Yuvavahini

ಘಟಕಗಳು

ಯುವವಾಹಿನಿ ಕ್ರಾಂತಿಕಾರಿ ಬದಲಾವಣೆಯ ರೂವಾರಿ – ನವನೀತ ಡಿ.ಹಿಂಗಾಣಿ

ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ […]

Read More

ಬಜಪೆ ಯುವವಾಹಿನಿಯ ಸ್ವಚ್ಛತಾ ಕಾರ್ಯ

ಯುವವಾಹಿನಿ (ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 26-03-2017 ನೇ ಆದಿತ್ಯವಾರದಂದು ಬಜಪೆಯ ಸಮೀಪವಿರುವ ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಜಪೆ‌ ಘಟಕದ ಸುಮಾರು 20 ಕ್ಕೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ|| ಜಯರಾಮ ಶೆಟ್ಟಿ, ಇವರು ಬಜಪೆ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಜಪೆ ಯುವವಾಹಿನಿ ಪದಾಧಿಕಾರಿಗಳಾದ ಚಂದ್ರಶೇಖರ ಎಸ್ ಪೂಜಾರಿ ದೇವರಾಜ್‌ […]

Read More

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ನಡೆದು ಬಂದ ದಾರಿ

ಲೋಕ ಶಾಂತಿ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವಾದರ್ಶದ ನೆಲೆಯಲ್ಲಿ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬೋಧನೆಯ ಅನುಸಾರ ವಿದ್ಯೆ-ಉದ್ಯೋಗ-ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯಗಳನ್ನಿಟ್ಟುಕೊಂಡು ಸಮಾಜ ಅಭ್ಯುದಯದ ಕೈಂಕರ್ಯಕ್ಕಾಗಿ 1987  ಅಕ್ಟೋಬರ್ 2 ರಂದು ಸುಂಕದಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಅಸ್ತಿತ್ವಕ್ಕೆ ಬಂದ ಬಿಲ್ಲವ ಸಮಾಜದ ನಿಸ್ವಾರ್ಥ ಸಮಾನ ಮನಸ್ಕ ಯುವಕರ ಸಂಘಟನೆ ಯುವವಾಹಿನಿ. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಸಮಾಜದಲ್ಲಿ ಬಿಲ್ಲವರು ಬಲಿಷ್ಠರಾಗಬೇಕು ಎಂಬ ಸಂಕಲ್ಪದಲ್ಲಿ ಯುವವಾಹಿನಿ 1987 ರಿಂದಲೂ ಕೆಲಸ ನಿರ್ವಹಿಸುತ್ತಿದೆ. ದಕ್ಷಿಣ ಕನ್ನಡ […]

Read More

ಮೂಲ್ಕಿ ಯುವವಾಹಿನಿ : ಸ್ನೇಹ ಮಿಲನ

ಯುವವಾಹಿನಿ ಮುಲ್ಕಿ ಘಟಕದ ಕುಟುಂಬ ಸದಸ್ಯರ ಸ್ನೇಹ ಮಿಲನವು ದಿನಾಂಕ 19-03-2017 ರಂದು ಪ್ರಕೃತಿಯ ರಮಣೀಯ ಸ್ಥಳ ಮೂಲ್ಕಿ ಸಮೀಪದ ಮಟ್ಟು ನದಿ ತೀರದಲ್ಲಿ ಯಶಸ್ವಿಯಾಗಿ ಜರುಗಿತು. ತೆಂಗಿನಕಾಯಿ ಒಡೆಯುವ ಮೂಲಕ ಸ್ನೇಹ ಮಿಲನದ ಉದ್ಘಾಟನೆ ವಿಶಿಷ್ಟವಾಗಿ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ವಿವಿದ ಮನೋರಂಜನಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ಆಯೇೂಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಿ ಔತಣಕೂಟದೊಂದಿಗೆ ಸ್ನೇಹ ಮಿಲನ ಸಮಾಪ್ತಿಯಾಯಿತು.

Read More

ಉಪ್ಪಿನಂಗಡಿ ಯುವವಾಹಿನಿಯಿಂದ ಪ್ರವಾಸ

ಯುವವಾಹಿನಿ ಉಪ್ಪಿನಂಗಡಿ ಘಟಕದ ಸದಸ್ಯರು ದಿನಾಂಕ 19.03.2017ರಂದು ಸಂಪರ್ಕದ ದೃಷ್ಟಿಯಿಂದ ಏಕದಿನ ಪ್ರವಾಸ ಕಾರ್ಯಕ್ರಮ ಜರುಗಿತು. ಅಂದು ಬೆಳಗ್ಗೆ 7 ರಿಂದ ಪ್ರವಾಸ ಆರಂಭಗೊಂಡಿತು. ಪುನರುಸ್ಥಾನಗೊಳ್ಳುತ್ಥಿರುವ ವೀರ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಾನ ಗೆಜ್ಜೆಗಿರಿ ನಂದನಬಿತ್ತಲ್ ಇಲ್ಲಿಗೆ ಭೇಟಿ ನೀಡಿ ಜನ್ಮಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಇತಿಹಾಸದ ಬಗ್ಗೆ ಸ್ಥಳೀಯರಾದ ಮಹಾಬಲ ಇವರು ವಿವರ ನೀಡಿದರು, ನಂತರ ಹನುಮಗಿರಿ ಆಂಜನೇಯ ದೇವಸ್ಥಾನ, ಕಾಸರಗೋಡು ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು. ಕೇರಳದ […]

Read More

ಮೂಲ್ಕಿ ಯುವವಾಹಿನಿಯ ಹೊರೆಕಾಣಿಕೆ ಸೇವೆ

ಕಾಂತಬಾರೆ ಬೂದಬಾರೆ ಜನ್ಮಕ್ಷೇತ್ರ ಕೊಲ್ಲೂರು ಇದರ ಚತುಷ್ಪವಿತ್ರ  ನಾಗಬ್ರಹ್ಮಮಂಡಲ ಸೇವೆಯ ಪ್ರಯುಕ್ತ  ಒಂಬತ್ತು ಮಾಗಣೆಯ ಭಕ್ತಾಧಿಗಳಿಂದ ದಿನಾಂಕ 15-03-2017ರಂದು ಹೊರೆಕಾಣಿಕೆ ಸಮರ್ಪಿಸಲಾಯಿತು. ಈ ಸಂಧರ್ಭದಲ್ಲಿ ಮೂಲ್ಕಿ ಯುವವಾಹಿನಿಯ ವತಿಯಿಂದ ಹೊರೆಕಾಣಿಕೆಯನ್ನು ಸಮರ್ಪಿಸಿ ಶ್ರೀ ಕ್ಷೇತ್ರದಲ್ಲಿ ಮೂಲ್ಕಿ ಯುವವಾಹಿನಿ ಸದಸ್ಯರು   ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Read More

ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ಮಂಗಳೂರು ಯುವವಾಹಿನಿ ತಂಡ ಅಧಿಕಾರ ಸ್ವೀಕಾರ

ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭ ಜರುಗಿತು. 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರ ಅದ್ಯಕ್ಷ : ರವೀಶ್ ಕುಮಾರ್ ಉಪಾಧ್ಯಕ್ಷ : ನವೀನ್ ಚಂದ್ರ ಕಾರ್ಯದರ್ಶಿ : ಪ್ರವೀಣ್ ಕುಮಾರ್ ಕಿರೋಡಿ ಜತೆ ಕಾರ್ಯದರ್ಶಿ : ಯತೀಶ್ ಬಳಂಜ ಕೋಶಾಧಿಕಾರಿ : ಸದಾನಂದ ಕುಳಾಯಿ ಸಂಘಟನಾ ಕಾರ್ಯದರ್ಶಿ : ಜೈ ಕುಮಾರ್ ನಿರ್ದೇಶಕರು ನಾರಾಯಣಗುರು ತತ್ವ ಪ್ರಚಾರ : […]

Read More

ಮಂಗಳೂರು ಯುವವಾಹಿನಿ : ಸಾಧಕರಿಗೆ ಸನ್ಮಾನ

ಮಂಗಳೂರು ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಮೆ. ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿತು. ಈ ಶುಭ ಸಂದರ್ಭದಲ್ಲಿ ಮಂಗಳೂರು ಯುವವಾಹಿನಿ ಸದಸ್ಯರಾದ ಸಮಾಜ ಸೇವಕ ಸಂಘಟಕರು ದೇವೇಂದ್ರ ಕೋಟ್ಯಾನ್, ಉದ್ಯಮಿ ಸಂಘಟಕರು ಸಾಧಕ ಉಮಾನಾಥ, ನಿಸ್ವಾರ್ಥ ಸೇವಕ ಶ್ರೀಕಾಂತ್ ಇವರುಗಳ ಸಾಧನೆಯನ್ನು ಗುರುತಿಸಿ ಗೌರವಿಸಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅದ್ಯಕ್ಷ ಪ್ರಭಾಕರ್ ಎಸ್. ಪೂಜಾರಿ, […]

Read More

ಮಂಗಳೂರು ಯುವವಾಹಿನಿ : ಪದಗ್ರಹಣ 2017-18

ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು. ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ […]

Read More

ಕೂಳೂರು ಯುವವಾಹಿನಿ : ಅಭಿವ್ಯಕ್ತಿ ಅಭಿಪ್ರಾಯಗಳ ನಿರೂಪಣೆ

ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿವ್ಯಕ್ತಿ – ಅಭಿಪ್ರಾಯಗಳ ನಿರೂಪಣೆ ಕಾರ್ಯಕ್ರಮವು ದಿನಾಂಕ 12.03.2017 ನೇ ಆದಿತ್ಯವಾರ ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದಲ್ಲಿ ಜರುಗಿತು. ಅಭಿಪ್ರಾಯಗಳ ನಿರೂಪಣೆ ಮಾಡಿದ ಸಹನಾ ಕುಂದರ್ – ಈ ಜಗತ್ತು ಗಂಡು ಹೆಣ್ಣು ಇಬ್ಬರನ್ನೂ ಅವಲಂಬಿಸಿದೆ. ಟಿವಿ ಸೀರಿಯಲ್­ಗಳ ಭ್ರಮೆಯಿಂದ ಮಹಿಳೆಯರು ಹೊರ ಬರಬೇಕು. ನಮ್ಮ ರಕ್ತದಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಾವು ಬಲಿಯಾಗಿದ್ದೇವೆ. ಮಹಿಳೆಯರು ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತರಾದಾಗ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!