Yuvavahini

ಇತರೆ

ಯುವವಾಹಿನಿ ಯುವಜನತೆಯ ಸ್ಪೂರ್ತಿ : ಹರೀಶ್ ಕೆ.ಪೂಜಾರಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಯುವಕರ ಆಕರ್ಷಣೆಯ ಮೂಲಕ ಯುವಜನತೆಯಲ್ಲಿ ಹೊಸ ಸ್ಪೂರ್ತಿ ತುಂಬಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು. ಅವರು 2024 ಫೆಬ್ರವರಿ 20 ರಂದು ಮಂಗಳೂರಿನ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ ಮಂಗಳೂರು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಶ್ರೀನಿವಾಸ್ ಬಲ್ಕ್ ಕ್ಯಾರಿಯರ್ ಇದರ ಮಾಲೀಕರಾದ ಲೋಕೇಶ್ ಆರ್ ಅಮೀನ್ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು, ಕೇಂದ್ರ […]

Read More

ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ: ಭಾವುಕರಾಗಿ ನುಡಿದ ಎಸಿಪಿ ಮಹೇಶ್‌ಕುಮಾರ್

ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ ಅವರು ನೂರುಪಟ್ಟು ಪ್ರೀತಿ ತೋರಿಸುತ್ತಾರೆ. ಹೀಗೆ ಭಾವುಕರಾಗಿ ನುಡಿದವರು ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್‌ಕುಮಾರ್. ಕೊಡಗಿಗೆ ವರ್ಗಾವಣೆಗೊಂಡ ಅವರನ್ನು ಮಂಗಳೂರು ನಾಗರಿಕ ಸಮಿತಿ ವತಿಯಿಂದ ಭಾನುವಾರ ಆಯೋಜಿಸಲಾದ ಅದ್ದೂರಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಪೊಲೀಸ್ ಕೆಲಸದ ಜತೆಗೆ ಸಾಮಾಜಿಕ ಚಟುವಟಿಕೆಯಿಂದ ನಾನು ಜೀವನದಲ್ಲಿ ಖುಷಿ ಕಂಡಿದ್ದೇನೆ. ಮಂಗಳೂರು ಸರ್ವಧರ್ಮಗಳ ನೆಲೆಬೀಡು ಆಗಬೇಕು ಎನ್ನುವುದು ನಮ್ಮೆಲ್ಲರ […]

Read More

ಯೂನಿಯನ್ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಆಯ್ಕೆ

ದೇಶದ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಯೂನಿಯನ್ ಬ್ಯಾಂಕ್  ಒಫ್ ಇಂಡಿಯಾ ಇದರ ನೌಕರರ ಸಂಘ (ಕರ್ನಾಟಕ) ದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ, ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಾಲಕರಾರುವ ಶ್ರೀ ಸುರೇಶ್ ಪೂಜಾರಿ ಇವರಿಗೆ ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ ಜಾಲತಾಣ ಬಳಗದ ಹೃದಯಸ್ಪರ್ಶಿ ಅಭಿನಂದನೆಗಳು.

Read More

ಭಜನಾ ಸಂಕೀರ್ತನೆ

ಬಜಪೆ: ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 2024 ನೇ ಜನವರಿ 15 ರಂದು ಯುವವಾಹಿನಿ ಬಜಪೆ ಘಟಕದ ಸದಸ್ಯರಿಂದ ಭಜನಾ ಸಂಕೀರ್ತನೆಯು ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಬಜಪೆ ಘಟಕದ ಅಧ್ಯಕ್ಷರು ಹಾಗು ಸದಸ್ಯರನ್ನು ಕ್ಷೇತ್ರದ ಅರ್ಚಕರು ಗೌರವಿಸಿದರು.

Read More

ಕ್ರೀಡೆಯಿಂದ ದೈಹಿಕ ಸದೃಢತೆ, ಮಾನಸಿಕ ಆರೋಗ್ಯದ ಸುಧಾರಣೆ: ಲ| ಶೀನಾ ಪೂಜಾರಿ

ಮಂಗಳೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸದೃಢತೆ ಸಾಧಿಸಿಲಾಗುವುದು ಹಾಗೂ ಮಾನಸಿಕ, ದೈಹಿಕ, ಆರೋಗ್ಯವು ಸುಧಾರಿಸುತ್ತದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲ| ಶೀನಾ ಪೂಜಾರಿ ಇವರು ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ 2024 ನೇ ಜನವರಿ 7 ರಂದು ಮಂಗಳೂರಿನ ನಂತೂರಿನ ಪಾದುವ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, […]

Read More

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]

Read More

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!