Yuvavahini

APR 27, 2003 10.40 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ತುಕಾರಾಮ್ ಎನ್. ಅಧ್ಯಕ್ಷರು – 2002-03

ತುಕಾರಾಮ ಎನ್. ಇವರು ಯುವವಾಹಿನಿ(ರಿ) ಕೇಂದ್ರ ಸಮಿತಿಯ 2002-03 ನೇ ಸಾಲಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. 2-5-1962 ರಲ್ಲಿ ಜನಿಸಿದ ಇವರು 1997-98 ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಬಳಿಕ ’ಸಿಂಚನ ಪತ್ರಿಕೆಯ ಸಂಪಾದಕರಾಗಿ, 2001-02 ರಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಶಾಲಿಯಾಗಿರುತ್ತಾರೆ.

ಇವರು ಕೇಂದ್ರ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ’ಕೋಟಿ-ಚೆನ್ನಯ್ಯ’ ರಾಷ್ಟ್ರೀಯ ಕ್ರೀಡಾಕೂಟವನ್ನು ಬಿಲ್ಲವ ಮಹಾಮಂಡಲದ ಸಹಯೋಗದೊಂದಿಗೆ ದಿನಾಂಕ 12-5-2002 ರಂದು ನಡೆಸಲಾಗಿದ್ದು, ಹಲವಾರು ಯುವ ಪ್ರತಿಭೆಗಳು ಇದರಿಂದ ಬೆಳಕಿಗೆ ಬರುವಂತೆ ಆಗಿರುತ್ತದೆ.

ನಮ್ಮ ಸಮಾಜದ ಹಿರಿಯ ಸಾಹಿತಿ, ಸಾಹಿತ್ಯ ಕ್ಷೇತ್ರದ ದಿಗ್ಗಜ, ನಾಡಿನ ಕಣ್ಮಣಿ, ನಟ, ನಾಟಕಕರ್ತರಾಗಿ, ಕಾದಂಬರಿ ಕಾರರಾಗಿ ಹೆಸರುವಾಸಿಯಾದ ದಿ| ವಿಶುಕುಮಾರ್‌ರವರ ಸವಿ ನೆನಪಿಗಾಗಿ ಹಾಗೂ ಸಮಾಜದ ಯುವ ಬರಹಗಾರರನ್ನು ಬೆಳಕಿಗೆ ತರುವುದಕ್ಕೋಸ್ಕರ ವಿಶುಕುಮಾರ್ ಕಾರ್ಯಕ್ರಮ ದಿನಾಂಕ 3-11-2002 ರಂದು ಬಹಳ ಯಶಸ್ವಿಯಾಗಿ ಮೂಡಿಬಂದಿದ್ದು ಜಾತಿ ಚೌಕಟ್ಟಿನ ಹೊರಗಿರುವ ಸಾಹಿತ್ಯ ಲೋಕಕ್ಕೆ ಹಾಗೂ ಇತರ ಬರಹಗಾರರಿಗೆ ವಿಶುಕುಮಾರ್ ರವರನ್ನು ಮತ್ತೆ ನೆನಪಿಸಿಕೊಡುವಲ್ಲಿ ಸಹಕಾರಿಯಾಗಿದೆ. ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ, ಕಾರ್ಯದರ್ಶಿ ಶ್ರೀ ವಿ.ಗ. ನಾಯಕ, ಡಾ| ನಾ. ಮೊಗಸಾಲೆ, ಪ್ರೊ. ಪಾ. ಸಂಜೀವ ಬೋಳಾರ್, ಶ್ರೀಮತಿ ಸಾರಾ ಅಬೂಬಕ್ಕರ್, ಶ್ರೀ ಬಿ. ಜನಾರ್ಧನ ಭಟ್, ಡಾ| ಸಬೀಹಾ ಭೂಮೇಗೌಡ, ಅಂತರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ ಶ್ರೀ ಸದಾನಂದ ಸುವರ್ಣ ಹಾಗೂ ಇನ್ನಿತರ ನೂರಾರು ಸಾಹಿತಿಗಳು, ಸಾಹಿತ್ಯಾಸಕ್ತರು ಬಹು ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆ ದೊರೆತಿರುವುದರಿಂದ ಹಾಗೂ ಹಿರಿಯ ಸಾಹಿತಿಗಳ ಅಭಿಪ್ರಾಯ ಪಡೆದು ವಿಶುಕುಮಾರ್ ನೆನಪಿನಲ್ಲಿ ಸಾಹಿತ್ಯ ಪ್ರಶಸ್ತಿಯೊಂದನ್ನು ಹುಟ್ಟುಹಾಕಿ ಪ್ರತಿ ವರ್ಷ ನೀಡಲು ಮುಂದಾಗಿದೆ. ಅದೇ ರೀತಿ 28-4-2003 ರಂದು ನಡೆದ ಯುವವಾಹಿನಿಯ ವಾರ್ಷಿಕ ಸಮಾವೇಶದಂದು ಡಾ| ನಾ.ಮೊಗಸಾಲೆ ಅವರ ಪಂಥ ಕಾದಂಬರಿಗೆ ಪ್ರಥಮ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

’ವಿಶುಕುಮಾರ್ ದತ್ತಿ ನಿಧಿ’ ಸಂಚಾಲಕರಾಗಿ, ವಿದ್ಯಾನಿಧಿಯ ಸಂಚಾಲಕರಾಗಿ, ಕೇಂದ್ರ ಸಮಿತಿಗಳಲ್ಲಿ ವಿವಿಧ, ಪದಾಧಿಕಾರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಿಯಾಗಿರುತ್ತಾರೆ. ಇವರ ಧರ್ಮಪತ್ನಿ ಶ್ರೀಮತಿ ಸೌಮ್ಯಲತಾರವರು ಅಧ್ಯಾಪಕಿಯಾಗಿದ್ದು, ಪುತ್ರ ತುಷಾರ್ ಇವರು ಬಿ.ಸಿ.ಎ. ವಿದ್ಯಾರ್ಥಿ ಇವರೊಂದಿಗೆ ಸಂತೃಪ್ತಿಯ ಜೀವನ ನಡೆಸಿಕೊಂಡಿರುತ್ತಾರೆ.

ವಿಳಾಸ : ತುಷಾರ, ನೆಕ್ಕಿಲಗುಡ್ಡೆ, ಪ್ರಶಾಂತ್ ನಗರ, ದೇರೇಬೈಲ್ ಕೊಂಚಾಡಿ, ಮಂಗಳೂರು-575 006
ಸೆಲ್: 9448696942

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!