ಸುಳ್ಯ: ಶ್ರೀಕ್ಷೇತ್ರ ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ದಿನಾಂಕ 27-02-2026 ಹಾಗೂ 28-02-2026 ರಂದು ಎರಡು ದಿನಗಳ ಕಾಲ ಹಗಲು–ರಾತ್ರಿ ನಿರಂತರವಾಗಿ ವಿವಿಧ ಸೇವಾ ಕಾರ್ಯಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶ್ರೀಕ್ಷೇತ್ರಕ್ಕೆ ಅನ್ನದಾನದ ಸಲುವಾಗಿ ರೂ. 5,500/- ದೇಣಿಗೆಯನ್ನು ಸಮರ್ಪಿಸಲಾಯಿತು.
ಈ ಪುಣ್ಯ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.


