Yuvavahini

OCT 21, 2025 2.50 PM IST

ಮಾಡೂರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ಹಸ್ತಾಂತರ-ಯುವವಾಹಿನಿ (ರಿ.) ಕೊಲ್ಯ ಘಟಕ

5 ಮಹಿಳೆಯರ ಶಿಕ್ಷಾ ಸಾಥಿ ಎಂಬ ಸಂಘಟನೆ ಜಂಟಿಯಾಗಿ ದಿನಾಂಕ 22/09/2025 ರಂದು ಮಾಡೂರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು.

ವಿದ್ಯಾರ್ಥಿಗಳ ಕೊರತೆ ಎದುರಿಸಿ ಮುಚ್ಚುವ ಹಂತದಲ್ಲಿ ಇದ್ದ ಸರ್ಕಾರಿ ಶಾಲೆಗೆ ಕೋಟೆಕಾರ್ ಪಟ್ಟಣ ಪಂಚಾಯತ್ ಕೌನ್ಸಿಲರ್ ಶ್ರೀ ಸುಜಿತ್ ಮಾಡೂರ್ ಅವರ ಮುತುವರ್ಜಿಯಿಂದ, ಊರವರ ಸಹಕಾರದಿಂದ ಖಾಸಗಿ ಶಾಲೆಗೆ ಸಮನಾಗಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಎಲ್ಲಾ ಅವಶ್ಯಕತೆ ಪೂರೈಸುವ ನಿಟ್ಟಿನಲ್ಲಿ ಘಟಕ ಹಾಗೂ ಶಿಕ್ಷಾ ಸಾಥಿ ಎಂಬ ಸಮಾನ ಮನಸ್ಕರ 5 ಮಹಿಳೆಯರ ಸಂಘಟನೆಯ ಸಹಕಾರದಿಂದ ಸ್ಮಾರ್ಟ್ ಟಿವಿ ಯನ್ನು ಕೊಡುಗೆಯಾಗಿ ನೀಡಿತು. ಈ ಸಂದರ್ಭದಲ್ಲಿ ಘಟಕ ದ ಅಧ್ಯಕ್ಷರಾದ ಶ್ರೀ ನಿತಿನ್ ಕರ್ಕೇರ ಮಾತನಾಡಿ *ಸರ್ಕಾರಿ ಶಾಲೆಯಲ್ಲಿ ಖಾಸಗಿ ಶಾಲೆ ಯಂತೆ ಎಲ್ಲಾ ಸೌಲಭ್ಯ ದೊರೆತರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ, ಸ್ಮಾರ್ಟ್ ಟಿವಿ ಯಿಂದ ಮಕ್ಕಳಿಗೆ ಬಹಳ ಬೇಗನೆ ಅರ್ಥವಾಗುವಂತೆ ಕಲಿಸಲು ಅನುಕೂಲ, ವಿದ್ಯಾರ್ಥಿಗಳ ಆಸಕ್ತಿಗೆ ಸ್ಮಾರ್ಟ್ ಟಿವಿ ಪೂರಕ, ಆದುದರಿಂದ ಶಿಕ್ಷಾ ಸಾಥಿ ಜೊತೆ ಕೈ ಜೋಡಿಸಿ ಶಾಲೆಗೆ ಟಿವಿ ನೀಡಲು ನಮಗೆ ಸಂತೋಷವಾಗಿದೆ ಎಂದರು. ಶಾಲೆಯ ಅಭಿವೃದ್ಧಿಯ ರೂವಾರಿ ಶ್ರೀ ಸುಜಿತ್ ಮಾಡೂರ್ ಘಟಕದ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿ ಸಹಕಾರ ನೀಡಿದ ಯುವವಾಹಿನಿ ಘಟಕದ ಸರ್ವ ಸದಸ್ಯರಿಗೂ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಘಟಕದ ಸಂಘಟನಾ ನಿರ್ದೇಶಕರಾದ ಶ್ರೀ ರಘುರಾಮ್ ಸುವರ್ಣ, ಶ್ರೀ ಶೇಖರ್ ಮಾಡೂರ್, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಶ್ರೀ ಶಶಿಧರ್ ಮಾಡೂರ್, ಸಮಾಜ ಸೇವೆ ನಿರ್ದೇಶಕರಾದ ಶ್ರೀ ಭಾಸ್ಕರ್ ಮಡ್ಯಾರ್ ಉಪಸ್ಥಿತರಿದ್ದರು. ಶಿಕ್ಷಾ ಸಾಥಿ ಸಂಸ್ಥೆಯ ಶ್ರೀಮತಿ ಸುಜಾತ ರಾಜೇಶ್ ಇವರು ಸ್ಮಾರ್ಟ್ ಟಿವಿ ನೀಡುವ ಸಹಬಾಗಿತ್ವಕ್ಕೆ ಯುವವಾಹಿನಿ ಘಟಕದ ಅಧ್ಯಕ್ಷರ ತುರ್ತು ಸ್ಪಂದನೆಗೆ, ಘಟಕದ ಸರ್ವರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!