Yuvavahini

ಮಾಹಿತಿ

ಮಾಹಿತಿ ಕಾರ್ಯಗಾರ -ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಘಟಕ ಮತ್ತು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಪದವಿ ವ್ಯಾಸಂಗ ಮಾಡಿ ಬ್ಯಾಂಕಿಂಗ್ ಉದ್ಯೋಗದ ಆಸಕ್ತಿ ಇರುವ ಆಕಾಂಕ್ಷಿಗಳಿಗಾಗಿ ದಿನಾಂಕ 13.09.2025ರಂದು ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್ ನಲ್ಲಿ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಮಂಗಳೂರಿನ ಸರ್ವಜ್ಞ IAS ಅಕಾಡೆಮಿಯ ಸುರೇಶ್ ಎಂ ಎಸ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ […]

Read More

ಸೌರ ಶಕ್ತಿ ಜೀವನೋಪಾಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ-ಯುವವಾಹಿನಿ (ರಿ ) ಕೊಲ್ಯ ಘಟಕ

ಯುವವಾಹಿನಿ (ರಿ ) ಕೊಲ್ಯ ಘಟಕದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಸಹಕಾರದಲ್ಲಿ ಸೌರ ಶಕ್ತಿ ಜೀವನೋಪಾಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ತಾ. 12-03-2025 ಕೊಲ್ಯ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು. ಸೆಲ್ಕೋ ಸೋಲಾರ್ ಪ್ರೈವೆಟ್ ಲಿ. ಇದರ ಸಿಬ್ಬಂದಿ ಶ್ರೀ ವಿನೋದ್ ಸೌರಶಕ್ತಿ ಬಳಕೆ ಬಗ್ಗೆ, ಸೌರ ಶಕ್ತಿ ಜೀವನೋಪಾಯ ಯಂತ್ರಗಳ ಉಪಯೋಗ, ಸ್ವ ಉದ್ಯೋಗಕ್ಕೆ ಯಾವ ಸೌರ ಶಕ್ತಿ ಯಂತ್ರಗಳು ಉಪಯೋಗವಾಗುವುದು ಎಂಬುದರ ಬಗ್ಗೆ ವಿವರಿಸಿದರು. ಘಟಕದ ದ್ವಿತೀಯ ಉಪಾಧ್ಯಕ್ಷರಾದ […]

Read More

ಯುವವಾಹಿನಿ ಜಾಲತಾಣ ದ ಮಾಹಿತಿ ಶಿಬಿರ.

ಪ್ರಸ್ತುತ ಸನ್ನಿವೇಶಗಳಿಗೆ ಅಗತ್ಯವಿರುವಂತೆ ಯುವವಾಹಿನಿ ಜಾಲತಾಣ ಬದಲಾವಣೆಗೊಂಡಿದ್ದು ಈ ಬಗ್ಗೆ ಎಲ್ಲಾ ಘಟಕದ ಅಧ್ಯಕ್ಷ ಮತ್ತು ಕಾರ್ಯದರ್ಶಿ ಗಳಿಗೆ ಮಾಹಿತಿ ನೀಡಲಾಯಿತು… ದಿನಾಂಕ 30/03/2025 ರಂದು ಮದ್ಯಾಹ್ನ 2.15 ಕ್ಕೇ ಯುವವಾಹಿನಿ ಸಭಾಂಗನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಎಲ್ಲರನ್ನೂ ಸ್ವಾಗತಿಸಿದರು…ಕೇಂದ್ರ ಸಮಿತಿ ಜಾಲತಾಣ ಸಂಪಾದಕರಾದ ಉದಯ ಕುಮಾರ್ ಕೋಲಾಡಿ ಬದಲಾವಣೆಯ ಅಗತ್ಯತೆಯನ್ನು ತಿಳಿಸಿ ಮುಂದಿನ ದಿನಗಳಲ್ಲಿ ಸದಸ್ಯತನ,ರಶೀದಿ,ರಕ್ತದಾನ ಮತ್ತು ಉದ್ಯೋಗ ದ ಮಾಹಿತಿಯಿಂದಾಗಿ ಎಲ್ಲಾ ಸದಸ್ಯರಿಗೆ ಜಾಲತಾಣ ಒಂದು ಅವಿಭಾಜ್ಯ ಅಗತ್ಯತೆ […]

Read More

ಮಲ್ಲಿಗೆ ಕೃಷಿ ತರಬೇತಿ ಕಾರ್ಯಗಾರ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಗಳೂರು ತಾಲೂಕು ಇದರ ಸಹಕಾರದೊಂದಿಗೆ ಮಲ್ಲಿಗೆ ಕೃಷಿ ತರಬೇತಿ ಕಾರ್ಯಗಾರವು ದಿ : 20.12.2024 ರಂದು ಮಧ್ಯಾಹ್ನ 2:30ಕ್ಕೆ ಯುವವಾಹಿನಿ ಸಭಾಂಗಣ ಊರ್ವ ಸ್ಟೋರ್ ಇಲ್ಲಿ ನಡೆಯಿತು. ಮೊದಲಿಗೆ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಗಳೂರು ತಾಲೂಕು ಇದರ ಕೃಷಿ ಅಧಿಕಾರಿ ಶ್ರೀಯುತ ಮೋಹನ್ ಕುಮಾರ್ ಇವರು ಉಪಸ್ಥಿತರಿದ್ದರು. ಸಂಪನ್ಮೂಲ […]

Read More

ವಿಜಿಲೆನ್ಸ್ ಜಾಗೃತಿ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) […]

Read More

ವಿಶೇಷ ತರಭೇತಿ ಶಿಬಿರ

ಪಡುಬಿದ್ರಿ :- ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ಶಿಬಿರವು ದಿನಾಂಕ 03 ಜುಲೈ 2022 ನೇ ರವಿವಾರ ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಿತ್ರಾಕ್ಷಿ ಕೆ ಕೋಟ್ಯಾನ್ ರವರ ಮನೆಯಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷರುಗಳಾದ ರವಿರಾಜ್ ಎನ್ ಕೋಟ್ಯಾನ್, ಯೋಗೀಶ್ ಪೂಜಾರಿ, ಪ್ರಸಾದ್ ವೈ ಕೋಟ್ಯಾನ್, ಸುಜಿತ್ ಕುಮಾರ್ ಹಾಗೂ ಸಂತೋಷ್ ಪೂಜಾರಿ ಯುವವಾಹಿನಿಯ ಧ್ಯೇಯೋದ್ದೇಶ ಹಾಗೂ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸವಿಸ್ತಾರವಾಗಿ […]

Read More

ಮುಗ್ಧ ಮನಸ್ಸುಗಳಿಗೆ ಚೈತನ್ಯ ತುಂಬುವ ಕೆಲಸ ಶ್ಲಾಘನೀಯ – ಪ್ರಮೋದ್ ಮಂದಾರ್ತಿ

ಭಾರತ ಪುಣ್ಯಭೂಮಿ, ವಿಶ್ವ ಸಂಸ್ಕೃತಿಯಲ್ಲಿ ತನ್ನದೇ ಮಹತ್ವ ಪಡೆದಕೊಂಡ ಈ ನಾಡಿನ ಅಂತರ್‌ಶಕ್ತಿ ವಿಶಿಷ್ಟವಾದುದು. ಇಂತಹ ಪುಣ್ಯ ಭೂಮಿಯಲ್ಲಿ ಮುಗ್ಧ ಮನಸ್ಸುಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಯಡ್ತಾಡಿ ಘಟಕ ಬೇಸಿಗೆ ಶಿಬಿರದಂತಹ ಕಾರ್ಯಕ್ರಮ ಆಯೋಜನೆ ಮೂಲಕ ಮಕ್ಕಳ ಭೌತಿಕ ವಿಕಸನದ ಮೂಲಕ ಸಂಸ್ಕಾರಯುತ ಶಿಕ್ಷಣಕ್ಕೆ ಅಡಿಪಾಯವಾಗುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನವಭಾರತ್ ಸಹಕಾರಿ ಸಂಘ ಮೈರ್ಕೊಮೆ ಅಧ್ಯಕ್ಷ ಪ್ರಮೋದ್ ಮಂದಾರ್ತಿ ಹೇಳಿದರು.ಅವರು ಯುವವಾಹಿನಿ(ರಿ) ಯಡ್ತಾಡಿ ಘಟಕ ಸಾರಥ್ಯದಲ್ಲಿ ಸ.ಹಿ.ಪ್ರಾ.ಶಾಲೆ ಯಡ್ತಾಡಿ, […]

Read More

ಯುವವಾಹಿನಿ ಸದಸ್ಯರ ಶಿಸ್ತು ಮತ್ತು ಉತ್ಸಾಹ ಕಾರ್ಯಾಗಾರದ ಯಶಸ್ಸಿನ ಮೂಲ : ಸದಾನಂದ ನಾವಡ

ಮಾಣಿ : ಕಾರ್ಯಾಗಾರದಲ್ಲಿ ಭಾಗವಹಿಸಿದ‌ ಸದಸ್ಯರ ಉತ್ಸಾಹ, ಶಿಸ್ತು, ಯುವವಾಹಿನಿಯ ಸಂಸ್ಥೆಯ ಮೇಲಿನ ಅತೀವ ಪ್ರೀತಿ ಕಾರ್ಯಾಗಾರದ ಯಶಸ್ಸಿನ ಮೂಲ ಎಂದು ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ‌ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಮುಖ್ಯ […]

Read More

ಯುವವಾಹಿನಿ ಇನ್ನಷ್ಟು ಬಲಿಷ್ಟಗೊಳ್ಳುವಲ್ಲಿ ಚೈತನ್ಯ 2022 ಮಹತ್ತರ ಪಾತ್ರ ವಹಿಸಲಿದೆ : ಉದಯ ಅಮಿನ್ ಮಟ್ಟು

ಮಾಣಿ : ಚೈತನ್ಯ 2022 ತರಬೇತಿ ಕಾರ್ಯಾಗಾರವು ಯುವವಾಹಿನಿ ಸಂಘಟನೆಯು ಇನ್ನಷ್ಟು ಬಲಗೊಳ್ಳಲು ಸಹಕಾರಿಯಾಗಲಿದೆ ಹಾಗೂ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಯುವವಾಹಿನಿ ಮಾಣಿ ಘಟಕದ ಅಚ್ಚುಕಟ್ಟುತನದ ಆತಿಥ್ಯ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, […]

Read More

ಆರ್ಥಿಕ ಸದೃಢತೆಯಿಂದ ಮಹಿಳೆಗೆ ಗೌರವ: ರೇಖಾ ಗೋಪಾಲ್

ಬೆಳ್ತಂಗಡಿ: ”ಮಹಿಳೆ ಇನ್ನೊಬ್ಬರ ಮುಂದೆ ಕೈ ಚಾಚಿ ಬದುಕುವುದಕ್ಕಿಂತ ತಾನೇ ಹಣ ಗಳಿಸಿಕೊಳ್ಳಬೇಕು. ಆಕೆ ಅರ್ಥಿಕವಾಗಿ ಸದೃಢವಾದಾಗ ಸಮಸ್ಯೆ ದೂರವಾಗುವುದರ ಜೊತೆಗೆ ಸಮಾಜದಲ್ಲಿ ಗೌರವ, ಸ್ಥಾನಮಾನ ಸಿಗುವುದು’ ಎಂದು ಮಂಗಳೂರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ರೇಖಾ ಗೋಪಾಲ್ ಹೇಳಿದರು. ಅವರು ದಿನಾಂಕ 13.03.2022 ರಂದು ಬೆಳ್ತಂಗಡಿಯ ಸುವರ್ಣ ಆರ್ಕೆಡ್,ಇದರ ಸಭಾಂಗಣದಲ್ಲಿ ಬೆಳ್ತಂಗಡಿ ಯುವವಾಹಿನಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!