Yuvavahini

JUL 31, 2016 7.27 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ * ಯುವವಾಹಿನಿ(ರಿ) ಉಡುಪಿ ಘಟಕ

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರರವರಿಗೆ 2016 ರ ಸಾಲಿನ ವಿಶುಕುಮಾರ್ ಪ್ರಶಸ್ತಿ

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ.

2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, ಹಿರಿಯ ಸಾಹಿತಿಯಾದ ಎಂ. ಜಾನಕಿ ಬ್ರಹ್ಮಾವರರವರಿಗೆ ನೀಡಿದ ಹೆಮ್ಮೆ ಯುವವಾಹಿನಿಯದ್ದು.

ತಾ. 31-7-2017 ರಂದು ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಆರೂರು ಲಕ್ಷ್ಮೀನಾರಾಯಣ ರಾವ್ ಸಭಾ ಭವನ (ಪುರಭವನ) ಅಜ್ಜರಕಾಡು, ಉಡುಪಿ ಇಲ್ಲಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ ಬಹಳ ಅಚ್ಚುಕಟ್ಟಾಗಿ ನಡೆದಿರುತ್ತದೆ.

ಸಮಾರಂಭದ ಮೊದಲಿಗೆ ನಾಡಗೀತೆಯನ್ನು ಮೂಲ್ಕಿ ಘಟಕದ ಸದಸ್ಯರು ಸುಶ್ರಾವ್ಯವಾಗಿ ಹಾಡಿದರು.

ಬನ್ನಂಜೆ ಬಾಬು ಅಮೀನ್‌ರವರು ಪ್ರಶಸ್ತಿಯನ್ನು ಪ್ರದಾನಿಸಿ ಯುವವಾಹಿನಿ ಸಂಘಟನೆಯ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನೇರ ನಡೆನುಡಿಯ ವಿಶುಕುಮಾರ್‌ರವರ ಕಾರ್ಯದಕ್ಷತೆಯ ಬಗ್ಗೆ ಮಾತನಾಡಿದರು.

ಅತಿಥಿ ಅಭ್ಯಾಗತರನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್‌ರವರು ಸ್ವಾಗತಿಸಿದರು. ವಿಶುಕುಮಾರ್ ದತ್ತಿನಿಧಿಯ ಪ್ರಾಯೋಜಕರಾದ ಟಿ. ಶಂಕರ ಸುವರ್ಣರವರು ಪ್ರಸ್ತಾವನೆ ಗೈದರು.

ಆಯ್ಕೆ ಸಮಿತಿಯ ಸದಸ್ಯರಾದ ಶ್ರೀಮತಿ ಬಿ.ಎಂ. ರೋಹಿಣಿ ಯವರು ವಿಶುಕುಮಾರ್ ಪ್ರಶಸ್ತಿಯ ಆಯ್ಕೆಯ ಬಗ್ಗೆ ತಿಳಿಸಿದರು.

ಪ್ರಶಸ್ತಿ ಪುರಸ್ಕೃತರ ಪರಿಚಯವನ್ನು ಶ್ರೀ ಸಾಧು ಪೂಜಾರಿಯವರು ಸಭೆಗೆ ಓದಿ ತಿಳಿಸಿದರು.

ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಶ್ರೀಮತಿ ಎಂ. ಜಾನಕಿ ಬ್ರಹ್ಮಾವರರವರು ವಿಶುಕುಮಾರ್‌ರವರ ಹೆಸರಿನಲ್ಲಿ ನೀಡಿದ ಈ ಪ್ರಶಸ್ತಿ ತುಂಬಾ ಅಮೂಲ್ಯವಾದುದು. ಈ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ತನ್ನ ಜವಾಬ್ದಾರಿ ಹೆಚ್ಚಿಸಿದಿರಿ ಎಂದರು. ಹಾಗೂ ಯುವವಾಹಿನಿಯ ಸರ್ವಸದಸ್ಯರನ್ನು ಅಭಿನಂದಿಸಿದರು.

ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಗೆ ಕಳೆದ ಹಲವಾರು ವರ್ಷಗಳಿಂದ ದೇಣಿಗೆ ನೀಡುತ್ತಾ ಬಂದಿರುವ ಪ್ರಸಕ್ತ ಸಾಲಿಗೆ ಪ್ರಾಯೋಜಕರಾದ ಟಿ. ಶಂಕರ ಸುವರ್ಣರವರನ್ನು ಸಮಿತಿಯ ಪರವಾಗಿ ಮುಖ್ಯ ಅತಿಥಿಯಾದ ಶ್ರೀ ಸಂಪತ್ ಬಿ. ಸುವರ್ಣರವರು ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಫಲಪುಷ್ಪ ನೀಡಿ ಅಭಿನಂದಿಸಿದರು.

ಶ್ರೀ ಸಂಪತ್ ಬಿ. ಸುವರ್ಣರವರು ಸಮಯೋಚಿತವಾಗಿ ಮಾತನಾಡುತ್ತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಪ್ರಭಾಕರ ನೀರುಮಾರ್ಗ ಯುವವಾಹಿನಿ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಕು| ರಮ್ಯ ಸುಜೀರ್‌ರವರ ಪರಿಚಯವನ್ನು ಕಾರ್ಯದರ್ಶಿಯಾದ ಶ್ರೀ ಸಂಜೀವ ಸುವರ್ಣರವರು ವಾಚಿಸಿದರು. ಮುಖ್ಯ ಅತಿಥಿಯಾದ ಡಾ. ಮಾಧವಿ ಭಂಡಾರಿಯವರು ’ಯುವ ಸಾಹಿತ್ಯ ಪ್ರಶಸ್ತಿ’ಯನ್ನು ವಿತರಿಸಿದರು. ವಿಶುಕುಮಾರ್‌ರವರ ಕೆಲವೊಂದು ಕೃತಿಗಳ ಬಗ್ಗೆ ಮಾತನಾಡಿ ಅಂತರ್ಜಾಲದಲ್ಲಿ ವಿಶುಕುಮಾರ್‌ರವರ ಬಗ್ಗೆ ಮಾಹಿತಿ ನೀಡುವಂತೆ ವಿನಂತಿಸಿದರು. ಸಭಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರು ಕಾರ್ಯಕ್ರಮದ ಅಚ್ಚುಕಟ್ಟುತನಕ್ಕೆ ಮಾರು ಹೋಗಿ ಯುವವಾಹಿನಿಯನ್ನು ತುಂಬು ಹೃದಯದಿಂದ ಅಭಿನಂದಿಸಿದರು. ಸಾಹಿತ್ಯ ಕಾರ್ಯಕ್ರಮ ಇನ್ನು ಮುಂದಕ್ಕೆ ಉಡುಪಿಯಲ್ಲಿ ಮಾಡುವುದಾದರೆ ಯುವವಾಹಿನಿ ಸಂಘಟನೆಯ ಮಾರ್ಗದರ್ಶನ ಪಡೆಯುವಂತಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ನಾವು ಯಾವ ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿದರೂ ಕನ್ನಡದ ಬಗ್ಗೆ ಅಭಿಮಾನ ಇರಬೇಕೆಂದು ವಿನಂತಿಸಿದರು. ಅತಿಥಿಗಳಿಗೆ ಸ್ಮರಣಿಕೆಯನ್ನು ಅಧ್ಯಕ್ಷರ ನೀಡಿದರು.

ಕೊನೆಯದಾಗಿ ಧನ್ಯವಾದವನ್ನು ಸಂಚಾಲಕರಾದ ಶ್ರೀ ಕಿಶೋರ್ ಕೆ. ಬಿಜೈಯವರು ಸಮರ್ಪಿಸಿದರು. ಕಾರ್ಯಕ್ರಮವನ್ನು ನರೇಂದ್ರ ಕೆರೆಕಾಡು ಹಾಗೂ ಶ್ರೀಮತಿ ಅಮಿತಾಂಜಲಿ ಕಿರಣ್ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!