Yuvavahini

ಮೂಡಬಿದ್ರಿ

ದೇವಸ್ಥಾನದಲ್ಲಿ ಸ್ವಯಂ ಸೇವೆ

ಮೂಡುಬಿದಿರೆ: ಮುಂಡ್ಕೂರು ಕಜೆ-ಕುಕ್ಕುದಡಿ ಮಹಾಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ನಾಗಮಂಡಲೋತ್ಸವ ಪ್ರಯುಕ್ತ ದಿನಾಂಕ 25-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಸುಮಾರು 20 ಸದಸ್ಯರು  ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.

Read More

ದೇವಸ್ಥಾನದಲ್ಲಿ ಸ್ವಯಂಸೇವೆ

ಮೂಡಬಿದಿರೆ: ಶ್ರೀ ಕ್ಷೇತ್ರ ಕಲ್ಲಬೆಟ್ಟು , ಶ್ರೀ ಮಹಮ್ಮಾಯಿ ದೇವಸ್ಥಾನ ಮೂಡಬಿದಿರೆ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 15-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕ ದ ಸುಮಾರು 15 ಸದಸ್ಯರು, ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ದೇವಸ್ಥಾನದಲ್ಲಿ ಸ್ವಯಂ ಸೇವೆ

ಮೂಡಬಿದಿರೆ:  ಶ್ರೀ ಆದಿಶಕ್ತಿ ದುರ್ಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಕಂದಿರು ಶಿರ್ತಾಡಿ ಇದರ ವಾರ್ಷಿಕ ಪೂಜಾ ಮಹೋತ್ಸವದ ಪ್ರಯುಕ್ತ ದಿನಾಂಕ 12-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಸುಮಾರು 10 ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ(ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ದೇವಸ್ಥಾನದಲ್ಲಿ ಸ್ವಯಂಸೇವೆ

ಮೂಡಬಿದಿರೆ: ಪುರಾತನ ಶ್ರೀ ಆದಿಶಕ್ತಿ ಮಹಾಕಾಳಿ ದೇವಸ್ಥಾನ, ಸ್ವರಾಜ್ಯ ಮೈದಾನ ಮೂಡಬಿದಿರೆ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 10-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕ ದ ಸುಮಾರು 10 ಸದಸ್ಯರು, ಕ್ಯಾಶ್ ಕೌಂಟರ್ ನಲ್ಲಿ ಹಾಗೂ ದಿನಾಂಕ 11-02-2024 ರಂದು ಸುಮಾರು 20 ಸದಸ್ಯರು, ಅನ್ನ ಧಾನ ವಿಭಾಗ ದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಯುವವಾಹಿನಿಯ ಪಾತ್ರ ಶ್ಲಾಘನೀಯ

ಮೂಡಬಿದರೆ: ಸಮಾಜಮುಖಿ ಕೆಲಸ ಮಾಡುವ ಯುವವಾಹಿನಿಯು ಸ್ವಚ್ಛ ಪರಿಕಲ್ಪನೆಯುಲ್ಲಿ ತನ್ನನ್ನು ತೊಡಗಿಸಿಕೊಂಡದ್ದು ಅನುಕರಣೀಯ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು 04/02/2024 ರಂದು ಮೂಡುಬಿದಿರೆ ಸ್ವರಾಜ್ಯ ಮೈದಾನ, ಮಾರಿಗುಡಿ ದೇವಸ್ಥಾನ ಹಾಗೂ ರಿಂಗ್ ರೋಡ್ ಬಳಿ ನಡೆದಾಗ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ತೋಡಾರು […]

Read More

ದೇವಸ್ಥಾನದಲ್ಲಿ ಸ್ವಯಂಸೇವೆ

ಮೂಡಬಿದಿರೆ: ಶ್ರೀ ಕ್ಷೇತ್ರ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ತಾಡಿ – ವಾಲ್ಪಾಡಿ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 21-01-2024 ರಂದು ಯುವವಾಹಿನಿ(ರಿ) ಮೂಡುಬಿದಿರೆ ಘಟಕ ದ ಸುಮಾರು 20ಕ್ಕೂ ಹೆಚ್ಚು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.

Read More

ನಿನ್ನೊಳಗಿನ ನಾಯಕನ ಅನ್ವೇಷಣೆ, ನಾಯಕತ್ವದ ಹೆಬ್ಬಾಗಿಲು :ನಿತೇಶ್ ಬಲ್ಲಾಳ್

ಮೂಡುಬಿದಿರೆ : ಯಾವ ವ್ಯಕ್ತಿಯಲ್ಲಿ ಸ್ವಾಭಿಮಾನದ ಜೊತೆಗೆ ಎಲ್ಲರನ್ನೂ ಗೌರವಿಸಿ ಮಾತನಾಡುವ ಗುಣವಿದೆಯೋ ಅಂಥವರು ಒಬ್ಬ ಉತ್ತಮ ನಾಯಕ ಎನಿಸಿಕೊಳ್ಳಲು ಅರ್ಹನಾಗಿರುತ್ತಾನೆ, ನಿನ್ನೊಳಗಿನ ನಾಯಕನ ಅನ್ವೇಷಣೆ ಕಾರ್ಯ ನಿರಂತರ ನಡೆಯಬೇಕಾಗಿದೆ, ಇದು ನಾಯಕತ್ವದ ಹೆಬ್ಬಾಗಿಲು ಎಂದು ಸಂಪನ್ಮೂಲ ವ್ಯಕ್ತಿ ನಿತೇಶ್ ಬಲ್ಲಾಳ್ ರವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಅವರು ಯುವವಾಹಿನಿ (ರಿ.) ಮೂಡಬಿದರೆ ಘಟಕದ ವತಿಯಿಂದ 2024 ನೇ ಜನವರಿ 21 ರಂದು ನಡೆದ ವ್ಯಕ್ತಿತ್ವ ವಿಕಸನ ಶಿಬಿರ ನಿನ್ನೊಳಗಿನ ನಾಯಕ ಇದರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ […]

Read More

ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿದಾಗ ಯಶಸ್ಸು ಸಾಧ್ಯ : ಮುನಿರಾಜ ರೆಂಜಾಳ

ಮೂಡುಬಿದಿರೆ : ಎಸ್.ಎಸ್.ಎಲ್.ಸಿ ಪರೀಕ್ಷೆ ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯನ್ನು ಕಷ್ಟದಿಂದ ಎದುರಿಸಿದರೂ ಬಹಳ ಇಷ್ಟಪಟ್ಟು ಎದುರಿಸಿ. ಆತ್ಮ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಎಂತಹ ಕಷ್ಟ ಬಂದರೂ ಮೆಟ್ಟಿ ನಿಂತು ಗುರಿ ಮುಟ್ಟಬಲ್ಲೆ ಎಂಬ ಅಚಲ ನಿರ್ಧಾರ, ದೃಢವಿಶ್ವಾಸ ನಮ್ಮದಾಗಲಿ. ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಉನ್ನತ ಮಟ್ಟದ ಅಂಕಗಳನ್ನು ಗಳಿಸುವಂತಾಗಲಿ. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಬಗ್ಗೆ ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಯುವವಾಹಿನಿ(ರಿ.) ಮೂಡಬಿದರೆ ಘಟಕ, […]

Read More

ಯುವ ಸಮ್ಮಿಲನ ಕಾರ್ಯಕ್ರಮ

ಕಾರ್ಕಳ:- ದಿನಾಂಕ 17 ಜುಲೈ 2022ನೇ ಆದಿತ್ಯವಾರ ಯುವವಾಹಿನಿ(ರಿ.) ಕಾರ್ಕಳ, ಮೂಡಬಿದ್ರಿ, ಉಡುಪಿ ಘಟಕಗಳ ಜಂಟಿ ಆಶ್ರಯದಲ್ಲಿ “ಯುವ ಸಮ್ಮಿಲನ ಕಾರ್ಯಕ್ರಮ ” ಆನೆಕೆರೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಉದ್ಯಮಿಗಳಾಗಿರುವ ಡಿ. ಆರ್. ರಾಜು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಘಟಕದ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು , […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!