Yuvavahini

ಇತರೆ

ಜವಾಬ್ದಾರಿಯ ಅರಿವೇ ಸಂಘಟನೆಯ ಶಕ್ತಿ : ಜಗದೀಶ್‌ಚಂದ್ರ ಡಿ.ಕೆ

ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳಿಗೆ ತಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳ ಅರಿವು ಮೂಡಿಸುವ ಉದ್ದೇಶದಿಂದ “ಮಾಹಿತಿ ಕಾರ್ಯಾಗಾರ – 2k26” ಕಾರ್ಯಕ್ರಮವನ್ನು ದಿನಾಂಕ 25.01.2026ರ ಆದಿತ್ಯವಾರ ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ಆಯೋಜಿಸಲಾಯಿತು.ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ.ಕೆ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಉದ್ದೇಶ, ಘಟಕಗಳ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳ ಜವಾಬ್ದಾರಿ–ಕರ್ತವ್ಯಗಳು […]

Read More

ವಿದ್ಯಾನಿಧಿ ಬಲವರ್ಧನೆಗೆ ಬಜಪೆಯಲ್ಲಿ ‘ಪೊರಿಪುದಪ್ಪೆ ಜಲದುರ್ಗೆ’ ತುಳು ನಾಟಕದ ಯಶಸ್ವಿ ಪ್ರದರ್ಶನ

ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ 11ನೇ ವರ್ಷದ ಅಂಗವಾಗಿ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಸ್ಥಾಪಿಸಲಾದ ‘ವಿದ್ಯಾನಿಧಿ’ಯನ್ನು ಬಲವರ್ಧನೆಗೊಳಿಸುವ ಸಲುವಾಗಿ ದಿನಾಂಕ 24/01/2026 ರಂದು ಶನಿವಾರ ಬಜಪೆ ಕೇಂದ್ರ ಮೈದಾನದಲ್ಲಿ ಪ್ರಪ್ರಥಮ ಬಾರಿಗೆ ತುಳು ಪೌರಾಣಿಕ ಸಿನಿ ನಾಟಕ ‘ಪೊರಿಪುದಪ್ಪೆ ಜಲದುರ್ಗೆ’ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಬೆನಕ ಆರ್ಟ್ಸ್ ಕುಡ್ಲ ಕಲಾವಿದರಿಂದ ನಡೆದ ಈ ನಾಟಕಾಭಿನಯ ಅಭೂತಪೂರ್ವ ಯಶಸ್ಸು ಕಂಡು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರೇಕ್ಷಕರು ಹಾಗೂ ಕಲಾಭಿಮಾನಿಗಳಿಂದ ಅಪಾರ […]

Read More

ಶೈಕ್ಷಣಿಕ ಮಾರ್ಗದರ್ಶನ ಶಿಬಿರ

ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಲ್ಕಿ ಇವರ ಸಹಯೋಗದಲ್ಲಿ ದಿನಾಂಕ‌ 24.01.2026 ರಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಶೈಕ್ಷಣಿಕ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ತರಬೇತುದಾರರಾದ ಜೆ.ಸಿ. ರಾಜೇಂದ್ರ ಭಟ್ ಅವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಹರೀಂದ್ರ ಸುವರ್ಣ ಅವರು ಉದ್ಘಾಟಿಸಿದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ […]

Read More

ಟೈಟಲ್ ಸಾಂಗ್ ಬಿಡುಗಡೆ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31 ಹಾಗೂ ಫೆಬ್ರವರಿ 01ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲ್ಪಟ್ಟಿದ್ದು, ಇದರ ಅಂಗವಾಗಿ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಗುರುದೇವರ ಸ್ಮರಣೆಯೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು ಅವರು ಮಾತನಾಡಿ, ಯುವವಾಹಿನಿ (ರಿ.) […]

Read More

ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಕ್ಕಳಿಗೆ ಜಾಗೃತಿ

ಪಣಂಬೂರು–ಕುಳಾಯಿ : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 19-01-2026 ಸೋಮವಾರ ಮಧ್ಯಾಹ್ನ 2.30ರಿಂದ 4.00 ಗಂಟೆಯವರೆಗೆ ಬೈಕಂಪಾಡಿಯ ಭಟ್ಟರಾಂಡ್ ರಶೆಲ್ ಶಾಲೆಯಲ್ಲಿ ಅಲ್ಲಿನ ಮಕ್ಕಳಿಗಾಗಿ ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಣಂಬೂರು ಠಾಣಾ ಅಧಿಕಾರಿ ಜ್ಞಾನ ಶೇಖರ್ ಮಾತನಾಡಿ, ಮಾದಕ ವ್ಯಸನಗಳಿಂದ ಯುವಕರು ಹೇಗೆ ದಾರಿ ತಪ್ಪುತ್ತಿದ್ದಾರೆ, ಅದರ ದುಷ್ಪರಿಣಾಮಗಳು ಏನೆಂಬುದನ್ನು ಮಕ್ಕಳಿಗೆ ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ವಿವರಿಸಿದರು. […]

Read More

ಯುವವಾಹಿನಿ ಸಕಾರಾತ್ಮಕ ಬದಲಾವಣೆಯ ಪ್ರೇರಕ ಶಕ್ತಿ : ಜಗದೀಶ್ಚಂದ್ರ ಡಿ ಕೆ

ವೇಣೂರು : ಸಂಸ್ಥೆ ಎಂಬುದು ಕೇವಲ ಸಂಘಟನೆಯಷ್ಟೇ ಅಲ್ಲ, ಅದು ಸಮಾಜವನ್ನು ರೂಪಿಸುವ ಶಕ್ತಿ ಕೇಂದ್ರವಾಗಿರುತ್ತದೆ. ಯುವವಾಹಿನಿಯ ಪ್ರತಿಯೊಬ್ಬ ಸದಸ್ಯನಲ್ಲೂ ನಾಯಕತ್ವದ ಗುಣ ಅಡಗಿದೆ. ಸೇವೆ, ಶಿಸ್ತು ಮತ್ತು ಸಮರ್ಪಣೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವವಾಹಿನಿ ಶಕ್ತಿಯಾಗಿ ಹೊರಹೊಮ್ಮಿದೆ. ಒಟ್ಟಾಗಿ ಚಿಂತಿಸಿ, ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಸ್ಥೆಯ ಗುರಿ ಸಾಕಾರವಾಗುತ್ತದೆ. ಇಂದಿನ ನಿಮ್ಮ ಸೇವೆಯೇ ನಾಳೆಯ ಶ್ರೇಷ್ಠ ಸಮಾಜದ ಅಡಿಗಲ್ಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!