ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 02-03-2026, ಸೋಮವಾರದಂದು ನೆರವೇರಿತು.

ಈ ವಾರದ ಭಜನಾ ಸೇವೆಯನ್ನು ಅಶೋಕ್ ನಗರ ದಂಬೇಲ್‌ನ ವೆಂಕಟೇಶ್ ರಾವ್ ಮತ್ತು ಬಳಗದವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಭಕ್ತಿಪ್ರಧಾನವಾದ ಸಂಕೀರ್ತನೆಗಳ ಮೂಲಕ ನೆರೆದಿದ್ದ ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.


