Yuvavahini

ಇತರೆ

ಯುವವಾಹಿನಿ(ರಿ.) ಅಡ್ವೆ ಘಟಕದ ಪದಗ್ರಹಣ

ಅಡ್ವೆ: ಯುವವಾಹಿನಿ ಸಂಘಟನೆಯು ಊರಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಳೆದ 5 ವರ್ಷಗಳಿಂದ ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ಕೈಲಾದ ಸಹಾಯ ನೀಡುತ್ತಿದೆ. ಇನ್ನು ಮುಂದೆಯೂ ನಿಂತ ನೀರಾಗದೆ ಮುಂದೆ ಸಾಗುತ್ತಿರಲಿ, ಇದಕ್ಕೆ ನಮ್ಮ ಹಿರಿಯರ ಸಲಹೆ ಸಹಕಾರ ಹಾಗೂ ಆಶೀರ್ವಾದ ಸದಾ ಇದೆ ಎಂದು ಅಡ್ವೆ ಗರಡಿಮನೆ ರಾಮ ಪೂಜಾರಿಯವರು ನುಡಿದರು. ಇವರು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜರಗಿದ ಯುವವಾಹಿನಿ(ರಿ.) ಅಡ್ವೆ ಘಟಕದ 2019ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ […]

Read More

ಯುವವಾಹಿನಿ(ರಿ) ಕಂಕನಾಡಿ ಘಟಕದ ಘಟಕದ ಪದಗ್ರಹಣ ಸಮಾರಂಭ

ಕಂಕನಾಡಿ : ಯುವವಾಹಿನಿ(ರಿ) ಕಂಕನಾಡಿ ಘಟಕದ ಪದಗ್ರಹಣ ಸಮಾರಂಭ ವು ಮಹಾಕಾಳಿ ದೈವಸ್ಥಾನದ ವಠಾರ ಉಜ್ಜೋಡಿ ಯಲ್ಲಿ ಜರಗಿತು. ಸಮಾರಂಭವನ್ನು ಶ್ರೀನಿವಾಸ ಬಂಗೇರ ಉಜ್ಜೋಡಿ ಉಧ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಅವರು ಮಾತನಾಡಿ ಯುವವಾಹಿನಿಯು ಜಾತಿ ಅಸಮಾನತೆಯನ್ನು ಹೋಗಲಾಡಿಸಿ ಯುವ ಜನತೆಯನ್ನು ಉತ್ತಮ ದಿಸೆಯಲ್ಲಿ ಕೊಂಡೊಯ್ಯುತ್ತಿದೆ ಸಂಘಟನೆಯಿಂದ ಇದು ಸಾಧ್ಯ ಗೆಜ್ಜೆಗಿರಿಯ ಶಿಲಾನ್ಯಾಸ ಸಂದರ್ಭ ಕೆಲವೇ […]

Read More

ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಪದಗ್ರಹಣ

ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 07-04-2019 ರಂದು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿಯ ಸಭಾಗ್ರಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ನಾನಿಲ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಹಳೆಯಂಗಡಿಯ ಘಟಕದ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕಿ […]

Read More

ಅನಾಥ ಮಗುವಿಗೆ ಆಸರೆಯಾದ ಯುವವಾಹಿನಿ ಕೂಳೂರು ಘಟಕ

ಕೂಳೂರು : ಅನಾಥಾಶ್ರಮದಲ್ಲಿ ಬೆಳೆಯುತ್ತಿದ್ದ ಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ಮೊತ್ತವನ್ನು ನೀಡಲು ಅಸಾಧ್ಯವಾಗಿರುವುದರಿಂದ ಯುವವಾಹಿನಿ ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿನಿಗೆ ಆಸ್ಪತ್ರೆ ಶುಲ್ಕ ಭರಿಸಲು 20,000 /- ರೂಪಾಯಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್

Read More

ಆಘಾತದ ಚಿಕಿತ್ಸೆಗೆ ಸಹಕರಿಸಿದ ಯುವವಾಹಿನಿ(ರಿ) ಮಾಣಿ ಘಟಕ

ಮಾಣಿ : ಜೀವನ ಪಯಣದ ಹಾದಿಯಲ್ಲಿ ಸಂಬಂಧಗಳು ಬಲು ಮಹತ್ವ ಪಡೆದಿದೆ. ಸಂಬಂಧಗಳು ಉಳಿಯಬೇಕಾದರೆ ಸ್ಪಂದನೆಯ ಅಗತ್ಯವಿದೆ. ಅದಕ್ಕೆ ಸಕಾಲ ಎಂಬಂತೆ ದುರ್ದೈವವಸಾತ್ ನಮ್ಮಘಟಕದ ಸದಸ್ಯರಾದ ನಮ್ಮ ಹತ್ತಿರದ ನಿವಾಸಿ ‌ಬರಿಮಾರ್ ಗ್ರಾಮದ, ಬಲ್ಯ ಬಳಿ ವಾಸವಾಗಿರುವ ಸದಾನಂದ ಪೂಜಾರಿ ಹಾಗೂ ಜಯಂತಿ ದಂಪತಿಗಳ ಪುತ್ರ, “ಅಶ್ವಥ್” ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಏ.ಜೆ ಹಾಸ್ಪಿಟಲ್ ನ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದರು ಹಾಗೂ  ಕಾಲಿನ ಶಸ್ತ್ರ ಚಿಕಿತ್ಸೆ ನಡೆದಿದೆ . ತೀರಾ ಬಡತನದಲ್ಲಿರುವ ಈ ಕುಟುಂಬಕ್ಕೆ […]

Read More

ಸ್ವ ಉದ್ಯೋಗ ತರಬೇತಿ ಶಿಬಿರ

ಉಡುಪಿ : ಉಡುಪಿ ಯುವವಾಹಿನಿ ಘಟಕದಲ್ಲಿ ದಿನಾಂಕ 31/03/2019 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಸ್ವ ಉದ್ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಮಹಿಳೆಯರಿಗೆ – ಸಾಂಬಾರು ಪುಡಿ, ಸಾರಿನ ಪುಡಿ, ಪುಳಿಯೋಗರೆ ಮಿಕ್ಸ್, ಪೇಪರ್ ಬ್ಯಾಗ್ ತಯಾರಿಸುವ ವಿಧಾನ, ಮ್ಯಾಟ್ ತಯಾರಿಸುವ ಬಗ್ಗೆ ತರಬೇತಿ ನೀಡಿದರು. ಸುಮಾರು 20 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡುರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮತಿ ಲಕ್ಷ್ಮೀಬಾಯಿ ಹಾಗೂ ಶ್ರೀಮತಿ ಸುಮಂಗಲಾ ರವರು ಭಾಗವಹಿಸಿದ್ದರು.ಶಕುಂತಳ ಎಸ್ […]

Read More

ಯುವವಾಹಿನಿ(ರಿ.) ಪಡುಬಿದ್ರಿ ಘಟಕ: 2019-20 ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಯುವವಾಹಿನಿ ಸಂಘಟನೆಯು ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ತನ್ನಿಂದಾದ ಸಹಾಯ ನೀಡುತ್ತಿದೆ. ಸಮಾಜದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ದುಡಿಯುತ್ತಿರುವ ಯುವಕರ ಭಲಾಡ್ಯ ಸಂಘಟನೆಯೇ ಯುವವಾಹಿನಿ ಎಂದು ಯುವವಾಹಿನಿಯ ಕಾರ್ಯ ಸಾಧನೆಗಳನ್ನು ಅರಿತುಕೊಂಡ ಮುಂಬೈ ಆನಂದ್ ರಾಠಿ ಆಂಡ್ ಗ್ರೂಪ್ ಸಂಸ್ಥೆಯ ಸದಾನಂದ ಪೂಜಾರಿ ಮಾದುಮನೆ ಇವರು ಹರ್ಷ ವ್ಯಕ್ತಪಡಿಸಿದರು. ಇವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ದಿನಾಂಕ 24.03.2019  ರಂದು ಜರಗಿದ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ 2019-20 ನೇ ಸಾಲಿನ ಪದಗ್ರಹಣ […]

Read More

ಯುವವಾಹಿನಿ(ರಿ.) ಬಜಪೆ ಘಟಕದ ಆಶ್ರಯದಲ್ಲಿ ರಕ್ತದಾನ ಶಿಬಿರ

ಬಜಪೆ : ಯುವವಾಹಿನಿ(ರಿ.) ಬಜಪೆ ಘಟಕ ,ಲಯನ್ಸ್ ಕ್ಲಬ್ ಮುಚ್ಚೂರು – ನೀರುಡ್ಡೆ ,ನಿರಂಜನ ಸ್ವಾಮಿ ಪಾಲಿಟೆಕ್ನಿಕ್ (ಅನುದಾನಿತ ) ಸುಂಕದಕಟ್ಟೆ , ಹಾಗೂ ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಅಶ್ರಯದಲ್ಲಿ, ಬೃಹತ್ ರಕ್ತದಾನ ಶಿಬಿರ ತಾರೀಕು 27/03/2019 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಸುಂಕದಕಟ್ಟೆ ಇಲ್ಲಿ ಯಶಶ್ವಿಯಾಗಿ ನಡೆಯಿತು . ಎಸ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಜ್ಯೋತಿ ನಾರಾಯಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು .ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ […]

Read More

ಉಚಿತ ‌ನೇತ್ರ‌ ತಪಾಸಣಾ ಶಿಬಿರ

ಮೂಡಬಿದಿರೆ‌ : ಮಂಗಳೂರು ‌ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಪಣಂಬೂರು,ಮಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹರಿಪ್ರಸಾದ್ ಪಿ. ನಿಯೋಜಿತ ಉಪಾಧ್ಯಕ್ಷರು ಯುವವಾಹಿನಿ ರಿ. ಮೂಡಬಿದಿರೆ ಘಟಕ ಇವರ ನೇತ್ರತ್ವದಲ್ಲಿ ದಿನಾಂಕ 24-3-2019 ಭಾನುವಾರ ಫ್ರೆಂಡ್ಸ್ ಕ್ಲಬ್ ಸಭಾ ಭವನ ಹೊಸಂಗಡಿಯಲ್ಲಿ ಉಚಿತ ‌ನೇತ್ರ‌ ತಪಾಸಣಾ ಶಿಬಿರ ನಡೆಯಿತು. ಸುಮಾರು 211 ಮಂದಿ ಈ ಶಿಬಿರದ ಪ್ರಯೋಜನವನ್ನು ಪಡೆದಿರುತ್ತಾರೆ…

Read More

ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ

ಮೂಡಬಿದಿರೆ‌ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!