Yuvavahini

DEC 01, 2025 2.32 PM IST

2025-26 ರ ಸಾಲಿನ ಪದಪ್ರದಾನ ಸಮಾರಂಭ -ಯುವವಾಹಿನಿ(ರಿ.)ಕಾರ್ಕಳ ಘಟಕ

2025-26 ರ ಸಾಲಿನ ಪದಪ್ರದಾನ ಸಮಾರಂಭ
03.11.2025ರ ಸೋಮವಾರದಂದು ಕಾರ್ಕಳದ ಕಾರ್ಕಳ ಇನ್ ಬೈಪಾಸ್ ನಲ್ಲಿ ನಡೆಯಿತು.
ಘಟಕದ ಅಧ್ಯಕ್ಷರಾದ ಮಮತಾ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಹಿರಿಯರಾದ ಭಾಸ್ಕರ್ ಎಸ್ ಕೋಟ್ಯಾನ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕಾರ್ಕಳ ಯುವವಾಹಿನಿಯು ಯುವ ಸದಸ್ಯರನ್ನು ಒಗ್ಗೂಡಿಸಿಕೊಂಡು ಶೈಕ್ಷಣಿಕ, ಧಾರ್ಮಿಕ, ಆರೋಗ್ಯಸೇವೆ ಮಾಡುವ ಜೊತೆಗೆ ಮಾದರಿ ಸಂಘವಾಗಿ ಬೆಳೆಯುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ಪಟ್ಟರು. ಮುಖ್ಯ ಅತಿಥಿಗಳಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ, ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘ ದ ಅಧ್ಯಕ್ಷರಾದ ಪ್ರಮಲ್ ಕುಮಾರ್, , ಜವಾಹರ ಬಾಲ್ ಮಂಚ್ ಇದರ ಜಿಲ್ಲಾ ಅಧ್ಯಕ್ಷರಾದ ಶೈಲಜಾ ರಾಜೇಜ್, ಕಾರ್ಕಳ ಘಟಕದ ಸ್ಥಾಪಕ ಅಧ್ಯಕ್ಷ ರಾದ ಸುಧಾಕರ್ ಪೂಜಾರಿ ಉಪಸ್ಥಿತರಿದ್ದರು. ಯುವವಾಹಿನಿ ಕಾರ್ಕಳ 2024-25ರ ಸಾಲಿನಲ್ಲಿ ನಡೆದ ಕಾರ್ಯಕ್ರಮಗಳ ವಿವರವುಳ್ಳ ವರದಿಯನ್ನು ಕಾರ್ಯದರ್ಶಿ ಸಂದೇಶ್ ಮಂಡಿಸಿದರು.ದಾನಿಗಳ ನೆರವಿನೊಂದಿಗೆ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಸುಮಾರು 50000 ಮೊತ್ತದ ವಿದ್ಯಾರ್ಥಿ ವೇತನವನ್ನು ಈ ಸಂದರ್ಭದಲ್ಲಿ ನೀಡಲಾಯಿತು, ಘಟಕದ 2025-26ನೇ ಸಾಲಿನ ನೂತನ ಅಧ್ಯಕ್ಷರಾದ ಪ್ತಕಾಶ್ ಪೂಜಾರಿ ಮತ್ತು ಕಾರ್ಯದರ್ಶಿ ರಾಕೇಶ್ ಅಮೀನ್ ಅವರೊಂದಿಗೆ ನೂತನ ತಂಡದ ಪದಾಧಿಕಾರಿಗಳು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಂಜುನಾಥ್ ಪೂಜಾರಿಯವರನ್ನು ಹಾಗೂ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ರು, ಕಿತ್ತೂರ್ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತ ರಾದ ಶೈಲಜಾ ರಾಜೇಶ್ ರವರನ್ನು ,ಸಮಾಜ ಸೇವಕರಾದ ಭಾಸ್ಕರ ಎಸ್ ಕೋಟ್ಯಾನ್, ಕೇಂದ್ರ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರನ್ನು, ಪ್ರಸ್ತುತ ಅಧ್ಯಕ್ಷರಾದ ಮಮತಾ ಅಂಚನ್ ದಂಪತಿಗಳನ್ನು ಸನ್ಮಾನದೊಂದಿಗೆ ಅಭಿನಂದಿಸಲಾಯಿತು. ಘಟಕಕ್ಕೆ ನೂತನವಾಗಿ 46 ಮಂದಿ ಸದಸ್ಯರು ಸೇರ್ಪಡೆಯಾದರು.
ಸಂತೋಷ್, ನಿತಿನ್ ಅಜಿತ್ ಕಾರ್ಯಕ್ರಮ ನಿರೂಪಿಸಿ, ನೂತನ ಕಾರ್ಯದರ್ಶಿ ರಾಕೇಶ್ ಅಮೀನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!