Yuvavahini

SEP 16, 2025 7.28 PM IST

ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಯ ಆಚರಣೆ-ಯುವವಾಹಿನಿ (ರಿ) ಕೊಲ್ಯ ಘಟಕ

ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಮದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಹಿರಿಯರ ಸಮ್ಮುಖದಲ್ಲಿ ಆಚರಿಸಲಾಯಿತು.
ಸಾಮೂಹಿಕ ಗುರುಸ್ತುತಿಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು
ಘಟಕದ ಕಾರ್ಯದರ್ಶಿಯಾದ ಸೌಮ್ಯ ಯೋಗೀಶ್ ಸರ್ವರನ್ನೂ ಸ್ವಾಗತಿಸಿದರು.
ನಮ್ಮ ಘಟಕದ ಸದಸ್ಯರು ದೈವ ದಶಕಂ ಶ್ಲೋಕದ ಜೊತೆ ಆಶ್ರಮದ ಹಿರಿಯ ಸದಸ್ಯರು ದೀಪ ಬೆಳಗಿಸಿದರು.
ವಿಶ್ವ ಬಿಲ್ಲವರ ಸೇವಾ ಚಾವಡಿಯ ಉಪಾಧ್ಯಕ್ಷರು ಶ್ರೀ ಅಜಿತ್ ಪೂಜಾರಿ ಅವರು ಮಾತನಾಡಿ ಅಭಯ ಅಶ್ರಮದಲ್ಲಿ ಜಂಟಿ ಸಂಸ್ಥೆ ಆಚರಿಸುತ್ತಿರುವ ಗುರು ಜಯಂತಿಯ ಬಗ್ಗೆ ಮಾಹಿತಿ ನೀಡಿ, ಸರ್ವರಿಗೂ ಗುರು ಜಯಂತಿಯ ಶುಭ ಹಾರೈಸಿದರು
ಕೊಲ್ಯ ಘಟಕದ ಅಧ್ಯಕ್ಷರು ಶ್ರೀ ನಿತಿನ್ ಕರ್ಕೇರ,ಗ್ರಾಮ ಚಾವಡಿ ಘಟಕದ ಅಧ್ಯಕ್ಷರಾದ ಶ್ರೀ ಬಾಬು ಬಂಗೇರ ಕೊಣಾಜೆ ಗುರು ಜಯಂತಿಯ ಶುಭಾಶಯ ಕೋರಿದರು.
ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ಅಶ್ವಿತಾ ಹರೀಶ್ ಕುಂಪಲ ಹಾಗೂ ಗ್ರಾಮಚಾವಡಿ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀ ನಾಗೇಶ್ ಪೂಜಾರಿ ಜೋಗಿ ಬೆಟ್ಟು ಗುರು ಸಂದೇಶ ನೀಡಿದರು.
ಅಭಯ ಆಶ್ರಮದ ಸಿಬ್ಬಂದಿ ಶ್ರೀಮತಿ ಭವಾನಿ ಇವರು ಅಭಯ ಆಶ್ರಮದಲ್ಲಿ ಗುರು ಜಯಂತಿ ಆಚರಣೆ ಮಾಡಿದ ಜಂಟಿ ಸಂಸ್ಥೆ ಗಳಿಗೆ ಧನ್ಯವಾದ ತಿಳಿಸಿದರು
ಕೇಂದ್ರ ಸಮಿತಿಯ ಯುವ ಸಿಂಚನ ಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕರು ಹಾಗೂ ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಕುಸುಮಾಕರ್ ಕುಂಪಲ ಕಾರ್ಯಕ್ರಮ ನಿರೂಪಣೆ ಮಾಡಿದರು.
ಕೊನೆಯಲ್ಲಿ ಗ್ರಾಮ ಚಾವಡಿ ಘಟಕದ ಕಾರ್ಯದರ್ಶಿ ಮಿಥುನ್ ಪಜೀರ್ ಧನ್ಯವಾದ ಸಮರ್ಪಿಸಿದರು
ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರುಗಳು, ನಿಕಟ ಪೂರ್ವ ಅಧ್ಯಕ್ಷರುಗಳು, ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಅಶ್ರಮದ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!