Yuvavahini

ವಿದ್ಯೆ

ಯುವವಾಹಿನಿ ಅನ್ವೇಷಣಾ ಪ್ರಶಸ್ತಿ -2017 ಪ್ರದಾನ

ವಿದ್ಯೆಯು ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ಪೂರಕವಾದುದು. ಶಿಕ್ಷಣ ದ ಬಗೆಗಿನ ಕಾಳಜಿಯು ಅಗತ್ಯವಾದುದು. ಯಾವುದೇ ಪ್ರತಿಷ್ಠೆ, ಸ್ಥಾನಮಾನಕ್ಕಾಗಿ ನಮ್ಮ ಕೆಲಸ ಕಾರ್ಯಗಳು ಇರಕೂಡದು. ನಿಸ್ವಾರ್ಥ ವಾದ ಮನಸ್ಸಿನ ಸೇವೆಯನ್ನು ಸಮಾಜ ಗುರುತಿಸುತ್ತದೆ. ಸಾಮಾಜಿಕ ಸೇವೆಯಿಂದ ದೊರೆಯುವ ತೃಪ್ತಿ ಎಲ್ಲಾ ಬಗೆಯ ಸನ್ಮಾನ ಪ್ರಶಂಸೆಗಳನ್ನು ಮೀರಿದುದು. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಕೂಡದು ಎನ್ನುವ ಮಹತ್ವಾಕಾಂಕ್ಷೆ ಯಿಂದ ಎಲ್ ಸಿ ಆರ್ ವಿದ್ಯಾಸಂಸ್ಥೆಯನ್ನು ಪ್ರಾರಂಭಿಸಿದೆ. ಅನೇಕ ಮಂದಿ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣವನ್ನು ಈ ವಿದ್ಯಾಸಂಸ್ಥೆಯಲ್ಲಿ ಪಡೆಯುತ್ತಿದ್ದಾರೆ. ಇದು […]

Read More

ನಾರಾಯಣಗುರು ಅನುಸರಿಸಿದ್ದು ಸಂಘರ್ಷದ ಹಾದಿಯಲ್ಲ;ಸಾಮರಸ್ಯ ಮಾರ್ಗ : ದಿನೇಶ್ ಅಮೀನ್ ಮಟ್ಟು

ಬಂಟ್ವಾಳ : ಮನುಷ್ಯ ಪರಿಸರದ ಕೂಸು. ಪ್ರತಿಭೆಗೆ ಯಾವುದೇ ಜಾತಿಯ ಹಂಗಿಲ್ಲ. ನಮ್ಮೊಳಗಿನ ಕೀಳರಿಮೆಯನ್ನು ಮೊದಲು ಕಸದ ಬುಟ್ಟಿಗೆ ಹಾಕಿ ನಮ್ಮ ದೃಷ್ಟಿ ಗುರಿಯ ಸಾಧನೆಯ ಕಡೆಗೆ ಇರಬೇಕು. ಆತ್ಮ ವಿಶ್ವಾಸಕ್ಕಿಂತ ದೊಡ್ಡ ಶಕ್ತಿ ಇನ್ನೊಂದು ಇಲ್ಲ. ಚರಿತ್ರೆಯನ್ನು ಅಧ್ಯಯನ ಮಾಡಿದರೆ ನಮಗೆ ಗೊತ್ತಾಗುತ್ತೆ, ಯಾರು ಕೂಡ ಒಮ್ಮೆಲೆ ನಾಯಕರಾಗಿ ರೂಪುಗೊಳ್ಳೊದಿಲ್ಲ. ಯಾವುದಾದರೊಂದು ಹೋರಾಟದ ಕಾರಣವಾಗಿ ನಾಯಕರುಗಳು ರೂಪುಗೊಳ್ಳುತ್ತಾರೆ. ನಾರಾಯಣ ಗುರುಗಳು ಸಮಾಜಕ್ಕಾಗಿ ಬದುಕಿದವರು. ಸಮಾಜದ ಎಲ್ಲಾ ಬಗೆಯ ಸಮಸ್ಯೆಗಳಿಗೆ ಶಿಕ್ಷಣವು ಚಿಕಿತ್ಸೆ ಯಾಗುತ್ತೆ ಎಂಬ ನಂಬಿಕೆ […]

Read More

ಯುವವಾಹಿನಿ: ಅನ್ವೇಷಣಾ -2017 ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

  ಬಂಟ್ವಾಳ: ಯಾವುದೇ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರಿಯಲು ಶಿಕ್ಷಣವು ಅಗತ್ಯ. ಶಿಕ್ಷಣದಿಂದ ಅವಕಾಶವಂಚಿತ ವಿದ್ಯಾರ್ಥಿಗಳನ್ನು ಗುರುತಿಸಿ ಯೋಗ್ಯ ರೀತಿಯ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಯುವವಾಹಿನಿ ಸಂಸ್ಥೆ ಮಾಡುತ್ತಿದೆ. ಶಿಕ್ಷಣವು ಮಾನವನನ್ನು ವಿದ್ಯಾವಂತನನ್ನಾಗಿ ಮಾಡುವುದು ಮಾತ್ರವಲ್ಲ, ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣ ಮಾಡುವ ಮಹತ್ವಪೂರ್ಣ ಕೆಲಸವನ್ನೂ ನಿರ್ವಹಿಸುತ್ತದೆ. ಯುವ ಮನಸ್ಸುಗಳಿಗೆ ಸೂಕ್ತ ರೀತಿಯ ತರಬೇತಿ ನೀಡುವ ಮೂಲಕ ಸಮರ್ಥ ರಾಷ್ಟ್ರವನ್ನು ಕಟ್ಟಬಹುದು ಎಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ ಸಜೀಪ ಮೂಡದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಭಿಪ್ರಾಯ […]

Read More

ಯುವಜನ ಜಾಗೃತಿ ಪ್ರಗತಿ – ಕಾರ್ಯಾಗಾರ ವಿಕಸನದ ವೇದಿಕೆ : ಯಶವಂತ ಪೂಜಾರಿ

ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಘಟಕ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಉಪನ್ಯಾಸ, ಸಂವಾದ, ಸಮನ್ವಯ ಕಾರ್ಯಾಗಾರವು ದಿನಾಂಕ ೨೩-೧೨-೨೦೧೭ ರಂದು ಗೋಕರ್ಣನಾಥೇಶ್ವರ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರವು ಅವಶ್ಯಕವಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾರ್ಯಾಗಾರವನ್ನು ಉಧ್ಘಾಟಿಸಿದ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಣುಕಾ ಕೆ ತಿಳಿಸಿದರು . ಉದ್ಯಮಿ ಶ್ರೀ ದತ್ತೇಶ್ ಪೂಜಾರಿ , ಪ್ರಿಯಾ ವುಡ್ ವರ್ಕ್ಸ್ […]

Read More

ಯುವವಾಹಿನಿ ನಾಯಕರನ್ನು ಸ್ರಷ್ಟಿಸುವ ಕಾರ್ಖಾನೆ : ಶಂಕರ್ ಸುವರ್ಣ

ಯುವವಾಹಿನಿ ನಾಯಕರನ್ನು ಸ್ರಷ್ಟಿಸುವ ಕಾರ್ಖಾನೆಯಾಗಿದೆ , ಕಳೆದ ಮೂವತ್ತ್ತು ವರ್ಷಗಳ ಸಾರ್ಥಕ್ಯ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಯುವವಾಹಿನಿ ಯುವ ಜನಾಂಗಕ್ಕೆ ವ್ಯಕ್ತಿತ್ವ ವಿಕಸನ , ಸಭಾ ನಡಾವಳಿ ಕಾರ್ಯಾಗಾರದ ಮೂಲಕ ವಿಕಸನದ ನಾಂದಿಯಾಗಿದೆ , ವಿದ್ಯಾರ್ಥಿಗಳಿಗೆ ಚತುರ್ಮುಖ, ಅನ್ವೇಷಣಾ ಕಾರ್ಯಾಗಾರದ ಮೂಲಕ ಸ್ರಜನಶೀಲತೆ ಸ್ರಷ್ಟಿಸಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕೆರ್ ಸುವರ್ಣ ತಿಳಿಸಿದರು . ಅವರು ದಿನಾಂಕ 17.12.2017 ರಂದು ಯುವವಾಹಿನಿ (ರಿ) ಬೆಳುವಾಯಿ ಘಟಕದ ಆಶ್ರಯದಲ್ಲಿ ಜರುಗಿದ ವ್ಯಕ್ತಿತ್ವ […]

Read More

ಅಷ್ಟ ದಿಕ್ಕುಗಳಲ್ಲಿ ಮಾರ್ದನಿಸಿದ ಚತುರ್ಮುಖ

ಮಂಗಳೂರು : ಪ್ರತಿಯೊಬ್ಬರ ಜೀವನದಲ್ಲೂ ಪ್ರತಿದಿನವೂ ವಿದ್ಯಾರ್ಥಿ ಜೀವನವೇ ಆಗಿದೆ, ಪ್ರತಯೊಬ್ಬರಿಂದಲೂ ನಾವು ಕಲಿಯುವ ವಿಷಯ ಸಾಕಷ್ಟಿರುತ್ತದೆ. ಪ್ರತಿ ದಿನವೂ ತಿಳಿಯುವುದೇ ಒಂದು ಜೀವನ ಈ ನಿಟ್ಟಿನಲ್ಲಿ ಯುವವಾಹಿನಿ ಹಮ್ಮಿಕೊಂಡಿರುವ ಚತುರ್ಮುಖ ಒಂದು ಹೊಸ ಮತ್ತು ಉತ್ತಮ ಪ್ರಯತ್ನ, ಇಲ್ಲಿ ಎಲ್ಲರೂ ಜೊತೆಯಾಗಿ ಕಲಿಯುವ ಅವಕಾಶ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಯುತ ಕೆ.ಎಸ್ ಬಿಳಗಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಪುರಭವನದಲ್ಲಿ ಹಮ್ಮಿಕೊಂಡಿದ್ದ ಕಾನೂನು, ನ್ಯಾಯ, ಲೇಖನಿ […]

Read More

ಯುವ ಪ್ರೇರಣಾ – 2017

ಮಂಗಳೂರು : ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ), ಮಂಗಳೂರು- ಇದರ ವತಿಯಿಂದ ವಿದ್ಯಾರ್ಥಿಗಳ ಯುವ ಪ್ರೇರಣಾ -೨೦೧೭ ಎಂಬ ಕಾರ್ಯಕ್ರಮವು ದಿನಾಂಕ 26.11.2017 ನೇ ರವಿವಾರದಂದು ಬೆಳಿಗ್ಗೆ 09.30 ರಿಂದ ಮಧ್ಯಾಹ್ನ 11.30 ರ ವರೆಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ, ರಘು ಬಿಲ್ಡಿಂಗ್, ಉರ್ವಸ್ಟೋರ್, ಮಂಗಳೂರು ಇಲ್ಲಿ ಜರಗಿತು. ಪ್ರಸ್ತುತ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿರುವ, ವಿದ್ಯಾಭ್ಯಾಸವನ್ನು ಮುಗಿಸಿ ಉದ್ಯೋಗವನ್ನು ಪಡೆದುಕೊಂಡವರು ಒಟ್ಟು ಸುಮಾರು ೨೫ ವಿದ್ಯಾರ್ಥಿಗಳು ಈ ಸಂವಹನವನ್ನು ಒಳಗೊಂಡ ಯುವಪ್ರೇರಣಾ-2017  ಶಿಬಿರದಲ್ಲಿ ಪಾಲ್ಗೊಂಡಿದ್ದರು. ಯುವವಾಹಿನಿ (ರಿ) […]

Read More

ವ್ಯಕ್ತಿತ್ವ ವಿಕಸನ, ಭಾಷಣ ಕಲೆ ತರಬೇತಿ ಕಾರ್ಯಾಗಾರ

ಮಾಣಿ: ಯುವವಾಹಿನಿ ಮಾಣಿ ಘಟಕದ ವತಿಯಿಂದ ಸದಸ್ಯರಿಗೆ ಒಂದು ದಿನದ ವ್ಯಕ್ತಿತ್ವ ವಿಕಸನ ಮತ್ತು ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ಯುವಸ್ಫೂರ್ತಿ-2017 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲಡ್ಕ ಬಿಳಿಯೂರಿನಲ್ಲಿದಿನಾಂಕ 19.11.2017 ರಂದು   ನಡೆಸಲಾಯಿತು. ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೋಕ್ತೇಸರ ಚಂದಪ್ಪ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ರಾಜೇಶ್ ಪೂಜಾರಿ ಬಾಬನಕಟ್ಟೆ ಅನಂತಾಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ […]

Read More

ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ

ಯವವಾಹಿನಿಯ (ರಿ) ಕಂಕನಾಡಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನದ ಪ್ರಯುಕ್ತ ದಿನಾಂಕ 10.09.2017ರಂದು ಗೋರಿಗುಡ್ಡೆ ಕಿಟ್ಟೆಲ್ ಮೆಮೋರಿಯಲ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿ, ಉದಯಶಂಕರ್ ಮತ್ತು ರೇವತಿ ಟೀಚರ್ ಇವರು ತೀರ್ಪುಗಾರರಾಗಿ ಭಾಗವಹಿಸಿದರು ಹಾಗೂ ಈ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹಾಗೂ ಯುವವಾಹಿನಿ ಕಂಕನಾಡಿ ಘಟಕದ ಸದಸ್ಯರಿಗೆ ಅಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕಂಕನಾಡಿ […]

Read More

ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ

ದೇಶದ ಸುಭದ್ರ ಭವಿಷ್ಯ ಮತ್ತು ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ್ ಪಡಂಗ ತಿಳಿಸಿದರು ಅವರು ದಿನಾಂಕ 05.09.2017ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಮುಲ್ಕಿ ರುಕ್ಕುರಾಮ್ ಸಭಾಗೃಹದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಹಿರಿಯ ಶಿಕ್ಷಕರಾದ ಗಂಗಾಧರ್ ಪೂಜಾರಿ ಹಾಗೂ ವೀಣಾ ಸಿ.ಶೆಟ್ಟಿಗಾರ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!