ಯುವವಾಹಿನಿ (ರಿ) ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 10-7-2016 ರಂದು ಅಡ್ವೆ ಆನಂದಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ವಹಿಸಿದ್ದರು. ಡಾ. ಎನ್.ಟಿ. ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2016-17 ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಕಾರ್ಯದರ್ಶಿಯಾಗಿ ಶಶಿಧರ್ ಟಿ. ಪೂಜಾರಿ ಆಯ್ಕೆಗೊಂಡರು. ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕೇಂದ್ರ ಸಮಿತಿ ಉಪಾಧ್ಯಕ್ಷ ಪದ್ಮನಾಭ ಮರೋಳಿ ಭೋದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೇ ಅಂದು ಪರಿಸರದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಲ್ಲಿ 7ನೇ, 10ನೇ ತರಗತಿ ಹಾಗೂ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು.
ದಿನಾಂಕ 17-7-2016 ರಂದು ಘಟಕದ ಜಂಟಿ ಸಭೆ ನಡೆದು ಅಧಿಕಾರ ಹಸ್ತಾಂತರ ಮಾಡಲಾಯಿತು. ನಂತರ ಮುಂದಿನ ವರ್ಷದ ಕಾರ್ಯಕ್ರಮಗಳ ಪಟ್ಟಿ ಮಾಡಲಾಯಿತು. ಅಲ್ಲದೆ ಈ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದ ರೂಪುರೇಷೆ ಹಾಕಲಾಯಿತು. ಅಲ್ಲದೇ ಉಡುಪಿಯಲ್ಲಿ ನಡೆಯುವ ೨೯ನೇ ವರ್ಷದ ಸಮಾವೇಶಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಯಿತು. ಧನ್ಯವಾದದೊಂದಿಗೆ ಸಭೆ ಮುಕ್ತಾಯವಾಯಿತು.
ಅಭಿನಂದನೆ
ಪೊಲೀಸ್ ಇಲಾಖೆಯಲ್ಲಿನ ತಮ್ಮ ವಿಶೇಷ ಸೇವೆಗಾಗಿ 2015-16 ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪ್ರಾಮಾಣಿಕ, ನಿಷ್ಠಾವಂತ ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್ ಇವರನ್ನು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಯುವವಾಹಿನಿ ಸಲಹೆಗಾರರಾದ ಬಿ. ತಮ್ಮಯ, ಅಣ್ಣು ಪೂಜಾರಿ, ಅಧ್ಯಕ್ಷರಾದ ರಾಜೇಶ್ ಸುವರ್ಣ, ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಕಡಂಬಳಿಕೆ, ಕಾರ್ಯದರ್ಶಿ ಸುಲತಾ ಉಪಸ್ಥಿತರಿದ್ದರು.