05-01-2026, 2:03 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ದಿನಾಂಕ: 05-01-2026 ರಂದು ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಲಹರಿ ತಂಡ ಬಿಜೈ ಮಂಗಳೂರು ಇವರ ಸಹಯೋಗದಿಂದ ನೆರವೇರಿತು. ಯುವವಾಹಿನಿ (ರಿ.) ಮಂಗಳೂರು ಘಟಕದ ಒಂದನೇ ಉಪಾಧ್ಯಕ್ಷರು ಹರೀಶ್ ಕೆ. ಸುವರ್ಣ ಮತ್ತು ಸದಸ್ಯರು ಉಪಸ್ಥಿತಿ ಇದ್ದರು.
Read More
04-01-2026, 2:48 PM
ಬೆಳ್ತಂಗಡಿ: ನೊಂದ ಕುಟುಂಬಗಳಿಗೆ ಸಾಂತ್ವನ ನೀಡುವ ಜೊತೆಗೆ ಯುವಜನತೆಯಲ್ಲಿ ಸ್ನೇಹ, ಸೌಹಾರ್ದತೆ ಮತ್ತು ಸಂಘಟನಾ ಮನೋಭಾವವನ್ನು ಬೆಳೆಸುವ ಕಾರ್ಯದಲ್ಲಿ ಯುವವಾಹಿನಿಯ ಪಾತ್ರ ಶ್ಲಾಘನೀಯವಾಗಿದೆ ಎಂದು ವಿವಿಧ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಶ ಸಂಭ್ರಮದ ಪ್ರಯುಕ್ತ ಆಯೋಜಿಸಲಾದ ಕ್ರೀಡಾಕೂಟ ಹಾಗೂ ಸಾಂತ್ವನ ನಿಧಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಗೇರ ಬ್ರಿಗೇಡ್ ಅಧ್ಯಕ್ಷ ಬಿನುತಾ ಬಂಗೇರ ಮಾತನಾಡಿ, ನೊಂದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡುವ ಜೊತೆಗೆ ಮನಸ್ಸಿಗೆ ಧೈರ್ಯ ತುಂಬುವ ಸಂಘಟನೆ […]
Read More
04-01-2026, 1:55 PM
ಹೆಜಮಾಡಿ: ಯುವ ಸಂಘಟನೆಗಳು ಮನೋರಂಜನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದಾಗ ಸಂಘಟನೆಗಳು ಇನ್ನಷ್ಟು ಸದೃಢವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಹೇಳಿದರು. ಅವರು ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಆಯೋಜಿಸಲಾದ ತುಳು ಹಾಸ್ಯಮಯ ನಾಟಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ದಿನಾಂಕ 04-01-2026ರಂದು ಡಾ. ದೇವದಾಸ್ ಕಾಪಿಕಾಡ್ ಅವರ “ಎನ್ನನೇ ಕಥೆ” ತುಳು ಹಾಸ್ಯಮಯ […]
Read More
04-01-2026, 11:24 AM
ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು. ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ […]
Read More
03-01-2026, 11:00 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್ಸ್ಟ್ಯಾಂಡ್ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ […]
Read More
30-12-2025, 7:31 AM
ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 30-12-2025ರಂದು ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಟಕದ ನಿರ್ದೇಶಕ ಸೌಮ್ಯ ಲಾಯಿಲಾ ಅವರ “ಕನಸು” ನಿವಾಸದಲ್ಲಿ ಯುವವಾಹಿನಿ ಕುಟುಂಬ ಸದಸ್ಯರ ಭಾಗವಹಿಸುವಿಕೆಯೊಂದಿಗೆ ನಡೆಯಿತು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಕಾರ್ಯಕ್ರಮವನ್ನು ಹಿರಿಯರಾದ ಗಿರಿಧರ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, […]
Read More
21-12-2025, 6:58 PM
ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ನಡೆದ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶದ ಸಂದರ್ಭದಲ್ಲಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಯುವವಾಹಿನಿಯ 38 ನೇ ವಾರ್ಷಿಕ ಸಮಾವೇಶದಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಣೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೇಖಾಗೋಪಾಲ್, ಪ್ರಥಮ ಉಪಾಧ್ಯಕ್ಷರಾಗಿ ವಿದ್ಯಾ ರಾಕೇಶ್, ದ್ವಿತೀಯ ಉಪಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಕೋಶಾಧಿಕಾರಿಯಾಗಿ ಸತೀಶ್ ಕಿಲ್ಪಾಡಿ ಮೂಲ್ಕಿ, ಜತೆ ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ […]
Read More
21-12-2025, 1:45 PM
ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ 38ನೇ ವಾರ್ಷಿಕ ಸಮಾವೇಶವನ್ನು ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ಸಮಾವೇಶವು ಯುವವಾಹಿನಿ ಕೂಳೂರು ಘಟಕದ ಆತಿಥ್ಯದಲ್ಲಿ ಜರುಗಿತು. ಬ್ರಹ್ಮಶ್ರೀ […]
Read More
12-12-2025, 7:22 AM
14/11/2025 ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯುವವಾಹಿನಿಯ ಪಾತ್ರ ಅನನ್ಯ – ಲೋಕೇಶ್ ಕೋಟ್ಯಾನ್ ಹೆಜಮಾಡಿ ವಿದ್ಯೆಗೆ ಬಹಳಷ್ಟು ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆ ಯುವವಾಹಿನಿ. ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಹೀಗೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳ ಭವಿಷ್ಯ ರೂಪಿಸುವಲ್ಲಿಯುವವಾಹಿನಿ ಸಂಸ್ಥೆ ಪಾತ್ರ ಅನನ್ಯ ಎಂದು ಹೇಳಿದರು. ಇವರು ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು. ಮುಖ್ಯ ಅತಿಥಿ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷ ಅಶೋಕ್ […]
Read More