Yuvavahini

SEP 17, 2025 4.50 AM IST

ತಾಲೂಕು ಮಟ್ಟದ ನಾರಾಯಣಗುರು ಜನ್ಮದಿನಾಚನೆ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಡು, ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಗುರುಜಯಂತಿ ಆಚರಣೆ ದಿನಾಂಕ 07/09/2025 ನೇ ಆದಿತ್ಯವಾರ ಬಿ.ಸಿ.ರೋಡಿನ ಗಾಣದಪಡ್ಡುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ವಹಿಸಿ ಮಾತನಾಡಿ, ಸಂಘರ್ಷ ಇಲ್ಲದೆ ಸಾಮಾಜಿಕ ಕ್ರಾಂತಿ ಮಾಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಜಗತ್ತಿನ ಗಮನ ಸೆಳೆದಿದ್ದಾರೆ. ಅವರ ಹೆಸರಲ್ಲಿ ಪುಂಜಾಲಕಟ್ಟೆಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ ಈಗ ಬಾಡಿಗೆ ಕಟ್ಟಡದಲ್ಲಿರುವ ವಿದ್ಯಾರ್ಥಿಗಳನ್ನು ಇಲಾಖೆ ವಿಳಂಬ ಮಾಡದೆ ಸ್ಥಳಾಂತರಿಸಬೇಕು ಅಲ್ಲೊಂದು ಧ್ಯಾನಮಂದಿವನ್ನೂ ನಿರ್ಮಿಸಲಾಗುವುದು ಎಂದರು.

ಬಂಟ್ವಾಳ ಪುರಸಭಾ ಅಧ್ಯಕ್ಷ ಬಿ.ವಾಸು ಪೂಜಾರಿ ಮಾತನಾಡಿ, ಗುರುಗಳು ನೀಡಿದ ಬೆಳಕಿನ ಪಥದಲ್ಲಿ ಸಾಗೋಣ ಎಂದರು.

ಉಪತಹಸೀಲ್ದಾ‌ರ್ ನವೀನ್ ಬೆಂಜನದವು ಮಾತನಾಡಿ, ನಾರಾಯಣಗುರುಗಳ ವಿಚಾರಧಾರೆ ಎಲ್ಲರಿಗೂ ತಲುಪುವಂತಾಗಲಿ ಎಂದರು.

ಶ್ರೀನಾರಾಯಣಗುರು ವಸತಿ ಶಾಲೆ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಗುರು ಸಂದೇಶ ನೀಡಿ ಮೌನ ಕ್ರಾಂತಿಯ ಮೂಲಕ ಅಸಮಾನತೆ ವಿರುದ್ಧ ಹೋರಾಟ ಮಾಡಿದವರು ಗುರುಗಳು, ಕ್ರಾಂತಿ ಮೂಲಕ ಶಾಂತಿ ಮಂತ್ರ ಪಠಿಸಿದವರು ಎಂದರು.

ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ ವಿದ್ಯಾರ್ಥಿಗಳು ಗುರಿ ತಲುಪಲು ನಾರಾಯಣಗುರುಗಳ ಸಂದೇಶ ಸಹಕಾರಿ ಎಂದು ಶುಭ ಹಾರೈಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್‌ ಪಚ್ಚಿನಡ್ಕ, ಯುವವಾಹಿನಿ ಬಂಟ್ವಾಳ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೈಲು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ ಚಂಡ್ತಿಮಾ‌ರ್ ಉಪಸ್ಥಿತರಿದ್ದರು. ಯುವವಾಹಿನಿ ನಿಕಟಪೂರ್ವ ಅಧ್ಯಕ್ಷ ದಿನೇಶ್‌ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!