Yuvavahini

ಕೇಂದ್ರ ಸಮಿತಿ

ಕೆಸರ್‌ಡೊಂಜಿ ದಿನ :- ಯುವವಾಹಿನಿ ಮಾಣಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]

Read More

ಕೃಷಿಯೇ ಬದುಕಿನ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ :- ಉಮನಾಥ್ ಕೋಟ್ಯಾನ್

ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್ ಬ್ರಹ್ಮಶ್ರೀ ನಾರಾಯಣ […]

Read More

ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ – 2022 ಪ್ರದಾನ ಸಮಾರಂಭ

  ಮಾಣಿ :- ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಕೊಡ ಮಾಡುವ 2022ನೇ ಸಾಲಿನ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಯುವವಾಹಿನಿ (ರಿ.)ಮಾಣಿ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ನೆರವೇರಿತು. ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ಇವರಿಗೆ ಈ ಬಾರಿಯ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ […]

Read More

ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ : ವಿನಯ ಕುಮಾರ್ ಸೊರಕೆ

ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲಿದೆ, ಈ ನಿಟ್ಟಿನಲ್ಲಿ ಯುವವಾಹಿನಿಯ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭದ ಯಶಸ್ಸು ಸಂಘಟನೆಯ ಯಶಸ್ಸು ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ರಾಜ್ಯಾದ್ಯಂತ 33 ಘಟಕಗಳನ್ನು ಹೊಂದಿರುವ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಅಂತ‌ರ್ ಘಟಕ ಸಾಂಸ್ಕೃತಿಕ […]

Read More

ಯುವಾಹಿನಿಯಿಂದ ಕಾಮನ್‌ವೆಲ್ತ್ ಪದಕ ವೀರ ಗುರುರಾಜ್ ಪೂಜಾರಿಗೆ ಗೌರವ ಅಭಿನಂದನೆ

ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್‌ ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ […]

Read More

ಉತ್ತಮ ನಡವಳಿಕೆ ಸಾಂಸ್ಕೃತಿಕ ಚಟುವಟಿಕೆಗೆ ಸಹಕಾರಿ :- ಸುನೀಲ್ ಕುಮಾರ್

ಕಟಪಾಡಿ :- ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಭಾಷೆ , ಸಂಸ್ಕೃತಿಯ ಒಡನಾಟದಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜವನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ಸಾಧ್ಯ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ […]

Read More

ಯುವವಾಹಿನಿಯಿಂದ ಕಡಲತಡಿಯ ಸ್ವಚ್ಛತಾ ಅಭಿಯಾನ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ, ಯುವವಾಹಿನಿಯ ವಿವಿಧ ಘಟಕಗಳ ಸಹಕಾರದಲ್ಲಿ, “ಕಡಲತಡಿಯ ಸ್ವಚ್ಛತಾ ಅಭಿಯಾನ” ವು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದಿನಾಂಕ 12 ಆಗಸ್ಟ್ 2022ರ ಶುಕ್ರವಾರದಂದು ಪಣಂಬೂರು ಬೀಚ್ ನಲ್ಲಿ MPEDA – NETFISH ಸಂಸ್ಥೆಯು Coastal clean – up Programme ಕಾರ್ಯಕ್ರಮವನ್ನು ಆಯೋಜಿಸಿತ್ತು. ಯುವವಾಹಿನಿ (ರಿ.) ಮಂಗಳೂರು ಘಟಕವು ಈ ಕಾರ್ಯಕ್ರಮವನ್ನು ಸಂಘಟಿಸಿದ್ದು, ಕೇಂದ್ರ ಸಮಿತಿಯ ಕಡಲತಡಿಯ ವಿವಿಧ ಘಟಕಗಳು ಇದರಲ್ಲಿ ಭಾಗವಹಿಸಿದ್ದವು. ಈ […]

Read More

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಯುವವಾಹಿನಿ ಸಂಸ್ಥೆಯಿಂದ ಸಾಂತ್ವನ ಹಾಗೂ ಧನ ಸಹಾಯ ಹಸ್ತಾಂತರ

ಮಂಗಳೂರು :- ದಿನಾಂಕ 26 ಜುಲೈ 2022 ರಂದು ದುಷ್ಕರ್ಮಿಗಳ ದಾಳಿಗೆ ಒಳಗಾಗಿ ನಮ್ಮನ್ನಗಲಿದ ಯುವವಾಹಿನಿ (ರಿ.) ಸುಳ್ಯ ಘಟಕದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರು ಇವರ ಮನೆಗೆ ಈ ದಿನ ಯುವವಾಹಿನಿ ಕೇಂದ್ರ ಸಮಿತಿಯ ತಂಡವು ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ನೇತ್ರತ್ವದಲ್ಲಿ ದಿನಾಂಕ 04 ಆಗಸ್ಟ್ 2022 ರಂದು ಪ್ರವೀಣ್ ಇವರ ಪತ್ನಿ ನೂತನ ಹಾಗೂ ಪ್ರವೀಣ್ ಇವರ ತಂದೆ ತಾಯಿಯನ್ನು ಅವರ […]

Read More

ಭಜನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಡಾ. ಅರುಣ್ ಉಳ್ಳಾಲ್

ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್‌ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]

Read More

ಯುವವಾಹಿನಿ ಬಜಪೆ ಘಟಕ ಪ್ರಥಮ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!