Yuvavahini

MAR 08, 2026 9.00 PM IST

ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಮಕ್ಕಳಲ್ಲಿ ಸಂಸ್ಕೃತಿ, ಸಂಪ್ರದಾಯದ ಜಾಗೃತಿ ಮೂಡಿಸುವುದು ಮಹಿಳೆಯರ ಕರ್ತವ್ಯ: ಪ್ರೇಮ ಪ್ರಭಾಕರ್

ಮಂಗಳೂರು: “ಒಬ್ಬ ಸುಸಂಸ್ಕೃತ ಮಹಿಳೆ ತನ್ನ ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ದೇಶ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಹೆಣ್ಣು ತಾನು ಹುಟ್ಟಿದ ಮನೆ ಹಾಗೂ ಸೇರಿದ ಗಂಡನ ಮನೆಯ ಹಿತ ಬಯಸುವವಳು,” ಎಂದು ಡಿವೈನ್ ಪಾರ್ಕ್‌ನ ಮಹಿಳಾ ಮೇಲ್ಮೈ ಅಧಿಕಾರಿ ಪ್ರೇಮ ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
​ಅವರು ದಿನಾಂಕ 08-03-2026 ರಂದು ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಪ್ರಸ್ತಾಪಿಸಿದ ಅವರು, ಮಹಿಳೆಯರು ಸಮಾಜದ ಶಕ್ತಿಯಾಗಬೇಕು ಎಂದು ಹಿತವಚನ ನೀಡಿದರು.

​’ಸಖಿ-ಸಂವಾದ’ಕ್ಕೆ ಆಹ್ವಾನ:
​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಶ್ರೀಮತಿ ಸುಧಾ ಸುರೇಶ್ ಅವರು ಮಹಿಳೆಯರ ಮಹತ್ವದ ಬಗ್ಗೆ ವಿಚಾರ ಮಂಡಿಸಿದರು. ಇದೇ ಸಂದರ್ಭದಲ್ಲಿ ಮಾರ್ಚ್ 14, 2026 ರಂದು ನಡೆಯಲಿರುವ ಕೇಂದ್ರ ಸಮಿತಿಯ ವಿಶೇಷ ಕಾರ್ಯಕ್ರಮ ‘ಸಖಿ-ಸಂವಾದ’ದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಎಲ್ಲರಿಗೂ ಆಮಂತ್ರಣ ನೀಡಿದರು.

ಗಣ್ಯರ ಉಪಸ್ಥಿತಿ: ​ವೇದಿಕೆಯಲ್ಲಿ ಕೊಲ್ಯ ಘಟಕದ ಅಧ್ಯಕ್ಷರಾದ ನಿತೇಶ್ ಕರ್ಕೇರ, ಸ್ಥಾಪಕಾಧ್ಯಕ್ಷರಾದ ಸುರೇಶ್ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷರಾದ ಸುರೇಖಾ ಮೋಹನ್ ಅತಿಥಿಗಳನ್ನು ಸ್ವಾಗತಿಸಿದರು. ಮಹಿಳಾ ಸಂಘಟನಾ ನಿರ್ದೇಶಕಿ ದೇವಕಿ ಕಿಶೋರ್ ಧನ್ಯವಾದ ಸಮರ್ಪಿಸಿದರು.
ಆಟೋಟ ಮತ್ತು ಸಂಭ್ರಮ: ಸಭಾ ಕಾರ್ಯಕ್ರಮದ ನಂತರ ಮಹಿಳಾ ಸದಸ್ಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಘಟಕದ ಮಾಜಿ ಅಧ್ಯಕ್ಷರಾದ ಸುಮ ವಸಂತ್ ಕಾರ್ಯಕ್ರಮ ನಿರ್ವಹಿಸಿದರು. ಸ್ಪರ್ಧೆಗಳ ಉಸ್ತುವಾರಿಯನ್ನು ಮಾಜಿ ಅಧ್ಯಕ್ಷರುಗಳಾದ ಪೃಥ್ವಿರಾಜ್, ರಾಹುಲ್ ಸನಿಲ್ ಮತ್ತು ರೋಹಿತ್ ಕುಮಾರ್ ವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!