Yuvavahini

JAN 04, 2026 11.24 AM IST

ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕ

ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ಕ್ಷೇತ್ರದರ್ಶನ

ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು.

ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ ಮಾರ್ಗದರ್ಶನದಲ್ಲಿ ಸುಮಾರು 200 ಮೀಟರ್ ಉದ್ದದ ಇತಿಹಾಸ ಪ್ರಸಿದ್ಧ ಗುಹೆಯೊಳಗೆ ಭಕ್ತಿಭಾವದಿಂದ ದೇವರ ಸ್ಮರಣೆ ಮಾಡುತ್ತಾ ದರ್ಶನ ಪಡೆದು, ಬಳಿಕ ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಲಾಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಹಗಲು ತೇರು, ಬಲಿ ಸೇವೆ, ಪಲ್ಲಕ್ಕಿ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಪೂರ್ವಕವಾಗಿ ಕಣ್ತುಂಬಿಕೊಂಡರು.

ಅನಂತರ ಜಾಬಾಲಿ ಮುನಿಯ ಗುಡಿ, ಅದರ ಹಿಂದಿರುವ ಶಿವಲಿಂಗಗಳ ದರ್ಶನ, ರಕ್ತೇಶ್ವರಿ ಹಾಗೂ ನಾಗಬ್ರಹ್ಮ ದೇವರ ದರ್ಶನ, ಅನ್ನಪ್ರಸಾದ ಸ್ವೀಕಾರ ಹಾಗೂ ವ್ಯಾಗ್ರ ಚಾಮುಂಡಿ ದೈವದ ದರ್ಶನ ಪಡೆದು ಪರಿಸರ ವೀಕ್ಷಣೆ ನಡೆಸಲಾಯಿತು.

ಈ ಕ್ಷೇತ್ರದರ್ಶನ ಯಾತ್ರೆ ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ಮಾಜಿ ಅಧ್ಯಕ್ಷರಾದ ಜಿತೇಶ್ ಸಾಲಿಯನ್ ಹಾಗೂ ದೀಪ್ ಕೀರಣ್ ಇವರ ನೇತೃತ್ವದಲ್ಲಿ ಶಿಸ್ತಿನಿಂದ ಮತ್ತು ಭಕ್ತಿಭಾವದಿಂದ ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!