16-01-2024, 10:00 AM
ಮೂಡುಬಿದಿರೆ : ಎಸ್.ಎಸ್.ಎಲ್.ಸಿ ಪರೀಕ್ಷೆ ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯನ್ನು ಕಷ್ಟದಿಂದ ಎದುರಿಸಿದರೂ ಬಹಳ ಇಷ್ಟಪಟ್ಟು ಎದುರಿಸಿ. ಆತ್ಮ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಎಂತಹ ಕಷ್ಟ ಬಂದರೂ ಮೆಟ್ಟಿ ನಿಂತು ಗುರಿ ಮುಟ್ಟಬಲ್ಲೆ ಎಂಬ ಅಚಲ ನಿರ್ಧಾರ, ದೃಢವಿಶ್ವಾಸ ನಮ್ಮದಾಗಲಿ. ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಉನ್ನತ ಮಟ್ಟದ ಅಂಕಗಳನ್ನು ಗಳಿಸುವಂತಾಗಲಿ. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಬಗ್ಗೆ ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಯುವವಾಹಿನಿ(ರಿ.) ಮೂಡಬಿದರೆ ಘಟಕ, […]
Read More
15-01-2024, 10:00 AM
ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ, 2024ನೇ ಜನವರಿ 15 ರಂದು ಭಜನಾ ಸಂಕೀರ್ತನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಸೋಮಸುಂದರ್ ಕೊಡಿಪ್ಪಾನ, ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಸನಿಲ್, ಕಾರ್ಯದರ್ಶಿ ಅನಿತಾ ಸತೀಶ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
Read More
14-01-2024, 12:27 PM
ಯಡ್ತಾಡಿ: ಸಮಾಜದಲ್ಲಿ ಸಂಘಟನೆಗಳ ಅರ್ಥಪೂರ್ಣ ಕಾರ್ಯಗಳ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣವಾಗುತ್ತದೆ. ಈ ದಿಸೆಯಲ್ಲಿ ಯುವವಾಹಿನಿಯು ಮುಖ್ಯ ಧ್ಯೇಯಕ್ಕೆ ಪೂರಕವಾಗಿ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ ಪೂಜಾರಿ ಹೇಳಿದರು. ಅವರು ಯುವವಾಹಿನಿ (ರಿ) ಯಡ್ತಾಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನರೇಂದ್ರ ಕುಮಾರ ಕೋಟ, ಅಂತರಾಷ್ಟ್ರೀಯ ಕ್ರೀಡಾಪಟು ಸುರೇಶ ಪೂಜಾರಿ ಸಾಸ್ತನ, […]
Read More
12-01-2024, 10:00 AM
ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. […]
Read More
07-01-2024, 10:00 AM
ಮಂಗಳೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸದೃಢತೆ ಸಾಧಿಸಿಲಾಗುವುದು ಹಾಗೂ ಮಾನಸಿಕ, ದೈಹಿಕ, ಆರೋಗ್ಯವು ಸುಧಾರಿಸುತ್ತದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲ| ಶೀನಾ ಪೂಜಾರಿ ಇವರು ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ 2024 ನೇ ಜನವರಿ 7 ರಂದು ಮಂಗಳೂರಿನ ನಂತೂರಿನ ಪಾದುವ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, […]
Read More
07-01-2024, 10:00 AM
ಸುರತ್ಕಲ್: ಯುವಜನತೆಗೆ ದಿನನಿತ್ಯದ ಬದುಕಿನ ಬಾಳ ಬುಟ್ಟಿಯಲ್ಲಿ ನಾರಾಯಣ ಗುರುವರ್ಯರ ಜೀವನಚರಿತ್ರೆಯ ಆದರ್ಶ ಸಂದೇಶಗಳು ದಾರಿದೀಪವಾಗಿರಬೇಕು ಹಾಗೂ ಪರರಿಗೆ ಸದಾ ಒಳಿತನ್ನು ಬಯಸುವಂತಿರಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜು ಕಾಟಿಪಳ್ಳದ ಪ್ರಾಂಶುಪಾಲರಾದ ಉಮೇಶ್ ಎಂ. ಕರ್ಕೇರರರು ಹೇಳಿದರು. ಅವರು ಯುವವಾಹಿನಿ(ರಿ.) ಸುರತ್ಕಲ್ ಘಟಕದ 2023-2024ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ದಿನಾಂಕ 07-01-2024 ರಂದು ದೇವಾಡಿಗ ಸಭಾಭವನ ಹೊಸಬೆಟ್ಟುವಿನಲ್ಲಿ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ತಾರ ಅಶೋಕ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. […]
Read More
27-12-2023, 5:07 PM
ಕೊಲ್ಯ: ಕೊಲ್ಯ ಘಟಕದ ಸರ್ವ ಸದಸ್ಯರ ಪ್ರೀತಿ ಅಭಿಮಾನಕ್ಕೆ ನಾನು ಮೂಕಳಾಗಿದ್ದೇನೆ, ಮಾತು ಮೌನವಾಗಿದೆ ಹೃದಯ ತುಂಬಿ ಬಂದಿದೆ. ಸಂತೋಷವನ್ನು ವ್ಯಕ್ತ ಪಡಿಸಲು ನನ್ನಲ್ಲಿ ಪದಗಳಿಲ್ಲ ಎಂದು ಆನಂದ ಬಾಷ್ಪಿತರಾಗಿ ಕೊಲ್ಯ ಘಟಕದಲ್ಲಿ ಡಿಸೆಂಬರ್ 27 ರಂದು ನಡೆದ ಸಾಪ್ತಾಹಿಕ ಸಭೆಯಲ್ಲಿನ ಬೀಳ್ಕೊಡುಗೆಯ ಸನ್ಮಾನದ ಕುರಿತು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಯನಾ ಸುರೇಶ್ ಅವರು ಬಾವುಕರಾಗಿ ಮತನಾಡಿದರು. ಸಂಘಟನಾ ಕಾರ್ಯದರ್ಶಿಯಾಗಿ ಕೊಲ್ಯ ಘಟಕಕ್ಕೆ ಪ್ರೋತ್ಸಾಹ ನೀಡಿ ಸಹಕರಿಸಿದ ಶ್ರೀಮತಿ ನಯನಾ ಸುರೇಶ್ ರವರನ್ನು ಯುವವಾಹಿನಿ(ರಿ.) ಕೊಲ್ಯ […]
Read More
24-12-2023, 5:25 PM
ಬಂಟ್ವಾಳ : ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ಸಂಘಟನಾ ಕ್ಷೇತ್ರದ ಸಾಧಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಧಾರ್ಮಿಕ ಕ್ಷೇತ್ರದ ಸಾಧಕ ಮನೋಜ್ ಕಟ್ಟೆಮಾರ್, ಸಾಂಸ್ಕೃತಿಕ ಕ್ಷೇತ್ರದ ಸಾಧಕಿ ಅಕ್ಷತಾ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘಟನಾ ಕ್ಷೇತ್ರದ ಸಾಧಕರು ಶ್ರೀನಿವಾಸ ಪೂಜಾರಿ ಮೆಲ್ಕಾರ್ ಗುರುಜ್ಯೋತಿ ಶಾಮಿಯಾನ ಸಂಸ್ಥೆಯನ್ನು ಹುಟ್ಟಿ ಹಾಕಿ ಸತತ 25 ವರ್ಷಗಳಿಂದ ಮುನ್ನಡೆಸಿಕೊಂಡು ಬರುವುದರ ಜೊತೆಗೆ ಬಂಟ್ವಾಳ ಯುವಸಂಗಮದ ಸ್ಥಾಪಕ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿವಿಧ ಹುದ್ದೆ ಅಲಂಕರಿಸಿ ಸರ್ಕಾರಿ ಶಾಲಾಮಕ್ಕಳಿಗೆ […]
Read More
24-12-2023, 5:22 PM
ಬಂಟ್ವಾಳ: ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ನಾರ್ದನ್ ಸ್ಕೈ ಪ್ರಾಪಟೀಸ್ ನಿರ್ದೇಶಕಿ ಕೃತಿನ್ ಅಮೀನ್ ಇವರು ಯುವಸಿಂಚನ ವಾರ್ಷಿಕ ವಿಶೇಷಾಂಕದ ಅನಾವರಣ ಮಾಡಿದರು. ಸಮಾವೇಶದ ಜನಸ್ತೋಮದ ನಡುವಣ ಬಂಟ್ವಾಳ ಅತಿಥ್ಯ ಘಟಕದ ಸಹಯೋಗದ ಸದಸ್ಯರ ಭವ್ಯ ಸ್ವಾಗತದೊಂದಿಗೆ ವಾದ್ಯ ಕೊಂಬುಗಳ ಅಬ್ಬರದ ನಿನಾದಗಳು, ಜ್ಯೋತಿ ರೂಪಕವಾಗಿ ಬೆಳಗುತ್ತಿದ್ದ ಜೋಡಿ ದೀಪಗಳು, ಪೂರ್ಣ ಕಳಸ ಹಾಗೇ ವಿವಿಧ ಹೂಗಳಿಂದ ತುಂಬಿದ್ದ ಬೃಹತ್ ಹರಿವಾಣದೊಳಗೆ ಸಜ್ಜಾಗಿದ್ದ ವರ್ಣಮಯ ಯುವಸಿಂಚನ ಹೊತ್ತಗೆಯನ್ನು ಸಮವಸ್ತ್ರಧಾರಿ ನಾರಿಮಣಿಗಳ […]
Read More
24-12-2023, 12:04 PM
ಬಂಟ್ವಾಳ : ದಿನಾಂಕ 24 ಡಿಸೆಂಬರ್ 2023 ರಂದು ಬೆಂಜನಪದವು ಶುಭಲಕ್ಷ್ಮೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಸಜಿಪ ಮುನ್ನೂರು ಮೂರ್ತೆದಾರ ಸೇವಾ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ 2023 ಮಡಿಲೇರಿಸುವ ಶುಭ ಘಳಿಗೆ ಓದಗಿಬಂತು. ಹಿಂದುಳಿದ ವರ್ಗಗಳ ಹಾಗೂ ಮೂರ್ತೆದಾರರ ಆರ್ಥಿಕ ಬೆಳವಣಿಗೆ, ಮಹಿಳಾ ಸಬಲೀಕರಣ ಹಾಗೂ ಸಮಾಜದ ಅಶಕ್ತ ಕುಟುಂಬಗಳನ್ನು ಗುರುತಿಸಿ, ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು, ವಿದ್ಯಾ ನಿಧಿ ದತ್ತುಸ್ವೀಕಾರ, ಹೀಗೆ ಹತ್ತು ಹಲವು ಮಜಲುಗಳ […]
Read More