Yuvavahini

ಘಟಕಗಳು

ಕೋಟಿ-ಚೆನ್ನಯ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಡಿಸೆಂಬರ್ ೨೪ ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆಯನ್ನು 2017 ನವೆಂಬರ್ 15 ರಂದು ಮರಕ್ಕೂರು ಜನನ ಇಲ್ಲಿ ಬಿಡುಗಡೆ ಮಾಡಲಾಯಿತು. ಮರಕ್ಕುರು ಜನನದ ಯಜಮಾನರಾದ ಮಾಯಿಲಪ್ಪ ಪೂಜಾರಿಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಜಯಂತ್ ನಡುಬೈಲುರವರು ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕೋಟಿ ಚೆನ್ನಯ ಕ್ರೀಡಾ ಕೂಟವನ್ನು ಆಯೋಜಿಸಲಾಗಿದ್ದು ಬಿಲ್ಲವ ಬಾಂಧವರು ಈ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಕ್ರೀಡಾ […]

Read More

ಮಕ್ಕಳ ದಿನಾಚರಣೆ

ಹಳೆಯಂಗಡಿ: ನವಂಬರ್ ೧೪ ರಂದು ಮಕ್ಕಳ ದಿನಾಚರಣೆಯನ್ನು ಸ್ಥಳೀಯ U.B.M.C   ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಚಿತ್ರಕಲೆ ಮತ್ತು ಸಂಗೀತ ಸ್ಪರ್ಧೆಯನ್ನು ಯುವವಾಹಿನಿ (ರಿ) ಹಳೆಯಂಗಡಿ ಘಟಕ ಮತ್ತು ಲಯನ್ಸ್ & ಲಿಯೋ ಕ್ಲಬ್ ಹಳೆಯಂಗಡಿ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಯಿತು. ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ವಾಸು ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್ ಸುವರ್ಣರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಯಶೋಧರ್ ಸಾಲ್ಯಾನ್, […]

Read More

ಮುಗ್ಧ ಮನಸ್ಸಿನ ಸಮ್ಮಿಲನ – 2017

ಕೂಳೂರು : ಯುವವಾಹಿನಿ( ರಿ) ಕೂಳೂರು ಘಟಕದ ‘ಮಕ್ಕಳ ದಿನಾಚರಣೆ’ ೨೦೧೭ ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮ ದಿನಾಂಕ 14.11.2017 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು. ಮೊದಲಿಗೆ ,ಬಾಲ ಪ್ರತಿಭೆ ಕುಮಾರಿ ಶ್ರೀಕ ಆರ್ ಸಾಲಿಯಾನ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ನಂತರ ೩ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಛದ್ಮವೇಷ ಸ್ವರ್ಧೆ,ಅಭಿನಯ ಗೀತೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು ಛಧ್ಮವೇಷ ಹಾಗೂ ಅಭಿನಯ ಗೀತೆ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಯುವವಾಹಿನಿ […]

Read More

ಸೂಪರ್ ಸ್ಪಷ್ಯಾಲಿಟಿ ಆರೋಗ್ಯ ಶಿಬಿರ

ಯುವವಾಹಿನಿ (ರಿ) ಉಡುಪಿ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕೆಮ್ತೂರು,ಸಾಧನಾ ಯುವಕ ಮಂಡಲ ಹಾಗೂ ಸಾಧನಾ ಯುವತಿ ಮಂಡಲ ಇದರ ಜಂಟಿ ಆಶ್ರಯದಲ್ಲಿ, ದಿನಾಂಕ 12.11.2017 ರಂದು ಸೂಪರ್ ಸ್ಪೆಷ್ಯಾಲಿಟಿ ಆರೋಗ್ಯ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಕೆಮ್ತೂರು, ಉಡುಪಿ ಇಲ್ಲಿ ಜರುಗಿತು . ಯುವವಾಹಿನಿ(ರಿ) ಉಡುಪಿ ಘಟಕವು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಶಿಬಿರವನ್ನು ದೀಪ ಬೆಳಗುವುದರ ಮೂಲಕ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ತುಳುವೆರೆ ತುಳಸಿ ಪರ್ಬ

ಯಶಸ್ಸು ಗಳಿಸಲು ಐಶ್ವರ್ಯ, ವಿದ್ಯಾರ್ಹತೆ, ಅಥವಾ ವ್ಯಕ್ತಿಯ ಹಿನ್ನಲೆ ಮುಖ್ಯವಾಗುವುದಿಲ್ಲ . ಆತನ ಕನಸು, ಸಾಧಿಸುವ ಛಲ, ಪರಿಶ್ರಮ ಮುಖ್ಯವಾಗುತ್ತದೆ. ಇದರೊಂದಿಗೆ ತಾವು ತೊಡಗಿಸಿಕೊಂಡು ವ್ಯಕ್ತಿಯನ್ನು ಪ್ರೀತಿಸಿ ಅದನ್ನೇ ಪ್ರವೃತ್ತಿಯನ್ನಾಗಿಸಿದಾಗ ಯಶಸ್ಸು ಸಾಧ್ಯ. ಯುವವಾಹಿನಿಯ ರಾಜ್ಯೋತ್ಸವ ಪ್ರಶಸ್ತಿಯ ಹಿಂದೆ ಮೂವತ್ತು ವರುಷಗಳ ಸಾಧನೆಯ ಶ್ರಮವಿದೆ, ಪ್ರತಿಯೊಬ್ಬ ಯುವವಾಹಿನಿ ಸದಸ್ಯನ ಬೆವರ ಹನಿ ಇದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 01.11.2017 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ […]

Read More

ಮಕ್ಕಳ ಆಂತರಿಕ ಪ್ರತಿಭೆ ಅನಾವರಣಗೊಳ್ಳಲಿ : ಯಶವಂತ ಪೂಜಾರಿ

ಮಕ್ಕಳಲ್ಲಿ ಕಲಿಕೆಯ ಜೊತೆಗೆ ಆವರಲ್ಲಿನ ಆಂತರಿಕ ಪ್ರತಿಭೆಗಳು ಅನಾವರಣಗೊಂಡಾಗ ಅವರು ಸಹ ಭವಿಷ್ಯದಲ್ಲಿ ಕಲಾವಿದರಾಗಿ ಅಥವ ಅಸಾಧಾರಣ ಪ್ರತಿಭೆಗಳಾಗಿ ಬೆಳಗಲು ಸಾಧ್ಯವಿದೆ. ಮಕ್ಕಳಲ್ಲಿ ಎಂದಿಗೂ ಅನಾಥ ಪ್ರಜ್ಞೆಯನ್ನು ಮೂಡಿಸಬೇಡಿ, ಅವರನ್ನು ಸಮಾಜದ ಆಸ್ತಿಯನ್ನಾಗಿ ಅವರನ್ನು ರೂಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ, ಮೂಲ್ಕಿ ಯುವವಾಹಿನಿ ಘಟಕದ ಪ್ರತಿಯೊಂದು ಕಾರ್ಯಕ್ರಮವೂ ಸಹ ಮಾದರಿ ಕಾರ್ಯಕ್ರಮವಾಗಿರುತ್ತದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದಿಂದ ಮೂಲ್ಕಿ ಸಿಎಸ್‌ಐ ಬಾಲಿಕಾಶ್ರಮದಲ್ಲಿ ದಿನಾಂಕ 01.11.2017 ರಂದು […]

Read More

ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ : ಹರಿಶ್ಚಂದ್ರ ಅಮೀನ್

ಆಧುನಿಕ ಜೀವನ ಶೈಲಿಯಿಂದ ನಾವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ತೀರಾ ಅಗತ್ಯ, ಸ್ವಯಂಪ್ರೇರಿತ ರಕ್ತದಾನ ಮಾಡಿದ ಕಟಪಾಡಿ ಯುವವಾಹಿನಿ ಯುವಕರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ತಿಳಿಸಿದರು. ದಿನಾಂಕ 22.10.2017 ರಂದು ಯುವವಾಹಿನಿ(ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ, ವೇದವ್ಯಾಸ ಭಜನಾ ಮಂದಿರ ಅಂಬಾಡಿ, ಬಿಲ್ಲವ ಒಕ್ಕೂಟ ಪಡುಏನಗುಡ್ಡೆ, ರಿಕ್ಷಾ ಚಾಲಕ ಮಾಲಕರ ಸಂಘ ಕಟಪಾಡಿ […]

Read More

ಆರಾಧನಾ ಕೇಂದ್ರಗಳು ಸಂಸ್ಕಾರ ,ಸಂಸ್ಕೃತಿಯ ದಾರಿದೀಪವಾಗಬೇಕು : ಮಹಮ್ಮದ್ ಹನೀಫ್

ಪರಿಶುದ್ಧ ಮನಸ್ಸಿನೊಂದಿಗೆ ಸತ್ಕಾರ್ಯಗಳಿಗೆ ವಿನಿಯೋಗಿಸುವಾಗ ಮಾನವ ಜನ್ಮ ಸಾರ್ಥಕವಾಗುತ್ತದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಆರಾಧನಾ ಕೇಂದ್ರಗಳು ದಾರಿದೀಪವಾಗಬೇಕು ಹಾಗೂ ಮಾನವ ಬದುಕಿನ ವಿಕಸನಕ್ಕೆ ಸಂಸ್ಕಾರ ,ಸಂಸ್ಕೃತಿಯ ಮಾರ್ಗದರ್ಶನ ನೀಡುವ ಕೇಂದ್ರಗಳಾಗಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿ.ಎ‌.ಮಹಮ್ಮದ್ ಹನೀಫ್ ತಿಳಿಸಿದರು. ಅವರು ದಿನಾಂಕ 18.10.2017 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ತುಳುವೆರೆ ತುಡಾರ ಪರ್ಬ ಸಮಾರಂಭದ ಮುಖ್ಯ […]

Read More

ಬಲಿರಾಜ ಕೃಷಿ ಕ್ಷೇತ್ರದ ಯಜಮಾನ – ಡಾ|| ದೇಜಪ್ಪ ದಲ್ಲೋಡಿ

ಪುರಾಣ ಕಾಲದ ಬಲಿ ಚಕ್ರವರ್ತಿಯು ಭರತ ಭೂಮಿಯ ಕೃಷಿ ಕ್ಷೇತ್ರದ ಯಜಮಾನನಾಗಿದ್ದನು. “ಕೃಷಿತೋ ನಾಸ್ತಿ ದುರ್ಭಿಕ್ಷಂ” ಎಂಬುದು ಎರಡನೇ ಮನುವಾದ ಸ್ವಾರೋಚಿಷನ ಕಾಲದಲ್ಲಿ ವಿಶ್ವದ ಪ್ರಥಮ ಕೃಷಿಕನಾದ ಆದಿಮನಿಂದ ಹುಟ್ಟಿಕೊಂಡು ಬಲಿರಾಜನ ಕಾಲದಲ್ಲಿ ಸಂಪೂರ್ಣ ಪ್ರಗತಿಯನ್ನು ಕಂಡಿತು. ಇದರ ನಿಮಿತ್ತವಾಗಿಯೇ ಒಂದು ಕಾಲದ ತುಳುನಾಡಿನ ರೈತರು ತಮ್ಮ ಬೇಸಾಯದ ಗದ್ದೆಗಳ ಹುಣಿಗಳಲ್ಲಿ ಸಾಲು ಸಾಲಾಗಿ ದೀಪಗಳನ್ನುರಿಸಿ, ಬಲಿರಾಜನನ್ನು ಸಾಂಕೇತಿಕವಾಗಿ ಪ್ರತಿಷ್ಠಾಪಿಸಿ ದೀಪಾವಳಿಯನ್ನು ಆಚರಿಸುತ್ತಿದ್ದರು ಎಂದು ಖ್ಯಾತ ಸಂಶೋಧಕ ಹಾಗೂ ಹಿರಿಯ ಸಾಹಿತಿ ಡಾ|| ದೇಜಪ್ಪ ದಲ್ಲೋಡಿ ತಿಳಿಸಿದರು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!