Yuvavahini

ಘಟಕಗಳು

ಎಕ್ಕಾರು ಪೆರ್ಮುದೆ – ಘಟಕ ಉದ್ಘಾಟನೆ

ಎಕ್ಕಾರು ಪೆರ್ಮುದೆ  : ಯುವವಾಹಿನಿಯ 33 ನೇ ನೂತನ ಘಟಕ ಎಕ್ಕಾರು ಪೆರ್ಮುದೆ  ಘಟಕವು ದಿನಾಂಕ 04.11.2018 ರಂದು ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಎಕ್ಕಾರು ಇಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷ ಯಾದವ ಕೋಟ್ಯಾನ್ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯು ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯಗಳೊಂದಿನ ಯುವಜನರ ದ್ವನಿಯಾಗಿ ರೂಪುಗೊಂಡಿದೆ, ಎಂದು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ  ಯುವವಾಹಿನಿ (ರಿ) […]

Read More

ದೀಪಾವಳಿ ಒರ್ಲ ಪೊರ್ಲು

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ದಿನಾಂಕ 04/11/2018 ರಂದು ದೀಪಾವಳಿ ಪ್ರಯುಕ್ತ ” ದೀಪಾವಳಿ ಒರ್ಲ ಪೊರ್ಲು ” ಕಾರ್ಯಕ್ರಮ ಆಚರಿಸಲಾಯಿತು. ನಳಿನಿ ಟೀಚರ್ ರವರು ಕಾರ್ಯಕ್ರಮ ಉದ್ಘಾಟಿಸಿ ದೀಪಾವಳಿ ಆಚರಣೆ ಬಗ್ಗೆ ಮಾತನಾಡಿದರು. ನರಕಚತುರ್ದಶಿ, ಎಣ್ಣೆ ಸ್ನಾನ, ತುಳಸೀ ಪೂಜೆ, ಲಕ್ಷ್ಮೀ ಪೂಜೆ, ಬಲಿಪಾಡ್ಯಮಿ, ಗೋಪೂಜೆ , ಗೂಡುದೀಪ, ಮುಂತಾದ ಎಲ್ಲಾ ವಿಷಯಗಳ ಬಗ್ಗೆ ತಿಳಿಸಿದರು. ಘಟಕದ ಸಲಹೆಗಾರರಾದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರವರು ದೀಪಾವಳಿಯ […]

Read More

ನಮ್ಮ ಮಾತುಗಳು ಕೇಳುಗರ ಹೃದಯವನ್ನು ತಲುಪಬೇಕು : ಅಭಿಜಿತ್ ಕರ್ಕೇರ

ಬಂಟ್ವಾಳ : ದಿನನಿತ್ಯದ ವೈಯಕ್ತಿಕ ಮತ್ತು ವೃತ್ತಿ ಬದುಕಿನಲ್ಲಿ ವ್ಯವಹರಿಸುವಾಗ ಇತರರನ್ನು ಪ್ರೇರೇಪಿಸುವ ಮನವೊಪ್ಪಿಸುವ ಅಥವಾ ಒತ್ತಾಯಿಸುವ ಸಂದರ್ಭಗಳು ಸಹಜ, ಇಂತಹ ಸಂದರ್ಭಗಳಲ್ಲಿ ಸಂವಹನ ಅತ್ಯಂತ ಪರಿಣಾಮಕಾರಿಯಾಗಿದ್ದು , ಉದ್ದೇಶವನ್ನು ಸಾಧಿಸುವಂತೆ ಇರಬೇಕು. ಆದರೆ ಈ ಕೌಶಲ ಎಲ್ಲರಲ್ಲೂ ಒಂದೇ ಮಟ್ಟದಲ್ಲಿ ಇರುವುದಿಲ್ಲ ಉದಾಹರಣೆಗೆ ಜೀವನದಲ್ಲಿ ಯಾವ ಕೊರತೆ ಇಲ್ಲದಿದ್ದರೂ ಚೈತನ್ಯ ರಹಿತವಾದ ನಿರಾಶವಾದಿಗಳನ್ನು ನೋಡುತ್ತಿರುತ್ತೇವೆ. ಕೆಲವರು ಮಾತನಾಡುವ ಶೈಲಿಯಿಂದ ನಕಾರಾತ್ಮಕ ಅನಿಸಿಕೆ, ಅನುಭವಗಳು ಆಗುತ್ತವೆ. ನಾವು ಅಭಿಪ್ರಾಯವನ್ನು, ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಿಂದ ಇತರರಿಗೆ ಬೇಸರ ಕಿರಿಕಿರಿ […]

Read More

ವಿಶುಕುಮಾರ್ ಕೃತಿಗಳನ್ನು ಸಾರಸ್ವತ ಲೋಕಕ್ಕೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ : ಟಿ.ಶಂಕರ ಸುವರ್ಣ

ಬಂಟ್ವಾಳ : ಕಥೆ, ಕಾದಂಬರಿಕಾರರಾಗಿ, ನಟ ನಿರ್ದೇಶಕರಾಗಿ, ಪತ್ರಕರ್ತರಾಗಿ ರಾಜಕಾರಣಿಯಾಗಿ ತಮ್ಮ ಐದು ದಶಕಗಳ ಬದುಕಿನಲ್ಲಿ ಬಹುಮುಖ ಪ್ರತಿಭೆಯಿಂದ ಕನ್ನಡ ಮತ್ತು ತುಳು ಭಾಷೆಗಳೆರಡರಲ್ಲೂ ಕಲಾಸೇವೆ ಮಾಡಿ ಸಂದುಹೋದ ಸಾಹಿತಿ ವಿಶುಕುಮಾರ್ ರವರ ಬದುಕು ನಮಗೆ ಸದಾ ಅನುಕರಣೀಯ . ಅವರ ಕೃತಿಗಳನ್ನು ಸಾರಸ್ವತ ಲೋಕಕ್ಕೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಟಿ.ಶಂಕರ ಸುವರ್ಣ ತಿಳಿಸಿದರು. ಅವರು ದಿನಾಂಕ 04.11.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಜರುಗಿದ ಯುವವಾಹಿನಿ […]

Read More

ಕುಟುಂಬ ಭಾಂದವ್ಯ ಸಡಿಲ : ಡಾ.ಮಧುಮಾಲ ಖೇದ

ಮೂಡಬಿದಿರೆ : ತುಳುನಾಡಿನ ಕೌಟುಂಬಿಕ ಭಾಂದವ್ಯ ಅತ್ಯಂತ ಶಕ್ತಿಯುತ ಆದರೆ ಇಂದಿನ ಯಾಂತ್ರಿಕ ಬದುಕಿನಲ್ಲಿ ಕೌಟುಂಬಿಕ ಭಾಂದವ್ಯವಾಗಲಿ, ನೆರೆ ಮನೆಯ ಸಂಬಂಧಗಳಲ್ಲಿ ದಿನೇ ದಿನೇ ಕುಸಿಯುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ. ಯಂತ್ರ ಮತ್ತು ವಾಣಿಜ್ಯ ಪರತೆ ಮನುಷ್ಯನ ಮನಸ್ಸಿನ ಮೇಲೆ ವಿಪರೀತ ಪರಿಣಾಮ ಬೀರುತ್ತಿವೆ, ಇದು ಅನೇಕ ಅತೃಪ್ತಿ ಮತ್ತು ಅತಂಕಕ್ಕೆ ಕಾರಣವಾಗುತ್ತಿದೆ ಎಂದು ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ.ಮಧುಮಾಲ ತಿಳಿಸಿದರು. ಅವರು ಸಿದ್ದಕಟ್ಟೆ ಸಮೀಪದ ಪಡು ಪಾಲ್ಜಲ್ ಗುತ್ತು […]

Read More

ಜೀವನದಲ್ಲಿ ಪರಿಶ್ರಮ ಇರಲಿ : ಡಾ.ಸದಾನಂದ ಪೂಜಾರಿ

ವೇಣೂರು : ಜೀವನದಲ್ಲಿ ಏನಾದರೊಂದು ಸಾಧಿಸಬೇಕು, ಅದಕ್ಕೆ ವೈದ್ಯರು, ಇಂಜಿನಿಯರುಗಳೇ ಆಗಬೇಕೆಂದಿಲ್ಲ, ಕೃಷಿಕನಾಗಿಯೂ ಉತ್ತಮ ಸಾಧನೆ ಮಾಡಬಹುದು. ಪರಿಶ್ರಮ ಇದ್ದರೆ ಜೀವನದಲ್ಲಿ ಉತ್ತುಂಗಕ್ಕೇರಲು ಸಾಧ್ಯ ಎಂದು ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ತಿಳಿಸಿದರು. ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ದಿನಾಂಕ ರಂದು ಜರುಗಿದ ಯುವವಾಹಿನಿ (ರಿ) ವೇಣೂರು ಘಟಕದ ಯುವವಾಹಿನಿ ಸೇವಾ ಯೋಜನೆ ಆಸರೆ ಇದರ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಪ್ರಧಾನ ಭಾಷಣಕಾರರಾಗಿ ಅವರು ಮಾತನಾಡಿದರು. ಸಮಾರಂಭದ ಉದ್ಘಾಟನೆಯನ್ನು ಯುವವಾಹಿನಿ […]

Read More

ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಶಿವಗಿರಿ ಯಾತ್ರೆ

ಕಂಕನಾಡಿ : 2018ರ ಅಕ್ಟೋಬರ್ 21ರಿಂದ24 ರವರೆಗೆ ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.ಇದರಲ್ಲಿ ನಾರಾಯಣ ಗುರುಗಳ ತತ್ವಾದರ್ಶದಂತೆ ಜಾತಿ, ಮತ ಭೇದವಿಲ್ಲದೆ ಕಂಕನಾಡಿ ಘಟಕದ ಸದಸ್ಯರು ಹಾಗೂ ಇತರರು ಸೇರಿ ಒಟ್ಟು 53 ಸದಸ್ಯರು ಈ ಒಂದು ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಿವಗಿರಿ ಮಠದ ಪೂಜ್ಯ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾರಾಯಣ ಗುರುಗಳ ಮಹಾ ಸಮಾಧಿ, ಕೆಲವು ಐತಿಹಾಸಿಕ ಸ್ಥಳಗಳು, ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಮಣ್ಯ ದೇವಸ್ಥಾನ , ಅರವಿಪುರಂ ದೇವಸ್ಥಾನ […]

Read More

ಪಾಠ ಹೇಳುವ ಆಟಗಳ ನಡುವೆ ಪ್ರಥಮ ಚಿಕಿತ್ಸೆಯ ಪ್ರಾಯೋಗಿಕ ಮಾಹಿತಿ : ನಮ್ಮ ನಡೆ ಕಂಬಳಕಟ್ಟು ಕಡೆ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ […]

Read More

ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯಾತ್ರೆಯಲ್ಲಿ ಪಾನೀಯ ಸೇವೆ

ಮಂಗಳೂರು : ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಉತ್ಸವದ ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯತ್ರೆಯು ದಿನಾಂಕ 19.10. 2018 ರಂದು ವೈಭವದಿಂದ ಸಂಪನ್ನಗೊಂಡಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಂಗಳೂರು ದಸರಾ ಶೋಭಾಯಾತ್ರೆಗೆ ವಿವಿಧ ಸಂಘ ಸಂಸ್ಥೆಗಳ ಪ್ರವರ್ತಿತ ಧಾರ್ಮಿಕ ,ಸಾಂಸ್ಕೃತಿಕ, ಹುಲಿವೇಷ ನೃತ್ಯ ರೂಪಕಗಳು, ದೇಶದ ಪರಂಪರೆಯ ಟ್ಯಾಬ್ಲೋಗಳು, ತೃಶ್ಯೂರಿನ ಬಣ್ಣದ ಕೊಡೆಗಳು, ಕೇರಳದ ಚೆಂಡೆ ವಾದ್ಯ, ಕಲ್ಲಡ್ಕದ ಶಿಲ್ಪಾ ಬೊಂಬೆ ಬಳಗ, ಬೆಂಗಳೂರಿನ ಬ್ಯಾಂಡ್ ಬಳಗ, ಸೋಮನ ಕುಣಿತ, ಪೂಜಾ ಕುಣಿತಗಳು, ರಾಜ್ಯದ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!