Yuvavahini

ಕೇಂದ್ರ ಸಮಿತಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.

Read More

ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ – 2024

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾ‌ರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಅತಿಥ್ಯದಲ್ಲಿ ಉರ್ವಾಸ್ಟೋರ್ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣ’ ದಲ್ಲಿ 10-11-2024 ರಂದು ಭಾನುವಾರ 2024 ನೇ ಸಾಲಿನ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ಮಿನುಗು ನಕ್ಷತ್ರರಾಗಿ, ದಂತ ಕತೆಯಾಗಿದ್ದ ವಿಶುಕುಮಾ‌ರ್ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ. ತಮ್ಮ ಜೀವಿತಾವಧಿಯಲ್ಲಿ ಅವರು ತಮ್ಮ ನಾಟಕಗಳ ಮೂಲಕ […]

Read More

ಬೇಬಿ ಪೂಜಾರಿ ಬದುಕಿಗೆ ಆಸರೆಯ ಬೆಳಕಾದ ಯುವವಾಹಿನಿ

ಮಂಗಳೂರು : ಮಂಗಳೂರು ತಾಲೂಕು ಬೊಂಡಂತಿಲ ಗ್ರಾಮದ ತಾರಿಗುಡ್ಡೆ ನಿವಾಸಿ ಬೇಬಿ ಪೂಜಾರಿ ಕುಟುಂಬಕ್ಕೆ ದಿನಾಂಕ 20-10-2024 ರಂದು ಯುವವಾಹಿನಿ ಸಂಸ್ಥೆಯು ಸುಮಾರು ರೂ 6.40 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯ ಹಸ್ತಾಂತರ ಸಮಾರಂಭದಲ್ಲಿ ಉದ್ಯಮಿ ದಯಾನಂದ ಬಂಗೇರ ದೀಪ ಬೆಳಗಿ ಉದ್ಘಾಟಿಸಿದರು. ಮಾನವತಾವಾದಿ ನಾರಾಯಣ ಗುರುಗಳ‌ ಸಂದೇಶದಂತೆ ಯುವವಾಹಿನಿ ಮಾಡುತ್ತಿರುವ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಡಾ.ಎನ್.ಟಿ.ಅಂಚನ್ ಅಶಕ್ತ ಕುಟುಂಬಕ್ಕೆ ಮನೆ ಹಸ್ತಾಂತರ ಮಾಡಿ ಮಾತನಾಡಿದರು. ಯುವವಾಹಿನಿಯ ಮನೆ […]

Read More

ಬಿರುವೆರ್ ಕುಡ್ಲ (ರಿ.) ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ.) ಮಂಗಳೂರು ಸಂಘಟನೆಯ ದಶಮಾನೋತ್ಸವದ ಸವಿನೆನಪಿಗಾಗಿ, ಕಳೆದ 36 ವರ್ಷಗಳಿಂದ ಸುಧೀರ್ಘ ಸಮಾಜಮುಖಿ ಸೇವೆಯನ್ನು ನೀಡುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ಯದ ಪ್ರತಿಷ್ಠಿತ ಸಂಸ್ಥೆಯಾದ ಯುವವಾಹಿನಿಯ ಸೇವೆಯನ್ನು ಗುರುತಿಸಿ, ಗೌರವಿಸಿ, ಗೌರವದ ಸನ್ಮಾನ ನೀಡಿದೆ. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಯುವವಾಹಿನಿಯ ಪರವಾಗಿ ಸನ್ಮಾನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಜೊತೆ […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅನ್ನಪ್ರಸಾದಕ್ಕೆ ಯುವವಾಹಿನಿಯ ದೇಣಿಗೆ

ಮಂಗಳೂರು : – ಯುವವಾಹಿನಿ ಸಂಸ್ಥೆಯು , ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ಜಗದ್ವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಸುಸಂಸರ್ಭದಲ್ಲಿ ಜರಗುತ್ತಿರುವ ನಿರಂತರ “ಅನ್ನ ಪ್ರಸಾದ” ಸೇವೆಗೆ, ಯುವವಾಹಿನಿ ಕೇಂದ್ರ ಸಮಿತಿ ಹಾಗೂ ವಿವಿಧ ಘಟಕಗಳ ಸಹಕಾರದಿಂದ ₹ 3,00,000/- (ಮೂರು ಲಕ್ಷದ) ದೇಣಿಗೆಯನ್ನು ಶಾರದಾ ಮಾತೆಯ ಸನ್ನಿಧಿಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಎಚ್.ಎಸ್ ಸಾಯಿರಾಂ ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ . ಕೆ ಪೂಜಾರಿ, ಪ್ರಧಾನ ಕಾರ್ಯದರ್ಶಿ […]

Read More

ಕುಣಿದು ಭಜಿಸಿರೋ : ಭಾವ – ಗಾನ – ಕುಣಿತ :: ಅಂತರ್ ಘಟಕ ಭಜನಾ ಸ್ಪರ್ಧೆ ಸಂಪನ್ನ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ), ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಕಾರದೊಂದಿಗೆ ದಿನಾಂಕ‌ 01.09.2024 ನೇ ಭಾನುವಾರ ಕುಣಿದು ಭಜಿಸಿರೋ : ಭಾವ – ಗಾನ – ಕುಣಿತ :: ಅಂತರ್ ಘಟಕ ಭಜನಾ ಸ್ಪರ್ಧೆ ಯಶಸ್ವೀಯಾಗಿ ಸಂಪನ್ನಗೊಂಡಿತು ಯುವಶಕ್ತಿ ದೇಶದ ಪ್ರಭಲ ಶಕ್ತಿ ಈ ನಿಟ್ಟಿನಲ್ಲಿ ಯುವಜನತೆಯಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಪ್ರಜ್ಞೆ ಮೂಡಿಸುವಲ್ಲಿ ಯುವವಾಹಿನಿ ಸಂಸ್ಥೆಯ ಪಾತ್ರ ಶ್ಲಾಘನೀಯ ಎಂದು ಯುವವಾಹಿನಿಯ […]

Read More

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ‌ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ […]

Read More

ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು:  ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಮತ್ತು ಯುವವಾಹಿನಿ ಘಟಕಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇದರ ಸಹಯೋಗದೊಂದಿಗೆ ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ 04-08-2024 ರಂದು ರವಿವಾರ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಇವರು ದೀಪ ಬೆಳಗಿಸಿ ಉದ್ಘಾಟಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!