Yuvavahini

ಆರೋಗ್ಯ

ಸಹಾಯಧನ ವಿತರಣೆ

ಬಜ್ಪೆ:- ಯುವವಾಹಿನಿ (ರಿ.) ಬಜ್ಪೆ ಘಟಕದ ವತಿಯಿಂದ ಬಜಪೆ ತಾರಿಕಂಬಳ ನಿವಾಸಿಯಾದ ಸುರೇಂದ್ರ ಪೂಜಾರಿ ಮತ್ತು ಗಾಯತ್ರಿ ದಂಪತಿಗಳ ಮಗಳಾದ ಬೇಬಿ ದೀಕ್ಷಾ ಇವರು ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ತೀರಾ ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಘಟಕದ ವತಿಯಿಂದ ಸಹಾಯಧನ ನೀಡಲಾಯಿತು ಹಾಗೂ ಬಜಪೆ ಕಿನ್ನಿಪದವು ನಿವಾಸಿಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಈ ಕುಟುಂಬಕ್ಕೆ ಘಟಕದ ವತಿಯಿಂದ ಧನಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಉಷಾ […]

Read More

ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನಕ್ಕೆ ಯೋಗ ಸಹಕಾರಿ – ಶಾಂಭವಿ ಅಂಚನ್

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. […]

Read More

ವೈದ್ಯಕೀಯ ನೆರವು

ವೇಣೂರು:- ಯುವವಾಹಿನಿ ವೇಣೂರು ಘಟಕದ ವತಿಯಿಂದ ಗರ್ಡಾಡಿ ಗ್ರಾಮದ ಕುಂಡದಬೆಟ್ಟು ರನ್ನಾಡಿ ಪಲ್ಕೆ ನಿವಾಸಿ ಕೃಷ್ಣಪ್ಪ ಗುರು ಸ್ವಾಮಿ ತೀವ್ರ ಅನಾರೋಗ್ಯದಿಂದ ಇದ್ದು, ಸರಳ ಸಜ್ಜನ ವ್ಯಕ್ತಿಯಾದ ಇವರು ಶ್ರೀ ಅಯ್ಯಪ್ಪ ಸ್ವಾಮಿಯ ಆರಾಧಕರಾಗಿ ಗುರುಸ್ವಾಮಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದು, ಇದೀಗ ತೀರಾ ಅಸೌಖ್ಯದಿಂದಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದು ಇವರಿಗೆ ಯುವವಾಹಿನಿ(ರಿ.) ವೇಣೂರು ಘಟಕವು ನಡೆಸಿಕೊಂಡು ಬರುತ್ತಿರುವ “ಆಸರೆ ಸೇವಾ ಯೋಜನೆ” ಯ ಮೂಲಕ ರೂಪಾಯಿ 5000/- ಚೆಕ್ ನ್ನು ದಿನಾಂಕ 14-06-2022ನೇ ಮಂಗಳವಾರದಂದು ಕೃಷ್ಣಪ್ಪ ಪೂಜಾರಿಯವರ ಮನೆಗೆ […]

Read More

ಉಚಿತ ಹೃದಯ ವೈದ್ಯಕೀಯ ಶಿಬಿರ

ಯುವವಾಹಿನಿ (ರಿ.) ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ , ಬಿಲ್ಲವ ಸೇವಾ ಸಮಾಜ ಕೊಲ್ಯ, ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಕೊಲ್ಯ ಇವರ ನೇತೃತ್ವದಲ್ಲಿ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಇವರ ಸಹಯೋಗದಲ್ಲಿ ಉಚಿತ ಹೃದಯ ವೈದ್ಯಕೀಯ ಶಿಬಿರ ಕೊಲ್ಯ ಬಿಲ್ಲವ ಸಂಘದಲ್ಲಿ ನೆರವೇರಿತು. ಶಿಬಿರವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ ಇವರು ಉದ್ಘಾಟಿಸಿ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತೆ ಕರೆ […]

Read More

ಆರೋಗ್ಯ ಕಾರ್ಡ್ ನೋಂದಣಿ ಶಿಬಿರ

ಯಡ್ತಾಡಿ :- ಯುವವಾಹಿನಿ (ರಿ.) ಯಡ್ತಾಡಿ ಹಾಗೂ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರ ಯಡ್ತಾಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ “ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನ ನೋಂದಣಿಯನ್ನು ದಿನಾಂಕ 29 ಮೇ 2022 ರ ಭಾನುವಾರದಂದು ಏರ್ಪಡಿಸಲಾಗಿತ್ತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿಯವರು ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿಯವರು ಸಾಂಕೇತಿಕವಾಗಿ ಆಯುಷ್ಮಾನ್ ಆರೋಗ್ಯ ಕಾರ್ಡನ್ನು ಫಲಾನುಭವಿಗಳಿಗೆ ವಿತರಿಸಿದರು. ಪರಿಸರದ 115 ಮಂದಿ ಫಲಾನುಭವಿಗಳಿಗೆ ಉಚಿತವಾಗಿ ಆಯುಷ್ಮಾನ್ ಆರೋಗ್ಯ […]

Read More

ದಂತ ವೈದ್ಯಕೀಯ ಶಿಬಿರ

ದಿನಾಂಕ 23.05.22ನೇ ಸೋಮವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಆಶ್ರಯದಲ್ಲಿ ಕಟಪಾಡಿ ಬ್ರಹ್ಮಶ್ರೀನಾರಾಯಣ ಗುರು ಸಭಾಭವನದಲ್ಲಿ “ಉಚಿತ ದಂತ ಚಿಕಿತ್ಸಾ” ಶಿಬಿರವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಸುನಿಲ್ ಡಿ ಬಂಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಟಪಾಡಿ ಕ್ಷೇತ್ರದ ಮಾಜಿ ಗೌರವ ಪ್ರಧಾನ ಕಾಯ೯ದಶಿ೯ ಶಂಕರ ಪೂಜಾರಿ, ಗೌರವ ಪ್ರಧಾನ ಕಾಯ೯ದಶಿ೯ಯು ಶಿವಾನಂದ್ ಮತ್ತು ನವೀನ್ ಅಮಿನ್ ಶಂಕರಪುರ ಮತ್ತು ಆರ್. ಜಿ. ಕೋಟ್ಯಾನ್, ವಿಶ್ವನಾಥ […]

Read More

ರಕ್ತದಾನ ಶಿಬಿರ

ಕಟಪಾಡಿ :  ದಿನಾಂಕ 10/೦4/2022ರ ಆದಿತ್ಯವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಹಾಗೂ ಜೇಸಿಐ ಕಟಪಾಡಿ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವು ಜೇಸಿ ಭವನ ಕಟಪಾಡಿಯಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಹರೀಶ್ ಚಂದ್ರ ಅಮೀನ್ ಉದ್ಘಾಟಿಸಿ ಶಿಬಿರಕ್ಕೆ ಶುಭ ಹಾರೈಸಿದರು.ಡಾ.ಸಂಜನಾ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತದಾನದಿಂದ ಮನುಷ್ಯನ ಅತ್ಯಮೂಲ್ಯ ಜೀವವನ್ನು ಉಳಿಸಬಹುದು ಎಲ್ಲರೂ ರಕ್ತದಾನ ಮಾಡುವಂತೆ ಕೋರಿದರು. ಜೇಸಿಐ ಅಧ್ಯಕ್ಷರಾದ ಪ್ರವೀಣ್ ಕುಮಾರ್,ಘಟಕದ ಅಧ್ಯಕ್ಷರಾದ ಸುನಿಲ್ ಡಿ ಬಂಗೇರ,ನಿಕಟಪೂರ್ವ ಅಧ್ಯಕ್ಷರಾದ ಉಮೇಶ್ ಸುವರ್ಣ, ಉಪಾಧ್ಯಕ್ಷರಾದ […]

Read More

ರಕ್ತದಾನ ಶಿಬಿರ

ಯುವವಾಹಿನಿ (ರಿ.) ವಿಟ್ಲ ಘಟಕದ ಆಶ್ರಯದಲ್ಲಿ ಬ್ಲಡ್ ಬ್ಯಾಂಕ್ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ದಿನಾಂಕ 03-04-2022 ರಂದು ವಿಟ್ಲದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರಕ್ತದಾನ ಶಿಬಿರ ‌ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ಯಶವಂತ್ ಎನ್. ರವರು ವಹಿಸಿದ್ದರು. ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾದ ಡಾ.ಗೀತಪ್ರಕಾಶ್ ದೀಪ ಬೆಳಗಿಸುವ ಮೂಲಕ‌ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ […]

Read More

ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಅರೋಗ್ಯ ಕಾರ್ಡ್ ಮಾಹಿತಿ ಕಾರ್ಯಗಾರ

ಕೆಎಂಸಿ ಸಂಸ್ಥೆಯ ಅತ್ತಾವರ ಇವರ ಸಹಕಾರದೊಂದಿಗೆ ಯುವವಾಹಿನಿ(ರಿ.) ಶಕ್ತಿನಗರ ಘಟಕ, ಲಯನ್ಸ್ ಕ್ಲಬ್‌ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಶಿಬಿರವು ದಿನಾಂಕ 06-03- 2022ರಂದು ಕುವೆಂಪು ಮಾದರಿ ಸರಕಾರಿ ಶಾಲೆ ನಾಳ್ಯಪದವು ಶಕ್ತಿನಗರದಲ್ಲಿ ಜರುಗಿತು. ಯುವವಾಹಿನಿ( ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಶಕ್ತಿನಗರ ಯುವವಾಹಿನಿ ಘಟಕದ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಜಯರಾಮ ಪೂಜಾರಿ ಬಾಳಿಲ […]

Read More

ಬಜಗೋಳಿ ಬ್ರಹತ್ ರಕ್ತದಾನ ಶಿಬಿರ, ಅಭಿನಂದನಾ ಕಾರ್ಯಕ್ರಮ

ಕಾರ್ಕಳ :ಬಿಲ್ಲವ ಸಮಾಜ ಸೇವಾ ಸಂಘ(ರಿ) ಬಜಗೋಳಿ,ಯುವವಾಹಿನಿ(ರಿ) ಕಾರ್ಕಳ ಘಟಕ,ಹಾಗೂ ಯೂತ್ ಬಿಲ್ಲವ(ರಿ) ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ರಕ್ತ ನಿಧಿ ಕೇಂದ್ರ ಉಡುಪಿ ಇದರ ಸಹಯೋಗದೊಂದಿಗೆ ಸಾರ್ವಜನಿಕ ಬ್ರಹತ್ ರಕ್ತದಾನ ಶಿಬಿರವು ಶ್ರೀ ನಾರಾಯಣ ಗುರು ಸಭಾಭವನ ಬಜಗೋಳಿ ಇಲ್ಲಿ ಫೆ.13ರಂದು ನಡೆಯಿತು. ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ನಲ್ಲೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಕಾರ್ಕಳ ಇದರ ಮಾಲಕರಾದ ಸುಶಾಂತ್ ಬಜಗೋಳಿ ಇವರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!