Yuvavahini

ಘಟಕಗಳು

ಕಾರ್ಗಿಲ್ ವಿಜಯ ದಿನಾಚರಣೆ -ಯುವವಾಹಿನಿ (ರಿ)ಮುಲ್ಕಿ ಘಟಕ

ಕಾರ್ಗಿಲ್ ಯುದ್ಧ ದ ಒಂದೊಂದು ದಿನಗಳು ಕೂಡಾ ನಮಗೆ ಮರೆಯಲು ಸಾಧ್ಯವಿಲ್ಲ. ನಮ್ಮ ಕಣ್ಣೆದುರು ಅದೆಷ್ಟೂ ಯೋಧರು ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈ ಕಾರ್ಗಿಲ್ ವಿಜಯ ದಿನಾಚರಣೆ ಹುತಾತ್ಮ ಯೋಧರು ಹಾಗೂ ಅವರ ಕುಟುಂಬಕ್ಕೆ ನೀಡುವ ಗೌರವ ವಾಗಿದೆ . ಮುಲ್ಕಿ ಘಟಕದ ದೇಶದ ಮೇಲಿನ ಅಭಿಮಾನದ ಈ ಕಾರ್ಯಕ್ರಮ ಶ್ಲಾಘನೀಯ ಎಂದು ನಿವೃತ್ತ ಯೋಧ ಹಾಗು ಮುಲ್ಕಿ ಆರಕ್ಷಕ ಉಪ ನಿರೀಕ್ಷಕ ಉಮೇಶ್ ಕುಮಾರ್ ಹೇಳಿದರು. ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಜರಗಿದ […]

Read More

ರಕ್ಷಾ ಬಂಧನ , ಆಟಿದ ನೆಂಪು ಕಾರ್ಯಕ್ರಮ-ಯುವವಾವಾಹಿನಿ (ರಿ) ಕಂಕನಾಡಿ ಘಟಕ

ಘಟಕದ ಕಛೇರಿಯಲ್ಲಿ ದಿನಾಂಕ 10/08/2025 ರಕ್ಷಾ ಬಂಧನ ಕಾರ್ಯಕ್ರಮವನ್ನು “ಆಟಿದ ನೆಂಪು” ಕಾರ್ಯಕ್ರಮ ದೊಂದಿಗೆ ಅರ್ಥ ಗರ್ಭಿತವಾಗಿ ಆಚರಿಸಲಾಯಿತು , ಶ್ರೀ ಚರಣ್ ರಾಜ್ ಅಳಪೆ ಯವರು ರಕ್ಷಾಬಂಧನದ ಐತಿಹಾಸಿಕ ಹಿನ್ನೆಲೆ, ಆಧುನಿಕ ಯುಗದಲ್ಲಿ ರಕ್ಷಾ ಬಂಧನದ ಪ್ರಾಮುಖ್ಯತೆ,ಅದರ ಸಾಂಸ್ಕೃತಿಕ ನೆಲೆ ಗಟ್ಟಿನ ಬಗ್ಗೆ ಸವಿವರವಾದ ಭೌಧ್ಧಿಕ್ ನಡೆಸಿಕೊಟ್ಟರು.ನಂತರ ಸದಸ್ಯರು ಪರಸ್ಪರ ರಕ್ಷೆ(ರಾಖಿ) ಯನ್ನು ಕಟ್ಟುವ ಮೂಲಕ ರಕ್ಷಾ ಬಂಧನದ ಸಂಭ್ರಮ ಕಳೆಗಟ್ಟಿತು.ಘಟಕದ ಸದಸ್ಯರಿಂದ ಸಿಹಿತಿಂಡಿ ಮತ್ತು ತಂಪುಪಾನೀಯ ಹಂಚಲಾಯಿತು

Read More

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ-ಯುವವಾಹಿನಿ( ರಿ) ಕೂಳೂರು ಘಟಕ

ದಿನಾಂಕ 14-08-2025 ನೇ ಗುರುವಾರ ಬೆಳಿಗ್ಗೆ ಘಟಕದ ವತಿಯಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಪಂಜಿಮೊಗರು ಇವರ ಸಹಯೋಗದೊಂದಿಗೆ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಯುವವಾಹಿನಿ ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕೂಳೂರು ಘಟಕವು ಕಳೆದ 10 ವರ್ಷದಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ನಿಧಿ ವಿತರಣೆ ಮಾಡಿಕೊಂಡು ಬರುತ್ತಿದೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸದಾ ಪ್ರೋತ್ಸಾಹಿಸುವ ಯುವವಾಹಿನಿ ಕೂಳೂರು ಘಟಕದ […]

Read More

ಸ್ವಾತಂತ್ರ್ಯ ದಿನಾಚರಣೆ-ಯುವವಾಹಿನಿ (ರಿ) ಶಕ್ತಿ ನಗರ ಘಟಕ

15/08/2025ರಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಶಕ್ತಿ ನಗರ ಇಲ್ಲಿ ದ್ವಜಾರೋಹಣ ಕಾಯ೯ಕ್ರಮ ವನ್ನು ಘಟಕದ ಅಧ್ಯಕ್ಷರಾದ ಸುಜಾತ ನವೀನ್ ನೆರವೇರಿಸಿದರು ಕಾಯ೯ಕ್ರಮದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಅದ್ಯಕ್ಷರು ಆದ ತುಕರಾಮ್ ಪೂಜಾರಿ ಮತ್ತು ಘಟಕದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

Read More

ಸಾಪ್ತಾಹಿಕ ಸಂಕೀರ್ತನ ಸರಣಿ-ಯುವವಾಹಿನಿ (ರಿ.) ಮಂಗಳೂರು ಘಟಕ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಜಂಟಿ ಆಶ್ರಯದಲ್ಲಿ ನಡೆಯುವ ಯುವವಾಹಿನಿ ಸಾಪ್ತಾಹಿಕ ಸಂಕೀರ್ತನ ಸರಣಿಯ 01-09-2025ರ ಭಜನಾ ಸೇವೆಯು ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ, ಕುಳಾಯಿ ಇವರ ಸಹಯೋಗದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯಿತು. ಭಜನಾ ಮಂಡಳಿಯ ಸದಸ್ಯರು ಭಕ್ತಿ ಪೂರ್ವಕವಾಗಿ ರಾಗ ತಾಳದೊಂದಿಗೆ ಭಜನಾ ಸೇವೆಯನ್ನು ನೀಡಿದರು. ಅರ್ಚಕರು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಭಜನಾ ತಂಡಕ್ಕೆ ಪ್ರಸಾದ ಹಾಗೂ ಅನುಗ್ರಹ ಪತ್ರ ನೀಡಿ […]

Read More

ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರ-ಯುವವಾಹಿನಿ( ರಿ.) ಪಣಂಬೂರು ಕುಳಾಯಿ

ದಿನಾಂಕ 24-08-2025 ರಂದು ಭಾನುವಾರ ಮಹಿಳಾ ಮಂಡಲ ಕುಳಾಯಿಯಲ್ಲಿ, ರೋಟರಿ ಕ್ಲಬ್ ಸುರತ್ಕಲ್, ಮಹಿಳಾ ಮಂಡಲ ಕುಳಾಯಿ, ಇನ್ನರ್ ವೀಲ್ ಕ್ಲಬ್ ಸುರತ್ಕಲ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಸ್ಟೀಸ್ ಕೆ. ಎಸ್. ಹೆಗ್ಡೆ ದೇರಳಕಟ್ಟೆ, ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ವಿದ್ಯಾಲಯದ ಸಹಭಾಗೀತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು.. ಕಾರ್ಯಕ್ರಮವನ್ನು ಹಿರಿಯ ವೈದ್ಯರಾದ ಡಾl ಗೋಪಾಲಕೃಷ್ಣ ಭಟ್ ಸಂಕಬಿತ್ತಿಲು, ಉದ್ಘಾಟಿಸಿದರು. ರೋಟರಿ ಕ್ಲಬ್ ಸುರತ್ಕಲ್ ನ ಅಧ್ಯಕ್ಷರಾದ ರೊ. […]

Read More

ಸ್ವಾತಂತ್ರ್ಯ ದಿನಾಚರಣೆ-ಯುವವಾಹಿನಿ(ರಿ.) ಕೂಳೂರು ಘಟಕ

ದಿನಾಂಕ 15-08-2025 ರಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಂಜೋಟ್ಟಿ ಅಂಗನವಾಡಿ ಕೇಂದ್ರದಲ್ಲಿ ಘಟಕದ ಅಧ್ಯಕ್ಷರಾದ ಲತೀಶ್ ಪೂಜಾರಿ ರವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅದ್ಯಕ್ಷರು,ಸದಸ್ಯರು ಹಾಗೂ ಅಂಗನವಾಡಿ ಕೇಂದ್ರದ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಸ್ವಾತಂತ್ರ್ಯ ದಿನಾಚರಣೆ-ಯುವವಾಹಿನಿ (ರಿ.) ಮಂಗಳೂರು ಘಟಕ

15-08-2025 ಘಟಕದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಒಂದು ಕಾಲದಲ್ಲಿ ಅನೇಕ ರಾಜ ಸಂಸ್ಥಾನಗಳು ಆಳ್ವಿಕೆ ನಡೆಸುತ್ತಿದ್ದ ಭಾರತ ದೇಶದಲ್ಲಿ ಸ್ವಾತ್ರಂತ್ರ್ಯ ಬಳಿಕ ಕಳೆದ 79 ವರ್ಷಗಳಿಂದ ತ್ರಿವರ್ಣ ಧ್ವಜವನ್ನು ರಾಷ್ಟ್ರ ಧ್ವಜವನ್ನಾಗಿ ಗೌರವಿಸುತ್ತಾ ಸಂವಿಧಾನದ ಚೌಕಟ್ಟಿನಲ್ಲಿ ಭಾರತೀಯರೆಲ್ಲರೂ ಸಮಾನರಾಗಿ ನಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಆರ್ಥಿಕವಾಗಿ ಹಿಂದುಳಿದಿದ್ದರೂ ಸ್ವಾತಂತ್ರ್ಯ […]

Read More

ರಕ್ಷಾ ಬಂಧನ ಹಬ್ಬ ಆಚರಣೆ-ಯುವವಾಹಿನಿ (ರಿ.) ಮಂಗಳೂರು ಘಟಕ

ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾವೂರು ವಿಭಾಗ ಸಹ ಪ್ರಮುಖರಾದ ಭರತ್ ರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ ಸಮಾಜದಲ್ಲಿರುವ ಎಲ್ಲರನ್ನು ಪರಸ್ಪರ ಸಹೋದರತ್ವದಲ್ಲಿ ಕಾಣಬೇಕು. ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ನಾರಾಯಣ ಗುರುಗಳ ತತ್ವದಂತೆ ಎಲ್ಲರನ್ನೂ ಕೈ ಹಿಡಿದು ನಡೆಸಬೇಕು ಎಂದು ಹೇಳಿ ರಕ್ಷಾ ಬಂಧನದ ಸಂದೇಶ ನೀಡಿದರು. ಸದಸ್ಯರು ಪರಸ್ಪರ ರಕ್ಷಾ ಬಂಧನ ಕಟ್ಟಿ, ಸಿಹಿ ತಿಂಡಿ ಹಂಚುವುದರ ಮೂಲಕ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಭರತ್ ರಾಜ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!