Yuvavahini

ಮಾಣಿ

ಯುವ ವೃಕ್ಷೋತ್ಸವದ ನಾಲ್ಕನೇ ಹಂತ: ರುದ್ರಭೂಮಿ ಹಾಗೂ ಅಂಗನವಾಡಿಯಲ್ಲಿ ಹಸಿರಿನ ಸಂಕಲ್ಪ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ವೃಕ್ಷೋತ್ಸವ – 2026ರ ನಾಲ್ಕನೇ ಹಂತದ ಅಂಗವಾಗಿ ಕೆದಿಲ ಗ್ರಾಮ ಪಂಚಾಯಿತಿಯ ರುದ್ರಭೂಮಿಯಲ್ಲಿ ವೃಕ್ಷಾರೋಪಣ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. “ಇಂದು ನೆಡುವ ಗಿಡ ನಾಳೆಯ ಪೀಳಿಗೆಗೆ ನೀಡುವ ಅಮೂಲ್ಯ ಉಡುಗೊರೆ” ಎಂಬ ಸಂದೇಶದೊಂದಿಗೆ ನಡೆದ ಕಾರ್ಯಕ್ರಮದಲ್ಲಿ, “ಅಂತಿಮ ಯಾತ್ರೆಯ ತಾಣವಾಗಿರುವ ರುದ್ರಭೂಮಿಯೂ ಹಸಿರಿನಿಂದ ಕಂಗೊಳಿಸಿದಾಗ, ಅದು ಜೀವನದ ನಿರಂತರತೆಯ ಸಂಕೇತವಾಗುತ್ತದೆ” ಎಂಬ ಪರಿಸರ ಕಾಳಜಿಯ ಸಂದೇಶವನ್ನು ಸಾರಲಾಯಿತು. ಈ ಸಂದರ್ಭದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು […]

Read More

ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮ

ಮಾಣಿ : “ಮರದ ನೆರಳು ಬದುಕಿಗೆ ನೆರಳು” ಎಂಬ ಧ್ಯೇಯೋದ್ದೇಶದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಕೆದಿಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬರಿಮಾರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಹಾಗೂ ಅಂಗನವಾಡಿ ಕೇಂದ್ರ ಪೆರಾಜೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರದ ಕುರಿತು ಜಾಗೃತಿ […]

Read More

ಕರುಣೆಯ ಹೃದಯಗಳಿಂದ ಮೂಡಿದ ಸೇವೆಯ ಸ್ಪರ್ಶ, ಸಂಕಷ್ಟದಲ್ಲಿರುವವರಿಗೆ ಬದುಕಿನ ಆಶಾಕಿರಣ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆಯಾದ “ಯುವ ಸೇವಾ ಸ್ಪರ್ಶ” ಕಾರ್ಯಕ್ರಮದಡಿ ಮೊದಲನೇ ಸೇವಾ ಹಸ್ತವನ್ನು ಅಗತ್ಯವಿರುವ ಕುಟುಂಬವೊಂದಕ್ಕೆ ವಿತರಿಸಲಾಯಿತು. ಮಾಣಿ ಗ್ರಾಮದ ದಿವಂಗತ ವೀರಪ್ಪ ಪೂಜಾರಿ ಅವರ ಕುಟುಂಬವು ಆರ್ಥಿಕ ಹಾಗೂ ಆರೋಗ್ಯ ಸಂಬಂಧಿತ ಸಂಕಷ್ಟಗಳನ್ನು ಎದುರಿಸುತ್ತಿದ್ದು, ನಾಲ್ಕು ಹೆಣ್ಣು ಮಕ್ಕಳ ಪೈಕಿ ಮೂವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕುಟುಂಬದ ಒಬ್ಬ ಸದಸ್ಯರು ಮಾತ್ರ ದುಡಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಈ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಯುವವಾಹಿನಿ (ರಿ.) […]

Read More

ಯುವ ವೃಕ್ಷೋತ್ಸವಕ್ಕೆ ಚಾಲನೆ

ಮಾಣಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು – ಬದುಕಿಗೆ ನೆರಳು” ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ದಿನಾಂಕ 05.06.2026ರಂದುನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದ ವಠಾರದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ನಾರಾಯಣಗುರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಸಾಲಿಯಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಕಾರ್ಯದರ್ಶಿ […]

Read More

ಯುವ ಸ್ನೇಹ ಸಂಭ್ರಮ – 2026

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮೇ 24, 2026ರಂದು ಆಯೋಜಿಸಲಾದ “ಯುವ ಸ್ನೇಹ ಸಂಭ್ರಮ – 2026” ಎಂಬ ಒಂದು ದಿನದ ಸ್ನೇಹ ಪ್ರವಾಸವು ಅತ್ಯಂತ ಸಂತೋಷ, ಸೌಹಾರ್ದತೆ ಹಾಗೂ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ಪ್ರವಾಸ ಆರಂಭಕ್ಕೂ ಮುನ್ನ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಕೊಡಾಜೆ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬೆಳಿಗ್ಗೆ 6.00 ಗಂಟೆಗೆ ಸದಸ್ಯರು ಪ್ರವಾಸಕ್ಕೆ ಚಾಲನೆ ನೀಡಿದರು. ಮೊದಲಿಗೆ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರ ಹಾಗೂ ಬಳಿಕ […]

Read More

ಯುವವಾಹಿನಿ (ರಿ) ಮಾಣಿ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿ ಪಡೆಯಿತು

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಮಾಣಿ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಯನ್ನು ಪಡೆಯಿತು

Read More

ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದಿಕ್ಕು ತಪ್ಪಿದ ಯುವಕರನ್ನು ಸರಿದಾರಿಗೆ ತರಬೇಕು.. ಕುಮಾರಚಂದ್ರ

ಮಾಣಿ: ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ದಿಕ್ಕು ತಪ್ಪಿದ್ದು, ಅಂಥವರನ್ನು ಸರಿ ಮಾಡುವ ಉತ್ತಮ ಕೆಲಸ ಯುವವಾಹಿನಿ ಸಂಘಟನೆಯ ಮೂಲಕ ಆಗಬೇಕು ಎಂದು ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಹೇಳಿದರು.ಅವರು ಮಾರ್ಚ್ 29 ರವಿವಾರ ಮಾಣಿ ಕೊಡಾಜೆಯ ನಕ್ಷತ್ರ ಅಡಿಟೋರಿಯಂನಲ್ಲಿ ನಡೆದ ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಶಿವರಾಜ್ ಪಿ ಆರ್ ವಹಿಸಿದ್ದರು.ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ […]

Read More

ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆ

ಮಾಣಿ : ಯುವವಾಹಿನಿ (ರಿ) ಮಾಣಿ ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆಯಾಗಿದ್ದಾರೆ. ಪ್ರಥಮ ಉಪಾಧ್ಯಕ್ಷರು : ಸುಜಿತ್ ಅಂಚನ್ ಮಾಣಿದ್ವಿತೀಯ ಉಪಾಧ್ಯಕ್ಷರು : ಸತೀಶ್ ಕೊಪ್ಪರಿಗೆಕಾರ್ಯದರ್ಶಿ: ವಿಶ್ವನಾಥ ಉರ್ದಿಲ,ಜತೆ ಕಾರ್ಯದರ್ಶಿ : ಶಶಿಪ್ರಭಾ ಮಿತ್ತೂರು,ಕೋಶಾಧಿಕಾರಿ : ತ್ರಿವೇಣಿ ರಮೇಶ್ ಮುಜಲ, ಸಾಂಸ್ಕೃತಿಕ ನಿರ್ದೇಶಕರು : ಕೃಪಾನ್ ಪುತ್ತೂರು,ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಶ್ರೀಧರ್ ಮುಜಲ,ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸತೀಶ್ ಮುರುವ,ಕಲೆ ಮತ್ತು ಸಾಹಿತ್ಯ […]

Read More

ಕ್ರೀಡೆ ಯುವ ಮನಸ್ಸುಗಳನ್ನು ಒಗ್ಗೂಡಿಸುವ ಬಾಂಧವ್ಯದ ಶಕ್ತಿ – ಅಶೋಕ್ ಪಡ್ಪು

ಮಾಣಿ : ಕ್ರೀಡೆ ಎಂಬುದು ಕೇವಲ ದೈಹಿಕ ಚಟುವಟಿಕೆಗೆ ಸೀಮಿತವಲ್ಲ; ಅದು ಯುವ ಮನಸ್ಸುಗಳನ್ನು ಒಗ್ಗೂಡಿಸುವ ಬಾಂಧವ್ಯದ ಶಕ್ತಿಯಾಗಿದ್ದು, ಸಂಘಟನಾ ಬಲವರ್ಧನೆಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಹೇಳಿದರು.ಅವರು ಗಣರಾಜ್ಯೋತ್ಸವದ ಅಂಗವಾಗಿ ದಿನಾಂಕ 26/01/2026 ರಂದು ಬಂಟ್ವಾಳ ತಾಲೂಕಿನ ಅನಂತಾಡಿಯ ಚಿತ್ತರಿಗೆ ಗದ್ದೆಯಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಲೀಗ್ ಮಾದರಿಯ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟ “ಯುವ ಫ್ಯಾಮಿಲಿ ಚಾಂಪಿಯನ್ಸ್ ಕ್ರಿಕೆಟ್ […]

Read More

ಯುವವಾಹಿನಿ ಅಶ್ರಯ ಯೋಜನೆಯಡಿಯಲ್ಲಿ ನಿರ್ಮಿಸಿದ ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಪೆಲತ್ತಡಿ ಕಮಲ ಪೂಜಾರ್ತಿಯವರಿಗೆ ಮನೆಯ ಹಸ್ತಾಂತರ -ಯುವವಾಹಿನಿ(ರಿ) ಮಾಣಿ ಘಟಕ

ಯುವವಾಹಿನಿ(ರಿ)ಕೇಂದ್ರಸಮಿತಿಯ ಸಹಕಾರದೊಂದಿಗೆ ಯುವವಾಹಿನಿ ಅಶ್ರಯ ಯೋಜನೆಯಡಿಯಲ್ಲಿ ನಿರ್ಮಿಸಿದ ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಪೆಲತ್ತಡಿ ಕಮಲ ಪೂಜಾರ್ತಿಯವರಿಗೆ ಮನೆಯ ಹಸ್ತಾಂತರ ಕಾರ್ಯಕ್ರಮ ಹಾಗೂ ತುಳಸಿ ಪೂಜಾ ಆಚರಣೆ ದಿನಾಂಕ 12.11.2025 ಬುಧವಾರ . ಸಂಜೆ ಭಜನಾ ಕಾರ್ಯಕ್ರಮದ ಜೊತೆಗೆ ತುಳಸಿ ಪೂಜೆಯ ನಂತರ ಸಭಾ ಕಾರ್ಯಕ್ರಮವನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ) ಕುದ್ರೋಳಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ನವೀನ್ ಚಂದ್ರ ಡಿ ಸುವರ್ಣ ಇವರು ಉದ್ಘಾಟಿಸಿದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!