Yuvavahini

ವ್ಯಕ್ತಿತ್ವ ವಿಕಸನ

ಅತ್ಯುತ್ತಮ ಆರಂಭ, ಅಂತ್ಯ, ನಡುವೆ ಹೂರಣ ಅದೇ ಪರಿಣಾಮಕಾರಿ ಭಾಷಣ : ಸುಧಾಕರ್ ಕಾರ್ಕಳ

ಕೂಳೂರು : ಒಳ್ಳೆಯ ಆರಂಭ, ಒಳ್ಳೆಯ ಅಂತ್ಯ, ನಡುವೆ ಹೂರಣ ಅದೇ ಭಾಷಣ. ಎಂದು ಅಂತರರಾಷ್ಟ್ರೀಯ ಮಟ್ಟದ ಜೆಸಿಎ ತರಬೇತುದಾರರಾದ ಸುಧಾಕರ್ ಕಾರ್ಕಳ ತಿಳಿಸಿದರು. ಅವರು ದಿನಾಂಕ 23.06.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ ನಡೆದ ಯುವಚೈತನ್ಯ- 2019-20 ಈ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ಬಿಲ್ಲವ ಸಮುದಾಯದ ಉದ್ಧಾರಕ್ಕಾಗಿ ತಾನು ಇಂತಹ ತರಬೇತಿ ಕಾರ್ಯಕ್ರಮ ನಡೆಸಿಕೊಂಡು ಬಂದಿರುವುದಾಗಿಯೂ, ಮುಂದಿನ ದಿನಗಳಲ್ಲಿ ನಮ್ಮ ಸಮುದಾಯದವರೂ ಉತ್ತಮ ತರಬೇತುದಾರರಾಗಬೇಕು ಎಂದು ಆಶಿಸಿದರು. ಇವರ ಜೊತೆ ಇನ್ನೋರ್ವ ಜೆಸಿಎ ತರಬೇತುದಾರರಾದ […]

Read More

ಪ್ರೇರಣಾ ನಮ್ಮಿಂದ ನಮಗಾಗಿ

ಬೆಳ್ತಂಗಡಿ : ಯುವವಾಹಿನ (ರಿ) ಬೆಳ್ತಂಗಡಿ ಘಟಕದ ಮಹಿಳಾ ಸದಸ್ಯರಿಗೆ ಮತ್ತು ಘಟಕದ ಕಾರ್ಯಕರ್ತರಿಗಾಗಿ ಪ್ರೇರಣಾ ನಮ್ಮಿಂದ ನಮಗಾಗಿ ಎಂಬ ಕಾರ್ಯಕ್ರಮವನ್ನು ದಿನಾಂಕ:23/06/2019 ರಂದು ಮಧ್ಯಾಹ್ನ ಗಂಟೆ 2.30 ಕ್ಕೆ ಸುವರ್ಣ ಆರ್ಕೇಡ್ ಬೆಳ್ತಂಗಡಿಯಲ್ಲಿ ನಡೆಯಿತು.ಮಹಿಳಾ ಸಮಿತಿಯ ಪ್ರಧಾನ ಸಂಚಾಲಕರು ಸುಜತಾ ಅಣ್ಣಿ ಪೂಜಾರಿ ಅವರ ಸ್ವಾಗತ ಭಾಷಣದೊಂದಿಗೆ ಪ್ರೇರಣೆಯ ಉದ್ಘಾಟನೆಯನ್ನು ಶ್ರೀಮತಿ ಸೇವಂತಿ (ಸಮೂಹ ಸಂಪನ್ಮೂಲ ವ್ಯಕ್ತಿ C R P ಪರೊಡಿತ್ತಾಯ ಕಟ್ಟೆ ಬಜಿರೆ )ಇವರು ದೀಪ ಬೆಳಗಿಸಿ ಹೆಣ್ಣು ಸಮಾಜದ ಪ್ರೇರಣಾ ಶಕ್ತಿಯಾಗಿ […]

Read More

ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವು ದಿನಾಂಕ . 14.06.2019ರ ಶುಕ್ರವಾರ ಮೊರಾರ್ಜಿ ದೇಸಾಯಿ ಶಾಲೆ ಮಿಯ್ಯಾರು ಇಲ್ಲಿ ನಡೆಯಿತು. ಕಾರ್ಯಾಗಾರದ ಉದ್ಘಾಟನೆಯನ್ನು ಮಿಯ್ಯಾರು ಬಿಲ್ಲವ ಸಂಘದ ಗ್ರಾಮ ಸಮಿತಿ ಅಧ್ಯಕ್ಷರಾದ ಗಣೇಶ ಪೂಜಾರಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಘಟಕದ ಉಪಾಧ್ಯಕ್ಷರಾದ ತಾರಾನಾಥ ಕೋಟ್ಯಾನ್‍ರವರು ವಹಿಸಿದ್ದರು. ರಾಷ್ಟ್ರೀಯ ತರಬೇತುದಾರ ಹಾಗೂ ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ ತರಬೇತಿಯನ್ನು ನಡೆಸಿಕೊಟ್ಟರು. ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್‍ರವರು ಮುಖ್ಯ […]

Read More

ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ಯುವ ಸ್ಪೂರ್ತಿ 2018-19

ಮಾಣಿ : ದಿನಾಂಕ 16-06-2019ರಂದು ಯುವವಾಹಿನಿ(ರಿ.)ಮಾಣಿ ಘಟಕದ ವತಿಯಿಂದ ಸ.ಹಿ.ಪ್ರಾ.ಶಾಲೆ ಗಡಿಯಾರ, ಕೆದಿಲ ಇಲ್ಲಿ ಯುವ ಸ್ಪೂರ್ತಿ 2018-19 ಪರಿಣಾಮಕಾರಿ ಭಾಷಣ ಕಲೆ, ಸಂವಹನ ಮತ್ತು ಮಾನಸಿಕ ಆರೋಗ್ಯ ಹಾಗೂ ವ್ಯಕ್ತಿತ್ವ ವಿಕಸನ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಯಿತು. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು.ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು,ನಿವೃತ್ತ ಸಿಎ ಬ್ಯಾಂಕ್ ಉದ್ಯೋಗಿ ಸೋಮಪ್ಪ ಪೂಜಾರಿ ಮಾದೆಲು, ,ಮಾಣಿ ಘಟಕ ಸಲಹೆಗಾರ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ , ಗಡಿಯಾರ […]

Read More

ಐದು ದಿನಗಳ ಮಕ್ಕಳ ಬೇಸಿಗೆ ಶಿಬಿರ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 06.05.2019 ರಿಂದ 10.05.2019 ರವರೆಗೆ ಐದು ದಿನಗಳ ಬೇಸಿಗೆ ಶಿಬಿರವು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಜಿತೇಂದ್ರ ಜೆ.ಸುವರ್ಣ ಶಿಬಿರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಚಿತ್ರಶ್ರೀ ಮನೋಜ್,ತಸಲೀಮ, ಕುಂಬ್ಳೆ ಗೋಪಾಲ ಕೃಷ್ಣಭಟ್, ವಿದ್ಯಾ ರಾಕೇಶ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಮಿಮಿಕ್ರಿ, ವಾಲ್ ಪತ್ರಿಕೆ, ಗ್ಲಾಸ್ ಪೈಂಟಿಂಗ್, ಪ್ಲವರ್ ಮೇಕಿಂಗ್ , ಕಸದಿಂದ ರಸ ಹೀಗೆ […]

Read More

ಸಾಧನೆಗೆ ಕಲಿಕೆಯ ಅಂಕವೊಂದೇ ಮಾನದಂಡವಲ್ಲ

ಯಡ್ತಾಡಿ : ಯುವವಾಹಿನಿ(ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ ಐದು ದಿನಗಳ ಕಾಲ ನಡೆಸಿದ ಬೇಸಿಗೆ ಶಿಬಿರ, ವಿಕಸನ 2019 (ಅರಿವಿನ ತಂಗಾಳಿ) ರ ಅಂಗವಾಗಿ, ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಮಾಡಿಸಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಸಫಲತೆಯೊಂದೇ ಸಾಧನೆಯ ಮಾನದಂಡವಾಗಿ ರೂಪುಗೊಳ್ಳುತ್ತಿದ್ದು, ಇದು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಕಳವಳಕಾರಿಯಾದ ಅಂಶವಾಗಿದೆ. ಶೈಕ್ಷಣಿಕ ಸಾಧನೆಗೆ ಹೊರತಾಗಿಯೂ ಶ್ರಮವಹಿಸಿ ದುಡಿದರೆ ಸಮಾಜದಲ್ಲಿ ಶ್ರೇಷ್ಠ ಸಾಧನೆ ಮಾಡಬಹುದೆಂಬ ವಿಷಯ ಮನವರಿಕೆ ಮಾಡಲು ಪ್ರತಿ […]

Read More

ವಿಕಸನ 2019 – ಅರಿವಿನ ತಂಗಾಳಿ

  ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಸಾರಥ್ಯದಲ್ಲಿ ವಿದ್ಯಾರ್ಥಿಗಳಿಗಾಗಿ ಸತತವಾಗಿ 7ನೇ ವರ್ಷದ ಐದು ದಿನಗಳ ಮಕ್ಕಳ ಉಚಿತ ಬೇಸಿಗೆ ಶಿಬಿರ, ವಿಕಸನ – 2019, ಅರಿವಿನ ತಂಗಾಳಿ ಕಾರ್ಯಕ್ರಮ ದಿನಾಂಕ 21-04-2019 ರಿಂದ 25-04-2019 ರವರೆಗೆ ಅತ್ಯಂತ ಯಶಸ್ವಿಯಾಗಿ ಜರಗಿತು. ನರೇಂದ್ರ ಕುಮಾರ್ ಕೋಟಾ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ ಏಳು ಜನ ಸಂಪನ್ಮೂಲ ವ್ಯಕ್ತಿಗಳು 83 ಜನ ವಿದ್ಯಾರ್ಥಿಗಳನ್ನು ವಿವಿಧ ರೀತಿಯ ಚಟುವಟಿಕೆಗಳಿಂದ ರಂಜಿಸುವ ಜೊತೆ ಅವರ ವ್ಯಕ್ತಿತ್ವ ವಿಕಸನದಲ್ಲಿ ಪರಿಣಾಮಕಾರಿಯಾದ […]

Read More

ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 07/04/2019 ರಂದು ಘಟಕದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ (ರಿ) ಕಾರ್ಕಳ ಘಟಕದ ಅಧ್ಯಕ್ಷ ಸುಧಾಕರ್ ಕಾರ್ಕಳ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸುಮಾರು 50 ಮಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ನಾರಾಯಣ ಬಿ ಎಸ್ , ಹಾಗೂ ಮಾಜಿ ಅಧ್ಯಕ್ಷ ರು […]

Read More

ಸ್ಪೂರ್ತಿ…. ಇದು ಯುವವಾಹಿನಿಯ ಮಾರ್ಗದರ್ಶಿಯೆಡೆಗೆ

ಬೆಳ್ತಂಗಡಿ :ತಳ ಮಟ್ಟದಲ್ಲಿ ಇರುವ ಯುವ ಸಮುದಾಯವನ್ನು ಮೇಲೆತ್ತುವ ಕೆಲಸವಾಗಬೇಕು ಎಂದು ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಸಲಹೆಗಾರರು ರಮಾನಂದ ಸಾಲಿಯನ್ ಮೂಂಡುರು ಹೇಳಿದರು. ಅವರು ಮಾ.08 ರಂದು ಸುವರ್ಣ ಆರ್ಕೇಡ್ ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ನಡೆದ ಸ್ಪೂರ್ತಿ…. ಇದು ಯುವವಾಹಿನಿಯ ಮಾರ್ಗದರ್ಶಿಯೆಡೆಗೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಘಟಕವು ಬೆಳ್ತಂಗಡಿಯಲ್ಲಿ ನೋಂದವರ ಪರವಾಗಿ ಹಾಗೂ ಅಶಕ್ತರಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತಿದ್ದು ಹೋರಾಟದ ಮೂಲಕ ಕಳೆದ 5 […]

Read More

ವ್ಯಕ್ತಿತ್ವ ರೂಪಿಸುವ ಶಕ್ತಿಗಳಿಗೆ ಪ್ರೇರಣೆ : ಲಯನ್ ದೇವದಾಸ್ ಭಂಡಾರಿ

ಮಂಗಳೂರು : ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ, ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿ ಪ್ರೀಯತೆ , ಪರೋಪಕಾರ ಬುದ್ಧಿ, ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು. ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂಬುದು ಅರ್ಥವಾಗುತ್ತದೆ. ಹೂವಿಗೆ ಪರಿಮಳವಿದ್ದಂತೆ, ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ, ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!