Yuvavahini

ಸಮಾಜ ಸೇವೆ

ಶ್ರಮದಾನದ ಮೂಲಕ ಸೇವೆ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ಸದಸ್ಯರು ದಿನಾಂಕ 10/06/2018 ಪಂಜಿಮೊಗರು ಮಂಜೊಟ್ಟಿ ಅಂಗನವಾಡಿ ಕೇಂದ್ರದ ಎದುರಿನ ಪ್ರದೇಶದಲ್ಲಿ ಶ್ರಮದಾನ ಮಾಡಲಾಯಿತು. ಅಂಗನವಾಡಿ ಕೇಂದ್ರದ ಕಾಲುದಾರಿಯು ಅಸ್ತವ್ಯಸ್ತವಾಗಿದ್ದು ಶಾಲಾ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನುಕೂಲವಾದ್ದರಿಂದ ಘಟಕದ ವತಿಯಿಂದ ಶ್ರಮದಾನ ಮಾಡಲಾಯಿತು. ಒಟ್ಟು 25 ಮಂದಿ ಸದಸ್ಯರು ಶ್ರಮದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಮತ್ತು ಈ ಕಾರ್ಯಕ್ರಮದ ಸಂಚಾಲಕಿ ಹಾಗೂ ಸಂಘಟನಾ ಕಾರ್ಯದರ್ಶಿಯಾದ […]

Read More

ಮುಂಡಾರು ಹಿಂದೂ ರುದ್ರ ಭೂಮಿಯಲ್ಲಿ ವಿಶ್ವ ಪರಿಸರ ದಿನ‌ ಆಚರಣೆ.

ಬಜ್ಪೆ : ತಾ. 10.06.18 ಭಾನುವಾರ ಯುವವಾಹಿನಿ(ರಿ) ಬಜ್ಪೆ ಘಟಕದ ಸದಸ್ಯರಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಜ್ಪೆ ಸಮೀಪದ ಮುಂಡಾರು ಇಲ್ಲಿರುವ ಹಿಂದೂ ರುದ್ರ ಭೂಮಿಯ ಪರಿಸರ ಸ್ವಚ್ಛಗೊಳಿಸಿ, ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಶ್ರೀಯುತ ರಾಘವೇಂದ್ರ ಆಚಾರ್, ಮಾಲಕರು, ಶಾಂತಿ ಭವನ ಬಜ್ಪೆ ಮತ್ತು ಡಾ|| ಜಯರಾಮ್ ಶೆಟ್ಟಿ, ಖ್ಯಾತ ಮಕ್ಕಳ ತಜ್ಞರು, ಬಜ್ಪೆ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 20 ವಿವಿಧ ಜಾತಿಯ ಸುಮಾರು 100 ಗಿಡಗಳನ್ನು […]

Read More

ಬಡ ಕುಟುಂಬಕ್ಕೆ ಸಹಾಯ ಹಸ್ತ

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಬಡ ಕುಟುಂಬದ ಮನೆಯನ್ನು ವಾಸ ಮಾಡಲು ಯೋಗ್ಯವಾಗುವಂತೆ ಮಾಡಲಾಯಿತು. ಕಟಪಾಡಿ ಮೂಡಬೆಟ್ಟು ಗ್ರಾಮದ ಶ್ಯಾಮಲ‌ ಪುರಾಣಿಕ್ ಎಂಬವರ ಮನೆ ವಾಸಿಸಲು‌ ಅನಾನುಕೂಲತೆಯಿಂದ ಕೂಡಿದ್ದು, , ಯುವವಾಹಿನಿ ಕಟಪಾಡಿ ಘಟಕವು ರೂ 25,000/- ವೆಚ್ಚದಲ್ಲಿ ಶೌಚಾಲಯ ನಿರ್ಮಾಣದೊಂದಿಗೆ ಮನೆಯನ್ನು ವಾಸಿಸಲು ಯೋಗ್ಯವಾಗುವಂತೆ ಮಾಡಲಾಯಿತು. ಕಾಪು ಪೋಲೀಸ್ ಠಾಣಾ ಉಪನಿರೀಕ್ಷಕ ನಿತ್ಯಾನಂದ ಗೌಡ, ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕಟಪಾಡಿ ಘಟಕದ ಅಧ್ಯಕ್ಷ […]

Read More

ವೀಲ್ ಚೇರ್ ವಿತರಣೆ

ದಿನಾಂಕ : 02/05/2018 ರಂದು ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ಕಿಲೆಂಜಾರು ಗ್ರಾಮದ ನಿವಾಸಿಯಾದ,ನಡೆದಾಡಲು ಅಸಾಧ್ಯವಾಗಿ ಹಾಸಿಗೆ ಹಿಡಿದಿರುವ ರವೀಂದ್ರ ಇವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೋಟ್ಟು , ಉಪಾಧ್ಯಕ್ಶರಾದ ಅಜೇಯ್ ಅಮೀನ್ ನಾಗಂದದಿ, ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ಲ್ , ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

Read More

ಬಡ ಕುಟುಂಬಕ್ಕೆ ಸಹಾಯ ಹಸ್ತ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ವತಿಯಿಂದ ಕೆಂಜಾರು ನಿವಾಸಿ ಶ್ರೀ ಮತಿ ಸುಶೀಲರ ಮಗಳು ಅಮಿತ ರವರ ಮದುವೆಗೆ ₹.10,000/- ಸಹಾಯ ಧನ ನೀಡಲಾಯಿತು. ಸುಶೀಲರವರ ಪತಿ 20 ವರ್ಷಗಳ ಹಿಂದೆಯೆ ತೀರಿ‌ ಹೋಗಿರುತ್ತಾರೆ. ಮಗಳು ಅಮಿತಳೊಂದೆಗೆ ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಇವರು ಈಗ ಕ್ಯಾನ್ಸರ್( last stage)‌ ರೋಗ ದಿಂದ ಬಳಲುತ್ತಿದ್ದು ಮಗಳ ಮದುವೆಗೂ ಹೋಗಲಾರದಂತಹ ಸ್ಥಿತಿಯಲ್ಲಿದ್ದಾರೆ. .ಈ ಸಂದರ್ಭದಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಉಪಾಧ್ಯಕ್ಷರಾದ ಯಶವಂತ್ , ಕಾರ್ಯದರ್ಶಿ ಜಿತೇಶ್ […]

Read More

ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಯುವವಾಹಿನಿ ಸೇವೆ

ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 22.03.2018 ರಂದು ಮುಲ್ಕಿ ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಿದ್ದರು

Read More

ಬಡ ಕುಟುಂಬದ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ

ವರುಷಕ್ಕೊಂದು ಮನೆ ಹರುಷಕ್ಕೊಂದು ನೆಲೆ ಎಂಬ ಘೋಷ ವಾಕ್ಯದ ಮೂಲಕ ಕಳೆದ ವರ್ಷ ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜಕಳ‌ ನಿವಾಸಿ ಅಕ್ಕಮ್ಮ ಎಂಬ ಬಡ ಕುಟುಂಬಕ್ಕೆ ಸುಮಾರು ಐದು ಲಕ್ಷ ವೆಚ್ಚದ ಮನೆ ನಿರ್ಮಿಸಿ ಹಸ್ತಾಂತರ ಮಾಡಿದೆ. ಈ ಸಾಲಿನಲ್ಲಿ ಬಂಟ್ವಾಳ ಮೂಡ ಗ್ರಾಮದ ನಂದಬೆಟ್ಟು ಎಂಬಲ್ಲಿನ‌ ಪ್ರೇಮ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣದ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ದಿನಾಂಕ 18.03.2018 ರಂದು ನಾಟಿ ಕೇಶವ ಶಾಂತಿ […]

Read More

ಮುಲ್ಕಿ ಸರಕಾರಿ ಶಾಲೆಗೆ ಧನಸಹಾಯ ವಿತರಣೆ

ದಿನಾಂಕ 15.03.2018 ರಂದು ದಿ. ಸೋಮಪ್ಪ ಸುವರ್ಣ ರವರ ಸ್ಮರಣಾರ್ಥ ವಾಗಿ ಯುವವಾಹಿನಿ (ರಿ ) ಮುಲ್ಕಿ ಘಟಕದದಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ (ಬೋರ್ಡ್ ಶಾಲೆ) ಗೆ ರೂ 5000/ – ಧನಸಹಾಯ ನೀಡಲಾಯಿತು . ಈ ಸಂದರ್ಭದಲ್ಲಿ ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಕೋಟ್ಯಾನ್ ಮಾಜಿ ಅಧ್ಯಕ್ಷರಾದ ವಿಜಯಕುಮಾರ್ ಕುಬೆವೂರು , ಹರೀಂದ್ರ ಸುವರ್ಣ, ಉದಯ ಅಮೀನ್ ಮಟ್ಟು . ಪ್ರಕಾಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು

Read More

ಬಡ ಕುಟುಂಬಕ್ಕೆ ಉಚಿತ ವಿದ್ಯುತ್ ಸಂಪರ್ಕ

ಸರಕಾರ ಮಾಡುವ ಕೆಲಸವನ್ನು ಯುವವಾಹಿನಿ ಮಾಡುತ್ತಿದೆ, ಉಚಿತ ವಿದ್ಯುತ್ ಕಲ್ಪಿಸುವ ಮೂಲಕ ಬಡವರ ಬಾಳಿಗೆ ಬೆಳಕು ನೀಡಿದಂತಾಗಿದೆ, ಎಂದು ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ತಿಳಿಸಿದರು. ಅವರು ದಿನಾಂಕ 09.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿಯ ಚಿತ್ರಾಪು ನಿವಾಸಿ ದೇವದಾಸ್ ಮನೆಯ ಉಚಿತ ವಿದ್ಯುತ್ ಸಂಪರ್ಕವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]

Read More

ಯುವವಾಹಿನಿಯು ತನ್ನ ಸಾರ್ಥಕ ಕೆಲಸಗಳಿಂದ ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ : ಉಗ್ಗೆಲ್‍ಬೆಟ್ಟು

ಮಂಗಳೂರು: ಅಭಿವೃದ್ಧಿ ಆಗಿದ್ದೇವೆ ಪರಿವರ್ತನೆ ಆಗಿದೆ ಎಂದು ನಾವೆಷ್ಟೇ ಅಂದುಕೊಂಡರೂ ಸಮಾಜದಲ್ಲಿ ಇಂದಿಗೂ ಸಮಸ್ಯೆಗಳು ಇವೆ, ಜನರ ಈ ಸಮಸ್ಯೆಗೆ ಸೂಕ್ತ ಸ್ಪಂದನೆ ನೀಡಿದಾಗ ಜನ ಸಂಘಟನೆಗೆ ಹತ್ತಿರವಾಗುತ್ತಾರೆ ಮತ್ತು ಗೌರವಿಸುತ್ತಾರೆ, ಯುವವಾಹಿನಿಯ ಈ ಸಾರ್ಥಕ ಕೆಲಸಗಳಿಂದಲೇ ಅದು ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ ಎಂದು ಉದ್ಯಮಿ ಸಂತೋಷ್ ಕುಮಾರ್ ಉಗ್ಗೆಲ್‍ಬೆಟ್ಟು ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಹಕಾರದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಬಿಲ್ಲವ ವಧುವರರ ಅನ್ವೇಷಣಾ ಕಾರ್ಯಕ್ರಮದಲ್ಲಿ ಮುಖ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!