09-03-2026, 8:00 PM
ಮಂಗಳೂರು: ದಿನಾಂಕ 09-03-2026 ನೇ ಸೋಮವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಯುವವಾಹಿನಿ (ರಿ.) ಕಂಕನಾಡಿ ಘಟಕದ ಸಹಯೋಗದೊಂದಿಗೆ ಭಕ್ತಿಭಾವದಿಂದ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Read More
08-03-2026, 9:15 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಏಳು ದಿನಗಳ ರಾಜಸ್ಥಾನ ಪ್ರವಾಸವು ಅತ್ಯಂತ ಯಶಸ್ವಿಯಾಗಿ ಹಾಗೂ ಸ್ಮರಣೀಯವಾಗಿ ಸಂಪನ್ನಗೊಂಡಿತು. ಪ್ರವಾಸದ ಹಾದಿ ಮತ್ತು ಪ್ರಮುಖ ಕ್ಷಣಗಳು:ಮಾರ್ಚ್ 2, 2026 ರಂದು ಆರಂಭವಾದ ಈ ಪ್ರವಾಸದಲ್ಲಿ ಒಟ್ಟು 24 ಸದಸ್ಯರ ತಂಡ ಭಾಗವಹಿಸಿತ್ತು. ಬೊಳ್ಳಿ ಟೂರಿಸಂ ಸಹಯೋಗದೊಂದಿಗೆ ಆಯೋಜಿಸಲಾದ ಈ ಪ್ರವಾಸದ ಪ್ರಮುಖ ಹಂತಗಳು ಇಲ್ಲಿವೆ:ಜೈಪುರ ದರ್ಶನ: ಮಂಗಳೂರಿನಿಂದ ಬೆಂಗಳೂರು ಮೂಲಕ ವಿಮಾನದ ಮೂಲಕ ಜೈಪುರ ತಲುಪಿದ ತಂಡವು, ಅಲ್ಲಿನ ಐತಿಹಾಸಿಕ ಹವಾ […]
Read More
08-03-2026, 9:00 PM
ಪಣಂಬೂರು: “ಇಂದಿನ ಬದಲಾದ ಜೀವನಶೈಲಿ ಮನುಷ್ಯನನ್ನು ರೋಗಗಳ ಗೂಡಾಗಿಸುತ್ತಿದೆ. ಅನಿಯಮಿತ ಆಹಾರ ಪದ್ಧತಿ ಮತ್ತು ವ್ಯಾಯಾಮದ ಕೊರತೆಯಿಂದ ಆಯುಷ್ಯ ಕ್ಷೀಣಿಸುತ್ತಿರುವುದು ಆತಂಕಕಾರಿ ಸಂಗತಿ. ಆರೋಗ್ಯಕರ ಬದುಕಿಗಾಗಿ ದಿನದ 24 ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯನ್ನಾದರೂ ಯೋಗಾಭ್ಯಾಸಕ್ಕೆ ಮೀಸಲಿಡುವುದು ಅನಿವಾರ್ಯ,” ಎಂದು SPYSS(R) ಜಿಲ್ಲಾ ಸಂಯೋಜಕಿ ಕನಕಾ ಮೋಹನ್ ತಿಳಿಸಿದರು. ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾರ್ಚ್ 8ರ ಭಾನುವಾರ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆರೋಗ್ಯ ಪದ್ಧತಿಯ […]
Read More
08-03-2026, 9:00 PM
ಮಂಗಳೂರು: “ಒಬ್ಬ ಸುಸಂಸ್ಕೃತ ಮಹಿಳೆ ತನ್ನ ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ದೇಶ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಹೆಣ್ಣು ತಾನು ಹುಟ್ಟಿದ ಮನೆ ಹಾಗೂ ಸೇರಿದ ಗಂಡನ ಮನೆಯ ಹಿತ ಬಯಸುವವಳು,” ಎಂದು ಡಿವೈನ್ ಪಾರ್ಕ್ನ ಮಹಿಳಾ ಮೇಲ್ಮೈ ಅಧಿಕಾರಿ ಪ್ರೇಮ ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.ಅವರು ದಿನಾಂಕ 08-03-2026 ರಂದು ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. […]
Read More
08-03-2026, 8:00 PM
ಕಾಪು: ಸಮಾಜದ ಯುವ ಸಮುದಾಯವನ್ನು ಪರಸ್ಪರ ಸಂಪರ್ಕದಲ್ಲಿರಿಸಿ ಒಗ್ಗಟ್ಟಿನಿಂದ ಸಮಾಜ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ “ಸ್ನೇಹ ಸಮ್ಮಿಲನ–2026” ಕಾರ್ಯಕ್ರಮವನ್ನು ದಿನಾಂಕ 8-03-2026 ರಂದು ಕಾಪು ಸಮೀಪದ ನೆಕ್ಸಸ್ ಹೋಂಸ್ಟೇನಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಮಾರ್ಗದರ್ಶಕರಾದ ಚಂದಪ್ಪ ಸನಿಲ್ ಅವರು ಶ್ರೀ ಗುರುವರ್ಯರಿಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸ್ನೇಹದ ಮಹತ್ವವನ್ನು ವಿವರಿಸಿ, ಸದಸ್ಯರು ಪರಸ್ಪರ ಸಹಕಾರ ಮತ್ತು ಒಗ್ಗಟ್ಟಿನಿಂದ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಮುಂದುವರೆಸಬೇಕೆಂದು ಸಲಹೆ […]
Read More
08-03-2026, 8:00 PM
ಪಡುಬಿದ್ರಿ : ದಿನಾಂಕ 08/03/2026 ರಂದು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವನ್ನು ಮುಲ್ಕಿಯ ಚೆನ್ನಯ ಕುದುರುದಲ್ಲಿರುವ ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್ನಲ್ಲಿ ಆಯೋಜಿಸಲಾಯಿತು.ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಾಗಿ ಕೇಂದ್ರ […]
Read More
08-03-2026, 1:00 PM
ಕುಳಾಯಿ : ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ದಿನಾಂಕ 08.03.2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕುಳಾಯಿ, ಮಹಿಳಾ ಮಂಡಲ (ರಿ) ಕುಳಾಯಿ, ತಿರಂಗ ಟ್ರಸ್ಟ್ (ರಿ) ಮಂಗಳೂರು, ಶ್ರೀನಿವಾಸ ಆಸ್ಪತ್ರೆ ಮುಕ್ಕ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ನಡೆಯಿತು. ಮಹಿಳಾ ದಿನಾಚರಣೆಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ರೋಗಿಗಳ ಪ್ರಾಣ ಉಳಿಸುವ ಉದಾತ್ತ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶ್ರೀನಿವಾಸ […]
Read More
08-03-2026, 11:00 AM
ಬೆಂಗಳೂರು: “ಇಂದಿನ ಯುವ ಪೀಳಿಗೆ ಮತ್ತು ಮಹಿಳೆಯರು ಸೋಶಿಯಲ್ ಮೀಡಿಯಾವನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣಗಳು ಕೇವಲ ಮನೋರಂಜನೆಗೆ ಸೀಮಿತವಾಗದೆ, ಜ್ಞಾನಾರ್ಜನೆ ಮತ್ತು ಸಮಾಜದ ಏಳಿಗೆಗೆ ಪೂರಕವಾಗಿರಲಿ,” ಎಂದು ಬೆಂಗಳೂರು ನಗರದ ಸಹಾಯಕ ಪೊಲೀಸ್ ಆಯುಕ್ತರಾದ (ACP) ರೀನಾ ಸುವರ್ಣ ಅವರು ಕಿವಿಮಾತು ಹೇಳಿದರು. ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 08.03.2026 ರಂದು ಇತ್ತೀಚೆಗೆ ನಗರದ ಕರ್ನಾಟಕ ಗವರ್ನ್ಮೆಂಟ್ ಸೆಕ್ರೆಟೇರಿಯಟ್ ಕ್ಲಬ್ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ […]
Read More
08-03-2026, 9:17 AM
ಬಜಪೆ: ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ವತಿಯಿಂದ ಮೇಘೆ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದಿನಾಂಕ 03-03-2026, ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 4 ಗಂಟೆಗೆ ಕೆಂಜಾರು ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ “ಓಂ ಗುರುಭ್ಯೋ ನಮಃ” ಎಂಬ ಗುರುಸ್ಮರಣೆಯೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಘಟಕದ ಸದಸ್ಯರು ಹಾಗೂ ಭಕ್ತಾದಿಗಳು ಸೇರಿ ಒಟ್ಟು 15 ಮಂದಿಯ ತಂಡವು ಪಾದಯಾತ್ರೆಯ ಮೂಲಕ ಕಟೀಲು ಕ್ಷೇತ್ರವನ್ನು ತಲುಪಿ, ಅಮ್ಮನವರ ದರ್ಶನ ಪಡೆದು […]
Read More
02-03-2026, 9:00 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 02-03-2026, ಸೋಮವಾರದಂದು ನೆರವೇರಿತು. ಈ ವಾರದ ಭಜನಾ ಸೇವೆಯನ್ನು ಅಶೋಕ್ ನಗರ ದಂಬೇಲ್ನ ವೆಂಕಟೇಶ್ ರಾವ್ ಮತ್ತು ಬಳಗದವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಭಕ್ತಿಪ್ರಧಾನವಾದ ಸಂಕೀರ್ತನೆಗಳ ಮೂಲಕ ನೆರೆದಿದ್ದ ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೇವರ […]
Read More