-2025 ನೇ ಗುರುವಾರ ಘಟಕದ ವತಿಯಿಂದ ಘಟಕದ ಸದಸ್ಯರಾದ ತುಕಾರಾಮ ಎಸ್ ಪೂಜಾರಿ ಮತ್ತು ಅನಿತಾ ತುಕಾರಾಮ್ ದಂಪತಿಗಳ ಮನೆಯಲ್ಲಿ ಜರುಗಿದ ನಮ್ಮ ಮನೆ ಹಬ್ಬ ದೀಪಾವಳಿ, ಕತ್ತಲಿನಿಂದ ಬೆಳಕಿನೆಡೆಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ತುಳುನಾಡಿನ ಹಿಂದಿನ ಆಚರಣೆಗಳ ವಿಶೇಷತೆ, ಮೂಲ ಅರ್ಥ, ನಮ್ಮ ಹಿರಿಯರು ದೀಪಾವಳಿ ಹಬ್ಬವನ್ನು ಹೇಗೆ ಆಚರಿಸಿಕೊಂಡು ಬಂದಿದ್ದಾರೆ ಎಂಬುದರ ಬಗ್ಗೆ ವಿವರಿಸಿದರು. ತುಳುನಾಡಿನ ದೀಪಾವಳಿ ಎಂದರೆ ಅದು ಭೂಮಿ ತಾಯಿ, ಪ್ರಕೃತಿ ಸಂಬಂಧದ ಅರಿವು ಮೂಡಿಸುವ ಸಲುವಾಗಿ ಆಚರಿಸಲಾಗುತ್ತಿತ್ತು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!