Yuvavahini

ಮೂಡಬಿದ್ರಿ

ಯುವವಾಹಿನಿ ಕ್ರೀಡೋತ್ಸವದ ಯಶಸ್ವಿ ಆಯೋಜನೆಗೆ ಆಳ್ವಾಸ್ ಫೌಂಡೇಶನ್ ಸಹಕಾರದ ಭರವಸೆ

ಮೂಡುಬಿದಿರೆ, ಜುಲೈ 16: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ಯಶಸ್ವಿ ಆಯೋಜನೆ ಕುರಿತು ಸಮಾಲೋಚನಾ ಸಭೆ ಇಂದು ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರನ್ನು ಭೇಟಿ ಮಾಡಿ ನಡೆಸಲಾಯಿತು. ಸಭೆಯಲ್ಲಿ ಕ್ರೀಡೋತ್ಸವದ ರೂಪುರೇಷೆ, ವ್ಯವಸ್ಥಾಪನೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಚರ್ಚಿಸಿ, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಆಳ್ವಾಸ್ ಫೌಂಡೇಶನ್‌ನ ಸಹಕಾರ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ […]

Read More

ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ

ಮೂಡುಬಿದಿರೆ, ಜುಲೈ 11: ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಮಾನಸಿಕ ಆರೋಗ್ಯದ ಮಹತ್ವ ತಿಳಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಆಳ್ವಾಸ್ ಪುನರ್ಜನ್ಮ ಮದ್ಯ-ಮಾದಕ ವಸ್ತು ವ್ಯಸನ ಮುಕ್ತಿ ಹಾಗೂ ಮನೋರೋಗ ಚಿಕಿತ್ಸಾ ಕೇಂದ್ರ, ಮಿಜಾರು ಹಾಗೂ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿ ಮನೋಹಿತ” ಆರೋಗ್ಯ ಮಾಹಿತಿ ಕಾರ್ಯಾಗಾರ ಜ್ಯೋತಿನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಆಪೋಲೀನೋ […]

Read More

ಯುವವಾಹಿನಿ (ರಿ.) ಮೂಡುಬಿದಿರೆ ಘಟಕದಿಂದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಸಮಾರೋಪ

ಮೂಡುಬಿದಿರೆ, ಜೂನ್ 29: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮೂಡುಬಿದಿರೆಯ ಸಮಾಜ ಮಂದಿರದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಮಾತನಾಡಿ, ಮಹಿಳೆಯರು ಕಾಲಕ್ಕೆ ತಕ್ಕಂತೆ ಬೇಡಿಕೆಯಿರುವ ಕೌಶಲ್ಯಗಳನ್ನು ಕಲಿತು ಸ್ವಯಂ […]

Read More

ಯುವವಾಹಿನಿ ಕ್ರೀಡೋತ್ಸವ 2026 : ಆಮಂತ್ರಣ ಬಿಡುಗಡೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 2026ನೇ ಅಕ್ಟೋಬರ್ 4ರಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಯುವವಾಹಿನಿ ಕ್ರೀಡೋತ್ಸವ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು

Read More

ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಉದ್ಘಾಟನೆ

ಮೂಡುಬಿದಿರೆ, ಜೂನ್ 23: ಯುವವಾಹಿನಿ (ರಿ.) ಮೂಡುಬಿದರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ ಮೂಡುಬಿದರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾರ್ಯಕ್ರಮವು ಮಂಗಳವಾರ ಮೂಡುಬಿದರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಉದ್ಘಾಟನೆಯಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ನಿರ್ದೇಶಕರಾದ ಶಂಕರ್ ಕೋಟ್ಯಾನ್ ಅವರು ಮಾತನಾಡಿ, “ಹೊಲಿಗೆ ಕಲಿತ ಮಹಿಳೆಯರು […]

Read More

ಯುವವಾಹಿನಿ ಮೂಡುಬಿದಿರೆ ಘಟಕದಿಂದ ಸಾಧಕರಿಗೆ ಸನ್ಮಾನ, ವಿವಿಧ ತಂಡಗಳ ರಚನೆ

ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮ, ಕಲೆ, ಸಾಹಿತ್ಯ, ಭಜನಾ ಹಾಗೂ ನೃತ್ಯ ತಂಡಗಳ ರಚನೆ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜೂನ್ 21ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ವಹಿಸಿ, ಕಲೆ, ಸಾಹಿತ್ಯ, ಭಜನಾ ಹಾಗೂ ನೃತ್ಯ ತಂಡಗಳ ರಚನೆಯ ಉದ್ದೇಶ, ಕಾರ್ಯಯೋಜನೆ ಮತ್ತು ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆರ್.ಜೆ. ಹಾಗೂ ಸಾಹಿತಿ ವಿನೋದ್ ಕುಂಪಲ ಅವರು ಯುವ […]

Read More

ಅಡ್ಡಪರಿಣಾಮವಿಲ್ಲದ ಚಿಕಿತ್ಸಾ ಪದ್ಧತಿಯೇ ಹೊಮಿಯೋಪತಿ : ಗಿರೀಶ್ ಕೋಟ್ಯಾನ್

ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ […]

Read More

ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿ ಸಮಾರೋಪ

ಮೂಡುಬಿದಿರೆ, ಮೇ 28: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ನೋಮಿ ನೆಟ್ವರ್ಕ್ ಪ್ರಾಯೋಜಕತ್ವದಲ್ಲಿ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಸಹಯೋಗದೊಂದಿಗೆ ಆಯೋಜಿಸಲಾದ 15 ದಿನಗಳ ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು 28-05-2026 ರಂದು ವಿಚೀಸ್ ಕೌಶಲ್ಯ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಅವರು, ಮಹಿಳೆಯರು ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದು […]

Read More

ಮಲ್ಲಿಗೆ ಕೃಷಿಯ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯ: ಲತಾ ಹೆಗ್ಡೆ

ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ತರಬೇತಿ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ “ಉಚಿತ ಮಲ್ಲಿಗೆ ಕೃಷಿ ಮಾಹಿತಿ ಶಿಬಿರವು ದಿನಾಂಕ 17/05/2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲ್ಲಿಗೆ ಕೃಷಿ ಮಾಹಿತಿ ಮತ್ತು ಪ್ರೇರಣೆ : ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಸೌರಶಕ್ತಿ ಹಾಗೂ ಬ್ಯಾಂಕ್ ಸಾಲ ಸೌಲಭ್ಯ ಮಾಹಿತಿ ಕಾರ್ಯಕ್ರಮ

ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (ಬಿ.ವಿ.ಟಿ.) ಮಣಿಪಾಲ (ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ) ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಸೌರಶಕ್ತಿ ಯೋಜನೆ ಹಾಗೂ ಬ್ಯಾಂಕ್ ಸಾಲ ಸೌಲಭ್ಯಗಳ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಸಮಾಜ ಮಂದಿರದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ. ಅವರು, “ಪ್ರಸ್ತುತ ದಿನಗಳಲ್ಲಿ ಸೌರಶಕ್ತಿ ಆಧಾರಿತ ತಂತ್ರಜ್ಞಾನಗಳ ಬಳಕೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!