Yuvavahini

ಮಹಿಳೆ

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾದಾಗಲೇ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ : ರತ್ನಾವತಿ ಜೆ. ಬೈಕಾಡಿ

ಮಂಗಳೂರು : ಮಹಿಳಾ ದಿನಾಚರಣೆಯ ಸಂಭ್ರಮವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ಪ್ರತಿದಿನವೂ ಸಂತೋಷ, ಸಂಭ್ರಮ ಹಾಗೂ ಸಕಾರಾತ್ಮಕ ಚಿಂತನೆಗಳೊಂದಿಗೆ ಆಚರಿಸಬೇಕಾಗಿದೆ ಎಂದು ರೂವಾರಿ.ಕಾಮ್ ಡಿಜಿಟಲ್ ಪತ್ರಿಕೆಯ ಪ್ರಧಾನ ಸಂಪಾದಕಿ ರತ್ನಾವತಿ ಜೆ. ಬೈಕಾಡಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಮಾರ್ಚ್ 14, 2026 ರಂದು ಸಂಜೆ 5 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಹಿಳೆಯರು “ಇತರರು ಏನು ಹೇಳುತ್ತಾರೆ” ಎಂಬ ಕೀಳರಿಮೆಯನ್ನು ತೊರೆದು, […]

Read More

ಮಂಗಳೂರು: ಮಾರ್ಚ್ 14 ರಂದು ಪುರಭವನದಲ್ಲಿ “ಸಖೀ ಸಂವಾದ – 2026” ಕಾರ್ಯಾಗಾರ

​ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಸಖೀ ಸಂವಾದ – 2026” ಸಂವಾದ ಕಾರ್ಯಾಗಾರವು ಮಾರ್ಚ್ 14 ರಂದು ಬೆಳಿಗ್ಗೆ 9:30ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ​ಉದ್ಘಾಟನೆ ಮತ್ತು ಅತಿಥಿಗಳು​ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.​ಮುಖ್ಯ […]

Read More

ಮಕ್ಕಳಲ್ಲಿ ಸಂಸ್ಕೃತಿ, ಸಂಪ್ರದಾಯದ ಜಾಗೃತಿ ಮೂಡಿಸುವುದು ಮಹಿಳೆಯರ ಕರ್ತವ್ಯ: ಪ್ರೇಮ ಪ್ರಭಾಕರ್

ಮಂಗಳೂರು: “ಒಬ್ಬ ಸುಸಂಸ್ಕೃತ ಮಹಿಳೆ ತನ್ನ ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ದೇಶ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಹೆಣ್ಣು ತಾನು ಹುಟ್ಟಿದ ಮನೆ ಹಾಗೂ ಸೇರಿದ ಗಂಡನ ಮನೆಯ ಹಿತ ಬಯಸುವವಳು,” ಎಂದು ಡಿವೈನ್ ಪಾರ್ಕ್‌ನ ಮಹಿಳಾ ಮೇಲ್ಮೈ ಅಧಿಕಾರಿ ಪ್ರೇಮ ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.​ಅವರು ದಿನಾಂಕ 08-03-2026 ರಂದು ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. […]

Read More

ಆಧುನಿಕ ಜೀವನಶೈಲಿ ಆರೋಗ್ಯಕ್ಕೆ ಸವಾಲು: ಕನಕಾ ಮೋಹನ್ ಕಳಕಳಿ

ಪಣಂಬೂರು: “ಇಂದಿನ ಬದಲಾದ ಜೀವನಶೈಲಿ ಮನುಷ್ಯನನ್ನು ರೋಗಗಳ ಗೂಡಾಗಿಸುತ್ತಿದೆ. ಅನಿಯಮಿತ ಆಹಾರ ಪದ್ಧತಿ ಮತ್ತು ವ್ಯಾಯಾಮದ ಕೊರತೆಯಿಂದ ಆಯುಷ್ಯ ಕ್ಷೀಣಿಸುತ್ತಿರುವುದು ಆತಂಕಕಾರಿ ಸಂಗತಿ. ಆರೋಗ್ಯಕರ ಬದುಕಿಗಾಗಿ ದಿನದ 24 ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯನ್ನಾದರೂ ಯೋಗಾಭ್ಯಾಸಕ್ಕೆ ಮೀಸಲಿಡುವುದು ಅನಿವಾರ್ಯ,” ಎಂದು SPYSS(R) ಜಿಲ್ಲಾ ಸಂಯೋಜಕಿ ಕನಕಾ ಮೋಹನ್ ತಿಳಿಸಿದರು. ​ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾರ್ಚ್ 8ರ ಭಾನುವಾರ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆರೋಗ್ಯ ಪದ್ಧತಿಯ […]

Read More

ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟ

ಪಡುಬಿದ್ರಿ : ದಿನಾಂಕ 08/03/2026 ರಂದು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವನ್ನು ಮುಲ್ಕಿಯ ಚೆನ್ನಯ ಕುದುರುದಲ್ಲಿರುವ ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್‌ನಲ್ಲಿ ಆಯೋಜಿಸಲಾಯಿತು.ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಾಗಿ ಕೇಂದ್ರ […]

Read More

ಬೃಹತ್ ರಕ್ತದಾನ ಶಿಬಿರ

ಕುಳಾಯಿ : ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ದಿನಾಂಕ 08.03.2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕುಳಾಯಿ, ಮಹಿಳಾ ಮಂಡಲ (ರಿ) ಕುಳಾಯಿ, ತಿರಂಗ ಟ್ರಸ್ಟ್ (ರಿ) ಮಂಗಳೂರು, ಶ್ರೀನಿವಾಸ ಆಸ್ಪತ್ರೆ ಮುಕ್ಕ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ನಡೆಯಿತು. ಮಹಿಳಾ ದಿನಾಚರಣೆಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ರೋಗಿಗಳ ಪ್ರಾಣ ಉಳಿಸುವ ಉದಾತ್ತ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶ್ರೀನಿವಾಸ […]

Read More

ಸೋಶಿಯಲ್ ಮೀಡಿಯಾವನ್ನು ಜವಾಬ್ದಾರಿಯುತವಾಗಿ ಬಳಸಿ: ಎಸಿಪಿ ರೀನಾ ಸುವರ್ಣ

ಬೆಂಗಳೂರು: “ಇಂದಿನ ಯುವ ಪೀಳಿಗೆ ಮತ್ತು ಮಹಿಳೆಯರು ಸೋಶಿಯಲ್ ಮೀಡಿಯಾವನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣಗಳು ಕೇವಲ ಮನೋರಂಜನೆಗೆ ಸೀಮಿತವಾಗದೆ, ಜ್ಞಾನಾರ್ಜನೆ ಮತ್ತು ಸಮಾಜದ ಏಳಿಗೆಗೆ ಪೂರಕವಾಗಿರಲಿ,” ಎಂದು ಬೆಂಗಳೂರು ನಗರದ ಸಹಾಯಕ ಪೊಲೀಸ್ ಆಯುಕ್ತರಾದ (ACP) ರೀನಾ ಸುವರ್ಣ ಅವರು ಕಿವಿಮಾತು ಹೇಳಿದರು. ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 08.03.2026 ರಂದು ಇತ್ತೀಚೆಗೆ ನಗರದ ಕರ್ನಾಟಕ ಗವರ್ನ್ಮೆಂಟ್ ಸೆಕ್ರೆಟೇರಿಯಟ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ […]

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಐಎಎಸ್ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಐಎಎಸ್ . ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಾಜು ಕೆ KAS ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ […]

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಕಮಿಷನರ್ ಅವರಿಗೆ ವಿವರಿಸಲಾಯಿತು. […]

Read More

ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ರೇವತಿ ನವೀನ್ಪ್ರಥಮ ಉಪಾಧ್ಯಕ್ಷರು : ಸುಲತ ಪೂಜಾರಿದ್ವಿತೀಯ ಉಪಾಧ್ಯಕ್ಷರು : ದಿವಿತ್ ಕುಮಾರ್ಕಾರ್ಯದರ್ಶಿ : ಸನೀಶ್ ಎಸ್ ಅಂಚನ್ಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿಕೋಶಾಧಿಕಾರಿ : ಅಮಿತ ದಿಲೀಪ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಶಶಾಂಕ್ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು : ಲಿಖಿತ್ ರಾಜ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಶಿವಾನಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!