ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 27-02-2026 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ನಡೆದ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಲಾಯಿತು.
ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆದ ಭವ್ಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಘಟಕದ ಸದಸ್ಯರು ಶಿಸ್ತಿನಿಂದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಕ್ಷೇತ್ರದ ಅನ್ನದಾನ ಸೇವೆಗೆ ಶಕ್ತಿನಗರ ಘಟಕದ ವತಿಯಿಂದ ಆರ್ಥಿಕ ದೇಣಿಗೆಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಘಟಕದ ಪದಾಧಿಕಾರಿಗಳಿಗೆ ಬ್ರಹ್ಮ ಬೈದರ್ಕುಲು ಹಾಗೂ ದೇಯಿ ಬೈದೇತಿ ಕೋಟಿ ಚೆನ್ನಯ್ಯರ ಸಿರಿ ಗಂಧ ಪ್ರಸಾದ ನೀಡಿ ಗೌರವಿಸಲಾಯಿತು.
ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸಕ್ರಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.


