Yuvavahini

ಘಟಕಗಳು

ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ

ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 02.08.2017 ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಶಿವಾನುಗ್ರಹ ಸಭಾಂಗಣದಲ್ಲಿ ಜರಗಿತು.ಕಟಪಾಡಿ ವಿಶ್ವನಾಥ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.ಯುವವಾಹಿನಿ (ರಿ) ಕಟಪಾಡಿ ಘಟಕದ ಅಧ್ಯಕ್ಷರಾದ ಸುಕುಮಾರ್ ಆರ್ ಕೋಟ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಾಹೇಶ್ ಎನ್ ಅಂಚನ್ ಕಾರ್ಯದರ್ಶಿಯಾಗಿ ನಿತಿನ್ ಅಂಬಾಡಿ […]

Read More

ಕಾವ್ಯ ಅಸಹಜ ಸಾವು : ಸೂಕ್ತ ತನಿಖೆಗೆ ಅಗ್ರಹ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಕು| ಕಾವ್ಯಾಳ ಸಂಶಯಾಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಅಗ್ರಹ. ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ 15 ವರ್ಷ ಪ್ರಾಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ಎಂಬಾಕೆಯು ದಿನಾಂಕ 20.7.2017 ರಂದು ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ. ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ […]

Read More

ಕು| ಕಾವ್ಯಾಳ ಸಂಶಯಾಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಬಂಟ್ವಾಳ ಯುವವಾಹಿನಿ ಅಗ್ರಹ

ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ 15 ವರ್ಷ ಪ್ರಾಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ಎಂಬಾಕೆಯು ದಿನಾಂಕ 20.7.2017 ರಂದು ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ.ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ಹಮ್ಮಿಕೊಳ್ಳಲಾಗುವುದು ಅನಿವಾರ್ಯವಾಗುತ್ತದೆ ಎಂಬ ಮನವಿ ಪತ್ರವನ್ನು ಬಂಟ್ವಾಳ ತಾಲೂಕಿನ ತಹಶೀಲ್ದಾರರ […]

Read More

ನಾಳಿನ ಸದೃಢ ಸಮಾಜಕ್ಕೆ, ಇಂದು ಸನ್ನದ್ಧರಾಗೋಣ : ಕವಿತಾ ಸನಿಲ್

ನಾಳಿನ ಸದೃಢ ಸಮಾಜಕ್ಕೆ ಇಂದು ಸನ್ನದ್ಧರಾದಲ್ಲಿ ಮಾತ್ರ ಯುವ ಸಮುದಾಯವನ್ನು ಸಂಸ್ಕøತಿ ಸಂಸ್ಕಾರಗಳ ಮೂಲಕ ಅದರ ಬಗ್ಗೆ ತಿಳುವಳಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಮಂಗಳೂರು ಮೇಯರ್ ಕವಿತಾ ಸನಿಲ್ ಹೇಳಿದರು. ಹಳೆಯಂಗಡಿಯ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಆಟಿ ಆನಿ-ಇನಿ-ಎಲ್ಲೆ ಕಾರ್ಯಕ್ರಮವನ್ನು ಬತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಅಧ್ಯಕ್ಷತೆಯನ್ನು […]

Read More

ಯುವ ಪ್ರತಿಭೆಯನ್ನು ಗುರುತಿಸಿ, ನಾಯಕತ್ವ ಮೂಡಿಸಿ-ಯಶವಂತ ಪೂಜಾರಿ

ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಗ್ರಾಮವಾರು ಯುವವಾಹಿನಿ ಸಂಘವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ನಿಯೋಜಿತ ಅಧ್ಯಕ್ಷ  ಯಶವಂತ ಪೂಜಾರಿರವರು ಹೇಳಿದರು. ಅವರು ದಿನಾಂಕ: 30.07.2017  ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2017-18ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]

Read More

ಹೃದಯ ರೋಗ ತಪಾಸಣಾ ಶಿಬಿರ

ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 30.07.2017 ರಂದು ಸುರತ್ಕಲ್ ಮಹಿಳಾ ಕೇಂದ್ರದ ಸಭಾಂಗಣದಲ್ಲಿ ಉಚಿತ ಹೃದಯ ರೋಗ ,ಮಧುಮೇಹ ತಪಾಸಣೆ, ಹಾಗೂ ಮಾಹಿತಿ ಶಿಬಿರ ಜರಗಿತು. ಒಮೇಗಾ ಆಸ್ಪತ್ರೆ ಮಂಗಳೂರು, ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಮಂಗಳೂರು, ಅಪದ್ಬಾಂದವ ಸಮಾಜ ಸೇವಾ ಸಂಘ ಸುರತ್ಕಲ್, ಮಹಿಳಾ ಕೇಂದ್ರ ಸುರತ್ಕಲ್ ಸಂಸ್ಥೆಗಳ ಸಹಯೋಗದೊಂದಿಗೆ ಈ ಶಿಬಿರ ಯಶಸ್ವಿಯಾಗಿ ಜರುಗಿತು. ಈ ಶಿಬಿರದಲ್ಲಿ ಇಸಿಜಿ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಹೃದಯದ ಸ್ಕ್ಯಾನಿಂಗ್, ಹೃದಯ ತಜ್ಞರಿಂದ ಪರೀಕ್ಷೆ ಹಾಗೂ ಸಲಹೆ, ಡಯಾಬಿಟಿಸ್ […]

Read More

ತುಳುನಾಡಿನ ಆಚರಣೆ ಪವಿತ್ರವಾದ ಸಂಸ್ಕ್ರತಿ : ಡಾ|| ಸದಾನಂದ ಪೆರ್ಲ

ತುಳುನಾಡಿನ ಜನರ ಎಲ್ಲ ಆಚರಣೆ ಮತ್ತು ಆಹಾರ ಪದ್ಧತಿಗಳು ಕೇವಲ ಒಂದು ಸಮುದಾಯಕ್ಕೆ ಮೀಸಲಾಗಿರುವ ವಿಷಯವಲ್ಲ. ಅದು ಸರ್ವಕಾಲಿಕ ಸತ್ಯವನ್ನು ಒಳಗೊಂಡ ಒಂದು ಪವಿತ್ರ ಸಂಸ್ಕøತಿ ಎಂದು ಮಂಗಳೂರು ಆಕಾಶವಾಣಿಯ ಹಿರಿಯ ಕಾರ್ಯಕ್ರಮ ನಿರ್ವಾಹಕರಾದ ಡಾ| ಸದಾನಂದ ಪೆರ್ಲ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಬಿಲ್ಲವ ಸಮಾಜ ಸೇವಾಸಂಘದಲ್ಲಿ ಜರಗಿದ 15ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆಟಿ ಕೆಟ್ಟ ದಿನಗಳ ಒಂದು ಮಾಸ ಎಂದು ಪ್ರತಿಬಿಂಬಿಸಲಾಗುತ್ತಿದೆ. ಆಟಿ ತಿಂಗಳು ಅತ್ಯಂತ ಶ್ರೇಷ್ಠ ತಿಂಗಳು […]

Read More

ಬಂಟ್ವಾಳ ಯುವವಾಹಿನಿಯಿಂದ ಮನೆ ಹಸ್ತಾಂತರ

ಮಹಾ ಮಾನತಾವಾದದ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಮಾನವ ಜನಾಂಗಕ್ಕೆ ಹೊಸ ದಾರಿ ತೋರಿದವರು. ಸಮಾಜದ ಒಳಿತಿಗಾಗಿ ದುಡಿದವರು. ಅವರ ಸಂದೇಶದ ಅನುಷ್ಟಾನ ಮಾಡುತ್ತಿರುವ ಯುವವಾಹಿನಿಯಂತಹ ಯುವಶಕ್ತಿ ಸಮಾಜದ ಆದರ್ಶ ಸಂಘಟನೆಯಾಗಿದೆ ಎಂದು ಪುರೋಹಿತರಾದ ಕೇಶವ ಶಾಂತಿ ನಾಟಿ ತಿಳಿಸಿದರು. ಅವರು ದಿನಾಂಕ 23.7.2017 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜೆಕಲದ ಅಕ್ಕಮ್ಮ ಎಂಬ ತೀರಾ ಬಡ ಕುಟುಂಬಕ್ಕೆ 650 ಚ.ಅ.ಗಳ ಸುಮಾರು ರೂ. […]

Read More

ಅಧ್ಯಕ್ಷರಾಗಿ ಲೋಕೇಶ್ ಸುವರ್ಣ ಅಲೆತ್ತೂರು ಆಯ್ಕೆ

ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭೆಯ ನಾಮನಿರ್ದೇಶಕ ಸದಸ್ಯರಾದ ಲೋಕೇಶ್ ಸುವರ್ಣ ಅಲೆತ್ತೂರು ಇವರು ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳಾಗಿ                     ಉಪಾಧ್ಯಕ್ಷರು : ಗಣೇಶ್ ಪೂಂಜೆರೆಕೋಡಿ ಕಾರ್ಯದರ್ಶಿ : ದಿನೇಶ್ ಕೆ. ಸುವರ್ಣ, ಕೋಶಾಧಿಕಾರಿ : ಲೋಕೇಶ್ ಪೂಜಾರಿ. ಜತೆ ಕಾರ್ಯದರ್ಶಿ : ಕಿರಣ್ ರಾಜ್ ನಿರ್ದೇಶಕರು:- ಸಾಂಸ್ಕøತಿಕ : ಹರೀಶ್ ಕೋಟ್ಯಾನ್ ಕುದನೆ ನಾರಾಯಣಗುರು ತತ್ವ […]

Read More

ಕಷ್ಟದ ದಿನಗಳ ನೆನಪು ನಮಗಿರಬೇಕು : ರೋಹಿಣಿ

ತುಳು ಸಂಸ್ಕೃತಿಯಲ್ಲಿ ಆಟಿ ತಿಂಗಳಿಗೆ ವಿಶೇಷವಾದ ಸ್ಥಾನಮಾನವಿದೆ. ಈ ತಿಂಗಳಿನಲ್ಲಿ ನಡೆಯುವ ಯಾವೆಲ್ಲ ಆಚರಣೆಗಳಿವೆಯೋ ಅವೆಲ್ಲದರ ಹಿಂದೆ ಪೂರ್ವಜರು ವೈಜ್ಞಾನಿಕತೆಯನ್ನು ಪರಿಚಯಿಸಿದ್ದನ್ನು ಈಗಲೂ ಕಾಣಬಹುದಾಗಿದೆ. ಬದಲಾವಣೆಯ ಗಾಳಿ ಬಲವಾಗಿ ಬೀಸಿದೆ. ಕೃಷಿ ಸಂಸ್ಕೃತಿಯಿಂದ ಹಿಮ್ಮುಖವಾದ ಕಾರಣ ನಾವೆಲ್ಲ ಆರೋಗ್ಯಪೂರ್ಣ ವಾತಾವರಣದಿಂದ ದೂರ ಸರಿಯುತ್ತಿದ್ದೇವೆ” ಎಂದು ಹಿರಿಯ ಸಾಹಿತಿ ಶ್ರೀಮತಿ ಕೆ.ಎ.ರೋಹಿಣಿ ತಿಳಿಸಿದರು. ಅವರು ದಿನಾಂಕ 23.07.2017ನೇ ಆದಿತ್ಯವಾರದಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಸಹಯೋಗದೊಂದಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!