Yuvavahini

ಘಟಕಗಳು

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಐಎಎಸ್ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಐಎಎಸ್ . ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಾಜು ಕೆ KAS ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ […]

Read More

ಯುವ ಸಂದೇಶ–2026 : ರಸ್ತೆ ಸುರಕ್ಷತಾ ಜಾಥಾ ಯಶಸ್ವಿ

ಉಪ್ಪಿನಂಗಡಿ : ಯುವಜನರ ನಿರ್ಲಕ್ಷ್ಯ ಮನೋಭಾವದಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ನಮ್ಮನ್ನು ಮಾತ್ರವಲ್ಲದೆ ನಮ್ಮನ್ನು ನಿರೀಕ್ಷಿಸುತ್ತಿರುವ ಮನೆಯವರನ್ನೂ ರಕ್ಷಿಸುತ್ತದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಯುವಜನತೆ ತಮ್ಮ ಹೆತ್ತವರಿಗೆ ನೀಡುವ ಅತಿ ದೊಡ್ಡ ಕೊಡುಗೆ ಎಂದು ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಅಧಿಕಾರಿ ಚರಣ್ ಕೆ.ಎಸ್ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 15.02.2026 […]

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಕಮಿಷನರ್ ಅವರಿಗೆ ವಿವರಿಸಲಾಯಿತು. […]

Read More

ನಾರಾಯಣಗುರುಗಳು ಸಾರಿದ ಸಮಾನತೆ ಮತ್ತು ಮಾನವತೆಯ ಮೂಲಕ ಸಮಾಜ ಬಲಿಷ್ಠವಾಗಲಿ

ಸಿದ್ದಕಟ್ಟೆ : ಸಮಾನತೆ ಮತ್ತು ಮಾನವತೆಯ ಸಂದೇಶವನ್ನು ಸಾರಿದ ನಾರಾಯಣಗುರುಗಳ ಚಿಂತನೆಗಳು ಸಮಾಜವನ್ನು ಒಂದೇ ಸೂತ್ರದಲ್ಲಿ ಕಟ್ಟುವ ಶಕ್ತಿಯಾಗಿದೆ. ಮನುಷ್ಯನ ಮೌಲ್ಯವು ಅವನ ಜನ್ಮದಲ್ಲಲ್ಲ, ಅವನ ಮಾನವೀಯ ಗುಣಗಳಲ್ಲಿ ಇದೆ ಎಂಬುದು ಅವರ ತತ್ತ್ವದ ಸಾರವಾಗಿದೆ. ಪರಸ್ಪರ ಗೌರವ, ಪ್ರೀತಿ ಮತ್ತು ಸಹಕಾರದಿಂದ ಬದುಕಿದಾಗ ಮಾತ್ರ ಸಮಾಜ ನಿಜವಾದ ಅರ್ಥದಲ್ಲಿ ಬಲಿಷ್ಠವಾಗುತ್ತದೆ. ನಾರಾಯಣಗುರುಗಳ ಆದರ್ಶಗಳು ಇಂದು ಸಹ ಸಮಾನತೆ, ಸಹೋದರತೆ ಮತ್ತು ಮಾನವತೆಯ ದೀಪವನ್ನು ಬೆಳಗಿಸುತ್ತಿವೆ. ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಫೆಬ್ರವರಿ […]

Read More

ಗೋ ಸಂರಕ್ಷಣಾ ಕೇಂದ್ರಕ್ಕೆ ಧನ ಸಹಾಯ

ಕೊಣಾಜೆ, ಫೆ.10 : ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಯುವ ಸಂಜೀವಿನಿ ವತಿಯಿಂದ 5ನೇ ಸೇವಾ ಕಾರ್ಯವಾಗಿ ಫೆಬ್ರವರಿ 10, 2026ರಂದು ಮಂಗಳವಾರ ಪುಣ್ಯಕೋಟಿ ನಗರ, ಕೈರಂಗಳದಲ್ಲಿರುವ ಅಮೃತ ಧಾರ ಗೋಶಾಲೆಯ ಅನಾಥ ಹಸುಗಳ ಪಾಲನೆಗಾಗಿ ಧನ ಸಹಾಯ ಹಸ್ತಾಂತರಿಸಲಾಯಿತು. ಒಂದು ಹಸುವಿನ ವಾರ್ಷಿಕ ಪಾಲನೆಗಾಗಿ ರೂ. 15,000/- ಮೊತ್ತವನ್ನು ಗೋ ಸಂರಕ್ಷಣಾ ಕೇಂದ್ರಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಗೋಮಾತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಧನ ಸಹಾಯ […]

Read More

ಡೆನ್ನಾನ ಡೆನ್ನನ 2026 : ನಿಯಮಾವಳಿ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ 2026ನೇ ಎಪ್ರಿಲ್ 19ರಂದು ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ಇದರ ನಿಯಮಾವಳಿಗಳನ್ನು ಕೇಂದ್ರ ಸಮಿತಿಯು ಬಿಡುಗಡೆಗೊಳಿಸಿದೆ. ನಿಯಮಾವಳಿಗಳು ಅರ್ಹತೆ ಮತ್ತು ಸದಸ್ಯತ್ವ : 1) ಈ ಸ್ಪರ್ಧೆಯು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾಗಿರುವ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆಯಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ […]

Read More

ಮಾನವೀಯತೆ ಮೆರೆದ ಯುವವಾಹಿನಿ: ಶಸ್ತ್ರಚಿಕಿತ್ಸೆಗೆ ಆರ್ಥಿಕ ಸಹಾಯ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ಮಾನವೀಯ ಸೇವಾ ಮನೋಭಾವಕ್ಕೆ ಸಾಕ್ಷಿಯಾಗಿ, ಕಾರ್ಕಳ ತಾಲೂಕು ಏರ್ಲಪಾಡಿ ಗ್ರಾಮದ ಚೈತ್ರ–ಸಂತೋಷ್ ದಂಪತಿಗಳ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ರೂ. 20,000 ಧನಸಹಾಯವನ್ನು ನೀಡಲಾಯಿತು. ಮಗುವಿಗೆ ಶ್ರವಣ ಯಂತ್ರ ಅಳವಡಿಕೆ ಹಾಗೂ ಅಗತ್ಯ ಶಸ್ತ್ರಚಿಕಿತ್ಸೆಗಾಗಿ ಈ ನೆರವು ಒದಗಿಸಲಾಗಿದ್ದು, ದಿನಾಂಕ 10/02/2026 ರಂದು ಘಟಕದ ಪದಾಧಿಕಾರಿಗಳು ಮಗುವಿನ ನಿವಾಸಕ್ಕೆ ತೆರಳಿ ಕುಟುಂಬದವರಿಗೆ ಧನಸಹಾಯವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯದರ್ಶಿ ರಾಕೇಶ್ ಅಮೀನ್ ಹಾಗೂ ಘಟಕದ […]

Read More

ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವೆ

ಪಡುಬಿದ್ರಿ : ದಿನಾಂಕ 08/02/2026 ರಂದು ಶ್ರೀ ಸಾರಂತಾಯ ಗರೋಡಿ ಉಲ್ಲಾಯ ದೈವಸ್ಥಾನ, ಸಸಿಹಿತ್ಲು ಇದರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸದಸ್ಯರು ಬೆಳಿಗ್ಗೆಯಿಂದ ಸಂಜೆಯವರೆಗೆ ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡರು. ನೆರೆದಿದ್ದ ಭಕ್ತಜನರಿಗೆ ಅನ್ನ ಬಡಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ದೈವಸ್ಥಾನದ ಆಡಳಿತ ಮಂಡಳಿಯ ಪ್ರಶಂಸೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ದೇಣಿಗೆಯನ್ನು ಸಂಗ್ರಹಿಸಿ ದೇವಸ್ಥಾನಕ್ಕೆ ಒಪ್ಪಿಸಲಾಯಿತು.

Read More

ಯುವವಾಹಿನಿಯ ಕ್ರೀಡಾ ವೇದಿಕೆ ಯುವಕರಲ್ಲಿ ಶಿಸ್ತು ಏಕಾಗ್ರತೆ ಹಾಗೂ ಆತ್ಮವಿಶ್ವಾಸ ಬೆಳೆಸಿದೆ : ಸೂರ್ಯಕಾಂತ್ ಜಯ ಸುವರ್ಣ

ಬೆಂಗಳೂರು: ಯುವಕರು ಸಮಾಜವನ್ನು ಬಲಿಷ್ಠ ಮತ್ತು ಆರೋಗ್ಯಕರ ದಿಕ್ಕಿನಲ್ಲಿ ಮುನ್ನಡೆಸುವ ಶಕ್ತಿ ಹೊಂದಿದ್ದಾರೆ; ಇಂತಹ ಕ್ರೀಡಾ ವೇದಿಕೆಗಳು ಅವರಲ್ಲಿ ಶಿಸ್ತು, ಏಕತೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತವೆ ಎಂದು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷರು ಹಾಗೂ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಚೇರ್‌ಮೆನ್ ಸೂರ್ಯಕಾಂತ್ ಜೆ. ಸುವರ್ಣ ಅಭಿಪ್ರಾಯಪಟ್ಟರು.ಅವರು ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಚಿಕ್ಕಬಾಣಾವರ ಸಮೀಪದ ಗೋಲ್ಡನ್ ರೇ ಕ್ರೀಡಾಂಗಣದಲ್ಲಿ ಫೆಬ್ರವರಿ 8ರಂದು ಆಯೋಜಿಸಲಾದ “ಬ್ರಹ್ಮಶ್ರೀ ಕ್ರೀಡಾಕೂಟ 2026” ನ್ನು ಉದ್ಘಾಟಿಸಿ ಮಾತನಾಡಿ ಯುವಕರು ಸಮಾಜದ […]

Read More

ಜ್ಞಾನದ ಬೆಳಕಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅರಳುತ್ತದೆ : ವಿಧ್ಯಾ ರಾಕೇಶ್

ಹೆಜಮಾಡಿ : ವಿದ್ಯೆಯೇ ಯುವವಾಹಿನಿಯ ಪ್ರಮುಖ ಧ್ಯೇಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ಜ್ಞಾನದ ಬೆಳಕಿನಲ್ಲಿ ತೊಡಗಿಸಿಕೊಂಡರೆ ಭವಿಷ್ಯವು ಸುಂದರವಾಗಿ ಅರಳುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿಧ್ಯಾ ರಾಕೇಶ್ ಹೇಳಿದರು. ಹೆಜಮಾಡಿ ಘಟಕವು ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಈ ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವುದು ಸಂತೋಷದ ವಿಷಯವಾಗಿದ್ದು, ಮುಂದೆಯೂ ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಅವರು ಯುವವಾಹಿನಿ(ರಿ.) ಹೆಜಮಾಡಿ ಘಟಕ ಹಾಗೂ ಸ್ವರ್ಣ ಸೌಹಾರ್ದ ಸಹಕಾರಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!