Yuvavahini

ಇತರೆ

ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟ

ಪಡುಬಿದ್ರಿ : ದಿನಾಂಕ 08/03/2026 ರಂದು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವನ್ನು ಮುಲ್ಕಿಯ ಚೆನ್ನಯ ಕುದುರುದಲ್ಲಿರುವ ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್‌ನಲ್ಲಿ ಆಯೋಜಿಸಲಾಯಿತು.ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಾಗಿ ಕೇಂದ್ರ […]

Read More

ಬೃಹತ್ ರಕ್ತದಾನ ಶಿಬಿರ

ಕುಳಾಯಿ : ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ದಿನಾಂಕ 08.03.2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕುಳಾಯಿ, ಮಹಿಳಾ ಮಂಡಲ (ರಿ) ಕುಳಾಯಿ, ತಿರಂಗ ಟ್ರಸ್ಟ್ (ರಿ) ಮಂಗಳೂರು, ಶ್ರೀನಿವಾಸ ಆಸ್ಪತ್ರೆ ಮುಕ್ಕ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ನಡೆಯಿತು. ಮಹಿಳಾ ದಿನಾಚರಣೆಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ರೋಗಿಗಳ ಪ್ರಾಣ ಉಳಿಸುವ ಉದಾತ್ತ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶ್ರೀನಿವಾಸ […]

Read More

ಸೋಶಿಯಲ್ ಮೀಡಿಯಾವನ್ನು ಜವಾಬ್ದಾರಿಯುತವಾಗಿ ಬಳಸಿ: ಎಸಿಪಿ ರೀನಾ ಸುವರ್ಣ

ಬೆಂಗಳೂರು: “ಇಂದಿನ ಯುವ ಪೀಳಿಗೆ ಮತ್ತು ಮಹಿಳೆಯರು ಸೋಶಿಯಲ್ ಮೀಡಿಯಾವನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣಗಳು ಕೇವಲ ಮನೋರಂಜನೆಗೆ ಸೀಮಿತವಾಗದೆ, ಜ್ಞಾನಾರ್ಜನೆ ಮತ್ತು ಸಮಾಜದ ಏಳಿಗೆಗೆ ಪೂರಕವಾಗಿರಲಿ,” ಎಂದು ಬೆಂಗಳೂರು ನಗರದ ಸಹಾಯಕ ಪೊಲೀಸ್ ಆಯುಕ್ತರಾದ (ACP) ರೀನಾ ಸುವರ್ಣ ಅವರು ಕಿವಿಮಾತು ಹೇಳಿದರು. ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 08.03.2026 ರಂದು ಇತ್ತೀಚೆಗೆ ನಗರದ ಕರ್ನಾಟಕ ಗವರ್ನ್ಮೆಂಟ್ ಸೆಕ್ರೆಟೇರಿಯಟ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ […]

Read More

ಕೆಂಜಾರು ಕರಂಬಾರು ಯುವವಾಹಿನಿ ಘಟಕದಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ

ಬಜಪೆ: ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ವತಿಯಿಂದ ಮೇಘೆ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದಿನಾಂಕ 03-03-2026, ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ​ಬೆಳಿಗ್ಗೆ 4 ಗಂಟೆಗೆ ಕೆಂಜಾರು ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ “ಓಂ ಗುರುಭ್ಯೋ ನಮಃ” ಎಂಬ ಗುರುಸ್ಮರಣೆಯೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಘಟಕದ ಸದಸ್ಯರು ಹಾಗೂ ಭಕ್ತಾದಿಗಳು ಸೇರಿ ಒಟ್ಟು 15 ಮಂದಿಯ ತಂಡವು ಪಾದಯಾತ್ರೆಯ ಮೂಲಕ ಕಟೀಲು ಕ್ಷೇತ್ರವನ್ನು ತಲುಪಿ, ಅಮ್ಮನವರ ದರ್ಶನ ಪಡೆದು […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಜನಾ ಸೇವೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 02-03-2026, ಸೋಮವಾರದಂದು ನೆರವೇರಿತು. ​ಈ ವಾರದ ಭಜನಾ ಸೇವೆಯನ್ನು ಅಶೋಕ್ ನಗರ ದಂಬೇಲ್‌ನ ವೆಂಕಟೇಶ್ ರಾವ್ ಮತ್ತು ಬಳಗದವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಭಕ್ತಿಪ್ರಧಾನವಾದ ಸಂಕೀರ್ತನೆಗಳ ಮೂಲಕ ನೆರೆದಿದ್ದ ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸಲಾಯಿತು.​ಕಾರ್ಯಕ್ರಮದಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೇವರ […]

Read More

ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದಿಂದ ಪ್ರವಾಸ

ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ವತಿಯಿಂದ ದಿನಾಂಕ 01-03-2026, ಭಾನುವಾರದಂದು ಕಣ್ಣೂರಿನತ್ತ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಪ್ರವಾಸವು ಅತ್ಯಂತ ಯಶಸ್ವಿಯಾಗಿ ಮತ್ತು ಸಂಭ್ರಮದಿಂದ ನೆರವೇರಿತು. ಬೆಳಿಗ್ಗೆ 5.45ಕ್ಕೆ ಗ್ರಾಮ ಚಾವಡಿ ಗುರುಮಂದಿರದಲ್ಲಿ ಗುರುಗಳಿಗೆ ನಮನ ಸಲ್ಲಿಸಿ ಪ್ರವಾಸಕ್ಕೆ ಚಾಲನೆ ನೀಡಲಾಯಿತು. ಘಟಕದ ಒಂದನೇ ಉಪಾಧ್ಯಕ್ಷರಾದ ಮುರಳೀಧರ ಕೊಣಾಜೆ ಅವರ ನೇತೃತ್ವದಲ್ಲಿ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಒಟ್ಟು 52 ಮಂದಿ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ದಾರಿಯಲ್ಲಿ ಪರ್ಸಿನಕಡವು ದೇವಸ್ಥಾನಕ್ಕೆ […]

Read More

ಪುಣಚ ನೀರುಮಜಲು ಗರಡಿ ನೇಮೋತ್ಸವ: ಯುವವಾಹಿನಿ ವಿಟ್ಲ ಘಟಕದಿಂದ ಶ್ರಮದಾನ ಸೇವೆ

ವಿಟ್ಲ: ಇಲ್ಲಿನ ಪ್ರಸಿದ್ಧ ಪುಣಚ ನೀರುಮಜಲು ವಾರ್ಷಿಕ ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವಿಟ್ಲ ಘಟಕದ ಸದಸ್ಯರು ದಿನಾಂಕ 01-03-2026, ಭಾನುವಾರದಂದು ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಿದರು.​ನೇಮೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆಯ ಜವಾಬ್ದಾರಿಯನ್ನು ಹೊತ್ತಿದ್ದ ಘಟಕದ ಸದಸ್ಯರು, ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಭಕ್ತಿಪೂರ್ವಕವಾಗಿ ಶ್ರಮದಾನ ಮಾಡಿದರು. ಯುವವಾಹಿನಿ ಸದಸ್ಯರ ಈ ನಿಸ್ವಾರ್ಥ ಸೇವೆಯನ್ನು ಗುರುತಿಸಿದ ಗರಡಿಯ ಆಡಳಿತ ಮಂಡಳಿಯು, ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದೆ. ಈ ಸೇವಾ ಕಾರ್ಯಕ್ರಮದಲ್ಲಿ ವಿಟ್ಲ ಘಟಕದ […]

Read More

ಗೆಜ್ಜೆಗಿರಿ ವಾರ್ಷಿಕ ಮಹೋತ್ಸವದಲ್ಲಿ ಯುವವಾಹಿನಿ ಕೂಳೂರು ಘಟಕ ಭಾಗಿ

ಮಂಗಳೂರು: ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಿಲ್‌ ಇಲ್ಲಿ ಜರುಗಿದ ವಾರ್ಷಿಕ ಮಹೋತ್ಸವ ಹಾಗೂ ನೇಮೋತ್ಸವ ಪುಣ್ಯ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ​ಸಮಾಜದ ಸಾಂಸ್ಕೃತಿಕ ಅಸ್ಮಿತೆಯ ತಾಣವಾಗಿರುವ ಗೆಜ್ಜೆಗಿರಿಗೆ ಸಂಘಟಿತವಾಗಿ ಭೇಟಿ ನೀಡಿದ ಘಟಕದ ತಂಡವು, ಕ್ಷೇತ್ರದ ದೈವಿಕ ವಿಧಿವಿಧಾನಗಳಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಣೆ ಮಾಡಿತು.

Read More

ಯುವವಾಹಿನಿ ಸುರತ್ಕಲ್ ಘಟಕದ ಸ್ನೇಹ ಸಮ್ಮಿಲನ

ಸುರತ್ಕಲ್: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಕುಟುಂಬ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ–2026” ಕಾರ್ಯಕ್ರಮವನ್ನು ದಿನಾಂಕ 01-03-2026 ರಂದು ಸದಾಶಿವನಗರ 1ನೇ ಅಡ್ಡರಸ್ತೆ, ಸುರತ್ಕಲ್‌ನಲ್ಲಿರುವ ಘಟಕದ ಸದಸ್ಯೆಯಾದ ನೇಹಾ ಅವರ ಮನೆಯಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೇವತಿ ನವೀನ್, ಮೊದಲ ಉಪಾಧ್ಯಕ್ಷರಾದ ಸುಲತಾ ಪೂಜಾರಿ ಹಾಗೂ ಕಾರ್ಯದರ್ಶಿ ಸನೀಶ್ ಎಸ್. ಅಂಚನ್ ಉಪಸ್ಥಿತರಿದ್ದರು. ಅಧ್ಯಕ್ಷರಾದ ರೇವತಿ ನವೀನ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಸದಸ್ಯರು ಹಾಗೂ ಅವರ ಕುಟುಂಬಸ್ಥರನ್ನು ಸ್ವಾಗತಿಸಿದರು.ಕಾರ್ಯಕ್ರಮದ ಸಂಚಾಲಕರಾದ ಸ್ವಾತಿ […]

Read More

ಯುವವಾಹಿನಿ ‘ವಿಕಾಸ 2026’: ದಕ್ಷ ನಾಯಕತ್ವ ಹಾಗೂ ಶಿಸ್ತಿನಿಂದ ಸಂಘಟನೆ ಬಲವರ್ಧನೆ

ಮಂಗಳೂರು : “ಸಂಘಟನೆಯ ಯಶಸ್ಸು ಕೇವಲ ಅಧಿಕಾರ ಚಲಾಯಿಸುವುದರಲ್ಲಿಲ್ಲ, ಬದಲಾಗಿ ಎಲ್ಲರನ್ನೂ ಒಗ್ಗೂಡಿಸಿ ದಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕತ್ವದ ಮೇಲಿದೆ” ಎಂದು ಆಪ್ತ ಸಮಾಲೋಚಕರು, ತರಬೇತುದಾರರಾದ ಸ್ಮಿತೇಶ್ ಎಸ್ ಬಾರ್ಯ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮತ್ತು ಮಂಗಳೂರು ಘಟಕದ ಆತಿಥ್ಯದಲ್ಲಿ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಚ್ 1, ಭಾನುವಾರ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಪದಾಧಿಕಾರಿಗಳ ಮತ್ತು ಸದಸ್ಯರ ತರಬೇತಿ ಕಾರ್ಯಾಗಾರ ‘ವಿಕಾಸ 2026’ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!