Yuvavahini

ಘಟಕಗಳು

ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವು

ಉಪ್ಪಿನಂಗಡಿ ಗ್ರಾಮದ ಬಡ ಕುಟುಂಬದ ನಾರಾಯಣ ಪೂಜಾರಿಯವರ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ರೂ 10,000/- ಆರ್ಥಿಕ ನೆರವು ನೀಡಲಾಯಿತು. ನೆಕ್ಕಿಲಾಡಿ ಮಾಂಡೊವಿ ಮೋಟಾರ್ಸ್ ಇದರ ಸರ್ವಿಸ್ ಮೇನೇಜರ್ ಚಂದ್ರಶೇಖರ್ ಧನ ಸಹಾಯ ವಿತರಿಸಿದರು ಮತ್ತು ಉಪ್ಪಿನಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಹಾಗೂ ಮನೆ ನಿರ್ಮಾಣವು ಶೀಘ್ರವಾಗಿ ನೆರವೇರುವಂತಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಮನೋಜ್ ಸಾಲ್ಯಾನ್ ಸುಣ್ಣಾಜೆ, ಗೌರವ […]

Read More

ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ

ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್‌ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ […]

Read More

ಯುವವಾಹಿನಿಯ 24ನೇ ನೂತನ ಕೊಲ್ಯ ಘಟಕದ ಉದ್ಘಾಟನೆ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ 24ನೇ ನೂತನ ಘಟಕ ಯುವವಾಹಿನಿ(ರಿ) ಕೊಲ್ಯ ಘಟಕವು 26 ಫೆಬ್ರವರಿ 2017ನೇ ಆದಿತ್ಯವಾರ ಮಂಗಳೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಉದ್ಘಾಟನೆಗೊಂಡಿತು. ಕೊಲ್ಯ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾದ್ಯಕ್ಷ ಡಾ.ಪಿ ರಾಮಾನುಜಂ ದೀಪ ಬೆಳಗುವುದರ ಮೂಲಕ ಕೊಲ್ಯ ಘಟಕವನ್ನು ಉದ್ಗಾಟಿಸಿ ಶುಭ ಹಾರೈಸಿದರು. ನಮ್ರತಾಭಾವ ಉನ್ನತಿಗೆ ಕಾರಣವಾಗುತ್ತದೆ. ಅಹಂಭಾವ ತೊರೆದು ಹಿರಿಯರಿಗೆ ಸಮಾಜಕ್ಕೆ ತಗ್ಗಿ ಬಗ್ಗಿ ನಡೆಯುವ ಸುಸಂಸ್ಕೃತ ಗುಣ ಹೊಂದಿರುವ ಸ್ವಾರ್ಥರಹಿತ ನಿಷ್ಪಕ್ಷಪಾತ ಶಿಸ್ತುಬದ್ದ ಯುವಕರ […]

Read More

ಕೊಲ್ಯ ಘಟಕದ ಪದಗ್ರಹಣ

ಯುವವಾಹಿನಿ 24ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಕೊಲ್ಯ ಘಟಕದ ಪದಗ್ರಹಣ ಸಮಾರಂಭವು ಫೆಬ್ರವರಿ 26 ರಂದು ಕೊಲ್ಯ ಶ್ರೀ ನಾರಾಯಣಗುರು ಮಂದಿರದಲ್ಲಿ ಜರಗಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. ಸುರೇಶ್ ಬಿ. ನೇತೃತ್ವದ 12 ಸದಸ್ಯರ ಕ್ರಿಯಾಶೀಲ ಯುವಕರ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ ಅದ್ಯಕ್ಷರು : ಸುರೇಶ್ ಬಿ ಉಪಾಧ್ಯಕ್ಷರು : ರವಿ ಕೊಂಡಾಣ ಕಾರ್ಯದರ್ಶಿ : ಲತೀಶ್ ಎಂ ಸಂಕೊಳಿಗೆ […]

Read More

ಗೆಜ್ಜೆಗಿರಿ ವಾಹನ ಜಾಥಾಕ್ಕೆ ಚಾಲನೆ

ದೇಯಿ ಬೈದ್ಯೆತಿ ಕೋಟಿ ಚಿನ್ನಯ್ಯ ಮೂಲ ಸ್ಥಾನ ಗೆಜ್ಜೆಗಿರಿ ನನ್ನ ಬಿತ್ತಿಲ್­ನಲ್ಲಿ 2017 ರ ಫೆಬ್ರವರಿ 19 ರಂದು ಶಿಲಾನ್ಯಾಸ ಕಾರ್ಯಕ್ರಮ ಪೂರ್ವಭಾವಿಯಾಗಿ ಅಂದು ಬೆಳಿಗ್ಗೆ ಪುತ್ತೂರಿನಿಂದ ಆರಂಭಗೊಂಡ ವಾಹನ ಜಾಥಾವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಉದ್ಘಾಟಿಸಿದರು. ಉಡುಪಿ, ದಕ್ಷಿಣ ಕನ್ನಡ, ಹಾಗೂ ಕಾಸರಗೋಡು ಭಾಗಗಳಿಂದ ಬಂದಿದ್ದ ವಾಹನ ಜಾಥಾ ಪುತ್ತೂರು ದರ್ಬೆ ಬೈಪಾಸ್ ಜಂಕ್ಷನ್ ಇಲ್ಲಿ ಸಮಾವೇಶಗೊಂಡಿತು. ಅಲ್ಲಿಂದ ಒಟ್ಟಾಗಿ ಗೆಜ್ಜೆಗಿರಿಗೆ ತೆರಳುವ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಐದು ಶತಮಾನಗಳ ಇತಿಹಾಸದ […]

Read More

ಬೆಳ್ತಂಗಡಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 15.02.2017 ರಂದು ಅಳದಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ತತ್ವ ಪ್ರಚಾರ ಕಾರ್ಯಕ್ರಮ ಜರುಗಿತು. ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಶತಮಾನಗಳ ಹಿಂದಿನ ಕಾಲಘಟ್ಟದಲ್ಲಿ ಮಾಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರು ಜನ್ಮತಾಳದಿದ್ದರೆ ಇಂದಿಗೂ ಅಸ್ಪೃಶ್ಯತೆ ಇರುತಿತ್ತು, ಗುರುವರ್ಯರ ಮುಖ್ಯ ಉದ್ದೇಶ ವಿದ್ಯೆ, ಉದ್ಯೋಗ, ಸಂಪರ್ಕ ಸಮಾಜದಲ್ಲಿ ಪಸರಿಸುತ್ತಿರುವ ಯುವವಾಹಿನಿ ಸಂಸ್ಥೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬಿದೆ, ಯುವಕರು ದುಶ್ಚಟಗಳಿಂದ ದೂರವಾಗಿ ಗುರುಗಳ ಸಂದೇಶ ಅನುಸರಿಸಬೇಕು ಎಂದು ಕೇರಳದ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ […]

Read More

ಅಸಂಘಟಿತ ಕಾರ್ಮಿಕರ ಕಾರ್ಯಾಗಾರ

ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]

Read More

ಮಂಗಳೂರು ಮಹಿಳಾ ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ದಿನಾಂಕ 04.02.2017 ರಂದು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು.

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.

Read More

ಮೂಲ್ಕಿ: ಪರೀಕ್ಷಾ ಪೂರ್ವ ತರಬೇತಿ ಶಿಬಿರ

ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 31-01-2017 ರಂದು ಶ್ರೀ ನಾರಾಯಣಗುರು ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಶಾಲಾ ಮಂಡಳಿಯ ಕಾರ್ಯದರ್ಶಿ ಬಾಲಚಂದ್ರ ಸನಿಲ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೇಸಿಐ. ರಾಷ್ಟ್ರೀಯ ತರಬೇತುದಾರರಾದ ಜೇಸಿ. ರಾಜೇಂದ್ರ ಭಟ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸುಮಾರು 3 ಗಂಟೆಗಳ ಕಾಲ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅಡ್ವೆ ರವೀಂದ್ರ ಪೂಜಾರಿ, ಪ್ರಾಂಶುಪಾಲರಾದ ಯತೀಶ್ ಅಮೀನ್, ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!