Yuvavahini

ಇತರೆ

ಯುವವಾಹಿನಿ ಪ್ರೇರಕ ಶಕ್ತಿ : ಮೇಯರ್ ಕವಿತಾ ಸನಿಲ್

ಸುದೀರ್ಘ 30 ವರ್ಷಗಳ ಕಾಲ ವಿದ್ಯೆಗೆ ಪ್ರೋತ್ಸಾಹ ನೀಡುತ್ತಿರುವ ಯುವವಾಹಿನಿಯ ಅಧ್ಬುತ ಸಾಧನೆ ಶ್ಲಾಘನೀಯವಾದುದು, ಈ ನಿಟ್ಟಿನಲ್ಲಿ ಯುವವಾಹಿನಿ ಎಲ್ಲರಿಗೂ ಪ್ರೇರಕ ಶಕ್ತಿ .ನಮ್ಮ ಸಂಪಾದನೆಯ ಒಂದಂಶವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಭಾವನೆ ನಮ್ಮಲ್ಲಿರಬೇಕು, ಪರಸ್ಪರ ಸಹಕಾರದಿಂದ ಸದೃಢ ಸಮಾಜದ ನಿರ್ಮಾಣ ಮಾಡೋಣ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ತಿಳಿಸಿದರು. ಅವರು ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರು ಮಂಗಳಾ ಮ್ಯೂಸಿಕ್ ಕ್ಲಬ್ ಹಾಗೂ ಕನ್ನಡ ಹಾಗೂ ಸಂಸ್ಕ್ರತಿ ಇಲಾಖೆಯ ಸಹಯೋಗದೊಂದಿಗೆ ಯುವವಾಹಿನಿ […]

Read More

ಭಜನಾ ಕಾರ್ಯಕ್ರಮ ಹಾಗೂ ಸನ್ಮಾನ

ಯುವವಾಹಿನಿ (ರಿ) ಅಡ್ವೆ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಪ್ರಯುಕ್ತ ದಿನಾಂಕ 06.09.2017 ರಂದು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ತದನಂತರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕರು ಹಾಗೂ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬಹಳ ಹಿಂದಿನಿಂದಲೂ ಸೇವೆ ಮಾಡಿಕೊಂಡು ಬಂದಿರುವ ಶ್ರೀ ಸಂಕಪ್ಪ ಪೂಜಾರಿಯವರನ್ನು ಗೌರವಿಸಲಾಯಿತು.

Read More

ಕಾನೂನು ಮಾಹಿತಿ ಶಿಬಿರ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಕೀಲರ ಸಂಘ ಬೆಳ್ತಂಗಡಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ,ಯುವವಾಹಿನಿ ಸಂಚಾಲನ ಸಮಿತಿ ವೇಣೂರು ಇದರ ಸಹಯೋಗದೊಂದಿಗೆ ದಿನಾಂಕ 30.08.2017 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ನಡೆದ ಕಾನೂನು ಮಾಹಿತಿ ಶಿಬಿರವನ್ನು ಬೆಳ್ತಂಗಡಿ JMFC ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಸತೀಶ್ ಉದ್ಘಾಟಿಸಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗುರುನಾರಾಯಣ ಸ್ವಾಮೀ ಸೇವಾ ಸಂಘದ ಮಾಜಿ ನಿರ್ದೇಶಕ, ಕೊಕ್ರಾಡಿ SDMC ಅಧ್ಯಕ್ಷ ಸೂರ್ಯನಾರಾಯಣ ಡಿ.ಕೆ.ವಹಿಸಿ ಸತತ ಮೂರು ವರ್ಷಗಳಿಂದ ಕಾನೂನು […]

Read More

ಪ್ರಶಸ್ತಿ ವಿಜೇತ ಯುವ ರಂಗ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ

ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ  ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು […]

Read More

ಹೊಲಿಗೆ ತರಬೇತಿ ಸಮಾರೋಪ

ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ 6ತಿಂಗಳ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ದಿನಂಕ 19-08-2017ರಂದು ಉಜ್ಜೋಡಿ ಗೋರಿಗುಡ್ಡೆಯಲ್ಲಿ ನಡೆಯಿತು. ಸಮಾರಂಭದ ಅದ್ಯಕ್ಷತೆಯನ್ನು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ.ಎಂ  ಪೂಜಾರಿ ವಹಿಸಿದ್ದರು. ಕೆ.ಪಿ.ಟಿಯ Co-ordinator ಆದ ಗೀತಾಜೈನ್ ರವರು ಹಾಗೂ ಹೊಲಿಗೆ ತರಬೇತಿ ನೀಡಿದ ಶಿಕ್ಷಕಿಯಾದ ಶ್ರೀಮತಿ ಕಾಂತಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ತರಬೇತಿ ಪಡೆದ ಮಹಿಳಾ ಸದಸ್ಯರು ಹಾಗೂ ಘಟಕದ ಮಾಜಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕರು, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಾಹಿಸಿದರು. ಹೊಲಿಗೆ ತರಬೇತಿ ನಡೆನಲು, 6 […]

Read More

ಸೊಳ್ಳೆಗಳಿಂದ ಹರಡುವ ರೋಗಗಳ ಮಾಹಿತಿ ಕರಪತ್ರ ಬಿಡುಗಡೆ

ಯುವವಾಹಿನಿ(ರಿ) ಸುಳ್ಯ ಘಟಕ ವತಿಯಿಂದ ಸೊಳ್ಳೆ ಗಳಿಂದ ಹರಡುವ ರೋಗಗಳ ಮಾಹಿತಿ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕರಪತ್ರಗಳ ಬಿಡುಗಡೆ ಕಾರ್ಯಕ್ರಮ ಸುಳ್ಯದ ಕಲ್ಕುಡ ದೈವಸ್ಥಾನದ ವಠಾರದಲ್ಲಿ ದಿನಾಂಕ 18-8-2017ರ ಶುಕ್ರವಾರ ನಡೆಯಿತು. ಸುಳ್ಯ ನಗರ ಪಂಚಾಯತ್ ನ ಆರೋಗ್ಯ ನಿರೀಕ್ಷಕರಾದ ರವಿ ಕೃಷ್ಣ .ಡಿ ರವರು ಕರ ಪತ್ರ ಬಿಡುಗಡೆಗೊಳಿಸಿದರು. ಯುವವಾಹಿನಿ(ರಿ) ಸುಳ್ಯ ಘಟಕದ ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು, ರವಿಕುಮಾರ್. ಎಚ್, ರವಿಕಿರಣ್ , ರಂಜಿತ್ ಪೂಜಾರಿ , ಭರತ್ ಶಾಂತಿನಗರ , ಸುಂದರ […]

Read More

ಯುವವಾಹಿನಿ(ರಿ) ಸುಳ್ಯ ಘಟಕದ ಸದಸ್ಯರಿಂದ ರಕ್ತದಾನ

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದಿನಾಂಕ 15.08.2017ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ರೋಟರಿ ಕ್ಲಬ್ ಸುಳ್ಯ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರ ರೋಟರಿ ಸಮುದಾಯ ಭವನ ರಥಬೀದಿ ಸುಳ್ಯದಲ್ಲಿ ಜರುಗಿತು.ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ ಮೆಡಿಕಲ್ ಆಫೀಸರ್ ಡಾ|ರಾಮಚಂದ್ರ ಭಟ್ ರಕ್ತದಾನ ದ ಮಹತ್ವ ವಿವರಿಸಿದರು. ಯುವವಾಹಿನಿ ಸುಳ್ಯ ಘಟಕ ಸದಸ್ಯರು ಇದರಲ್ಲಿ ಪಾಲ್ಗೊಂಡು ಹೆಚ್ಚಿನ ಸಂಖ್ಯೆ ಯಲ್ಲಿ ರಕ್ತದಾನ ಮಾಡಿದರು.

Read More

ಕೃಷಿ ಚಟುವಟಿಕೆಗಳಿಂದ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ : ರವೀಂದ್ರ ಪೂಜಾರಿ

ತುಳುನಾಡಿನಾದ್ಯಂತ ನಡೆಯುತ್ತಿರುವ ಆಟಿಡೊಂಜಿ ದಿನ,ಕೆಸರ್ ಡ್ ಒಂಜಿ ದಿನ ಮುಂತಾದ ಕಾರ್ಯಕ್ರಮಗಳನ್ನು ಸಡಗರ, ಸಂಭ್ರಮದಿಂದ ಮಾಡುತ್ತಿದ್ದೇವೆ.. ಈ ಸಂಭ್ರಮ ಒಂದು ದಿನಕ್ಕೆ ಸೀಮಿತವಾಗಿರದೆ, ನಮ್ಮ ವಿರಾಮದ ವೇಳೆಯಲ್ಲಿ ನಿತ್ಯ ನಿರಂತರವಾಗಿ ನಡೆಯಬೇಕಾಗಿದೆ. ಕೃಷಿ ಚಟುವಟಿಕೆಗಳಿಗೆ ನಾವು ಮೈಯೊಡ್ಡಿದರೆ, ನಮ್ಮ ಆರೋಗ್ಯವೃದ್ಧಿಯಾಗುವುದು.ಕೃಷಿಕರಾಗಿ ಬದುಕಿದ ನಮ್ಮ ಗುರುಹಿರಿಯರ ಆರೋಗ್ಯದ ಗುಟ್ಟು ಇದೇ ಎಂದು ಅಡ್ವೆ ರವೀಂದ್ರ ಪೂಜಾರಿಯವರು ತಿಳಿಸಿದರು. ಅವರು ದಿನಾಂಕ 13-08-2017 ಆದಿತ್ಯವಾರದಂದು ಅಡ್ವೆ ಆನಂದಿ ಸಭಾಭವನದಲ್ಲಿ ಯುವವಾಹಿನಿ(ರಿ.) ಅಡ್ವೆ ಘಟಕದ ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ […]

Read More

ಅರಣ್ಯ ಸಂಪತ್ತಿನ ಮಹತ್ವ ತಿಳಿಯೋಣ : ಶ್ರೀಧರ್

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದಿಂದ ವನಮಹೋತ್ಸವ ಕಾರ್ಯಕ್ರಮವು ದಿನಾಂಕ 12.08.2017 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಪಾದೆಯಲ್ಲಿ ನಡೆಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ ವಲಯ ಆರಣ್ಯಧಿಕಾರಿ ಶ್ರೀ ಪಿ ಶ್ರೀಧರ್ ಮಾತನಾಡಿ ಅರಣ್ಯ ಸಂಪತ್ತಿನ ಮಹತ್ವ ಅರಿತು ಬಾಳೋಣ, ನೀರಿಗಾಗಿ ಆರಣ್ಯ ಎಂಬ ಘೋಷಣೆಯ ಮೂಲಕ ವನಮಹೋತ್ಸವ ಆಚರಣೆ ಅರ್ಥಪೂರ್ಣವಾಗಿದೆ ಹಾಗೂ ಜಾಗವನ್ನು ಒದಗಿಸಿಕೊಟ್ಟಲ್ಲಿ 50 ಗಿಡಗಳನ್ನು ನೆಟ್ಟು ಸುತ್ತ ಬೇಲಿ ಹಾಕಿ ಕೊಡುವ ಸರಕಾರದ ಉಚಿತ ಯೋಜನೆಯ ಸದುಪಯೋಗ ಪಡೆಯುವಂತೆ ವಿನಂತಿಸಿದರು.. ಕಾರ್ಯಕ್ರಮದಲ್ಲಿ ಕೇOದ್ರ […]

Read More

ಶ್ರೀಕೃಷ್ಣ ವೇಷ ಸ್ಪರ್ಧೆ-ಗೆದ್ದವರಿಗೆ ಬಂಗಾರದ ಪದಕ

ಅವಕಾಶಗಳು ಎಳವೆಯಲ್ಲಿಯೇ ಸಿಕ್ಕಾಗ ಮಕ್ಕಳ ಪ್ರತಿಭಾ ವಿಕಸನವು ಅತ್ಯಂತ ವೇಗದಿಂದ ಸಾಗುತ್ತದೆ. ಮಕ್ಕಳ ಪ್ರಾಯಕ್ಕೆಅನುಗುಣವಾದ ಸಾಮಥ್ರ್ಯಗಳು ಪ್ರತಿಯೊಬ್ಬರಲ್ಲೂ ಇದೆ ಅದನ್ನು ಗುರುತಿಸಿಕೊಳ್ಳುವ ಕೆಲಸವನ್ನು ಹೆತ್ತವರು ಮಾಡಬೇಕಿದೆ, ಇಂತಹ ಅವಕಾಶಗಳಲ್ಲಿ ಇಂದಿನ ಕಾರ್ಯಕ್ರಮವೂ ಹೆಚ್ಚು ಪ್ರಸ್ತುತ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ) ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಪ್ರಕಾಶ್‍ಕುಮಾರ್ ಬಿಎನ್ ತಿಳಿಸಿದರು. ಅವರು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಯುವವಾಹಿನಿ(ರಿ) ಸಸಿಹಿತ್ಲು ಘಟಕದ ವತಿಯಿಂದ ನಡೆದ ಶ್ರೀ ಕೃಷ್ಣ ವೇಷ ಸ್ಪರ್ಧೆಯನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!