Yuvavahini

MAR 08, 2026 11.00 AM IST

ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಸೋಶಿಯಲ್ ಮೀಡಿಯಾವನ್ನು ಜವಾಬ್ದಾರಿಯುತವಾಗಿ ಬಳಸಿ: ಎಸಿಪಿ ರೀನಾ ಸುವರ್ಣ

ಬೆಂಗಳೂರು: “ಇಂದಿನ ಯುವ ಪೀಳಿಗೆ ಮತ್ತು ಮಹಿಳೆಯರು ಸೋಶಿಯಲ್ ಮೀಡಿಯಾವನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣಗಳು ಕೇವಲ ಮನೋರಂಜನೆಗೆ ಸೀಮಿತವಾಗದೆ, ಜ್ಞಾನಾರ್ಜನೆ ಮತ್ತು ಸಮಾಜದ ಏಳಿಗೆಗೆ ಪೂರಕವಾಗಿರಲಿ,” ಎಂದು ಬೆಂಗಳೂರು ನಗರದ ಸಹಾಯಕ ಪೊಲೀಸ್ ಆಯುಕ್ತರಾದ (ACP) ರೀನಾ ಸುವರ್ಣ ಅವರು ಕಿವಿಮಾತು ಹೇಳಿದರು.


ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 08.03.2026 ರಂದು ಇತ್ತೀಚೆಗೆ ನಗರದ ಕರ್ನಾಟಕ ಗವರ್ನ್ಮೆಂಟ್ ಸೆಕ್ರೆಟೇರಿಯಟ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಸಬಲೀಕರಣಕ್ಕೆ ಒತ್ತು: ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ, ಶಿಕ್ಷಣ, ಉದ್ಯೋಗ ಮತ್ತು ಸ್ವಾವಲಂಬನೆ ಕುರಿತು ವಿಶೇಷ ಜಾಗೃತಿ ಮೂಡಿಸಲಾಯಿತು. ಹಿಂದುಳಿದ ವರ್ಗಗಳ ಇಲಾಖೆಯಿಂದ ಮಹಿಳೆಯರಿಗೆ ಲಭ್ಯವಿರುವ ಸರ್ಕಾರಿ ಸೌಲಭ್ಯಗಳು, ಸಬ್ಸಿಡಿ ಸಾಲಗಳು ಮತ್ತು ಉದ್ಯಮಾವಕಾಶಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲದೆ, KAS ಮತ್ತು IAS ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಕುರಿತು ತಜ್ಞರು ಮಾರ್ಗದರ್ಶನ ನೀಡಿದರು.

ಗಣ್ಯರ ಉಪಸ್ಥಿತಿ: ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸದಸ್ಯೆ ಪ್ರತಿಭಾ ಕುಳಾಯಿ, ಹೈಕೋರ್ಟ್ ವಕೀಲರಾದ ಅಡ್ವೊಕೇಟ್ ಶಿಲ್ಪಾಗೋಗಿ ಮತ್ತು ರೀನಾ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ವಿದ್ಯಾ ರಾಕೇಶ್, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಹಾಗೂ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಕಲ್ಲಾಜೆ ಉಪಸ್ಥಿತರಿದ್ದು ಪ್ರೇರಣಾದಾಯಕ ಮಾತುಗಳನ್ನಾಡಿದರು.
ಸಾಧಕರಿಗೆ ಗೌರವ: ವಿದ್ಯಾ ನಿಧಿಯ ಸಹಾಯಾರ್ಥವಾಗಿ ಹೊರಬರುತ್ತಿರುವ ‘ಯುವ ಸೇತುಬಂಧ’ ಪುಸ್ತಕದ ಬ್ರೋಶರ್ ಬಿಡುಗಡೆಗೊಳಿಸಲಾಯಿತು. NEET ಪರೀಕ್ಷೆಯಲ್ಲಿ 99.98% ಅಂಕ ಪಡೆದು ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಶಾನ್ವಿ ಪೂಜಾರಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕಿಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


ವಿವಿಧ ಚಟುವಟಿಕೆಗಳು: ಚಿತ್ರಾ ಅಂಚನ್ ಅವರ ನೇತೃತ್ವದಲ್ಲಿ ನಡೆದ ಪ್ರಶ್ನೋತ್ತರ ಸಂವಾದವು ನ್ಯಾಯಾಂಗ ಮತ್ತು ಸರ್ಕಾರಿ ಸೌಲಭ್ಯಗಳ ಬಗ್ಗೆ ಬೆಳಕು ಚೆಲ್ಲಿದರೆ, ಚಿತ್ರಾ ಪ್ರಸಾದ್ ಅವರು ಒತ್ತಡ ನಿರ್ವಹಣೆ ಹಾಗೂ ಧ್ಯಾನದ ಬಗ್ಗೆ ಅರಿವು ನೀಡಿದರು. ಪ್ರಜ್ಞಾ ಅವರ ಮಿಮಿಕ್ರಿ ಮತ್ತು ಜಯರಾಜ್ ಅವರ ಆಟೋಟಗಳು ನೆರೆದವರ ಗಮನ ಸೆಳೆದವು.
​ಯುವವಾಹಿನಿ ಬೆಂಗಳೂರು ಘಟಕದ ಅಧ್ಯಕ್ಷ ಶಶಿಧರ್ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಹಿಳಾ ನಿರ್ದೇಶಕರಾದ ಮಧುಶ್ರೀ ಬಂಗೇರ ಮತ್ತು ಶ್ವೇತ ಕೋಟ್ಯಾನ್ ಸಂಘಟಿಸಿದ್ದರು. ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಸಹಕರಿಸಿದರು. ಸಕೇಶ್ ಬುನ್ನನ್ ಮತ್ತು ಪ್ರಿಯಾ ಸಕೇಶ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!