Yuvavahini

MAR 14, 2026 2.00 PM IST

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾದಾಗಲೇ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ : ರತ್ನಾವತಿ ಜೆ. ಬೈಕಾಡಿ

ಮಂಗಳೂರು : ಮಹಿಳಾ ದಿನಾಚರಣೆಯ ಸಂಭ್ರಮವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ಪ್ರತಿದಿನವೂ ಸಂತೋಷ, ಸಂಭ್ರಮ ಹಾಗೂ ಸಕಾರಾತ್ಮಕ ಚಿಂತನೆಗಳೊಂದಿಗೆ ಆಚರಿಸಬೇಕಾಗಿದೆ ಎಂದು ರೂವಾರಿ.ಕಾಮ್ ಡಿಜಿಟಲ್ ಪತ್ರಿಕೆಯ ಪ್ರಧಾನ ಸಂಪಾದಕಿ ರತ್ನಾವತಿ ಜೆ. ಬೈಕಾಡಿ ಅಭಿಪ್ರಾಯಪಟ್ಟರು.

ಅವರು ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಮಾರ್ಚ್ 14, 2026 ರಂದು ಸಂಜೆ 5 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು “ಇತರರು ಏನು ಹೇಳುತ್ತಾರೆ” ಎಂಬ ಕೀಳರಿಮೆಯನ್ನು ತೊರೆದು, ತಮ್ಮ ಸಂಸ್ಕೃತಿ, ಸಂಸ್ಕಾರ ಮತ್ತು ಮನಸ್ಸಿಗೆ ಒಪ್ಪುವ ಕಾರ್ಯಗಳನ್ನು ಧೈರ್ಯದಿಂದ ನಿರ್ವಹಿಸಬೇಕು. ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಸಕ್ರಿಯವಾಗಿ ಮುಂದುವರಿದಾಗ ಮಾತ್ರ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಸಿಗುತ್ತದೆ. ಮಹಿಳಾ ಸಂಘಟನೆಗಳು ಮಹಿಳೆಯರನ್ನು ಪ್ರೇರೇಪಿಸುವ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯವಾಗುತ್ತದೆ. ಈ ದಿಕ್ಕಿನಲ್ಲಿ ಯುವವಾಹಿನಿ ಮಹಿಳಾ ಘಟಕ ಉತ್ತಮ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಹಾಗೂ ಸಂಘಟನಾ ಕಾರ್ಯದರ್ಶಿ ಹರೀಶ್ ಎ. ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ತುಳುನಾಡಿನ ಸಂಸ್ಕೃತಿಕ ಕಲೆಯಾದ ಪಾಡ್ದನದಲ್ಲಿ ಸಾಧನೆಗೈದ ಲೀಲಾವತಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಬಿಬಿಎ ಪದವಿಯಲ್ಲಿ ಐದನೇ ರ್ಯಾಂಕ್ ಪಡೆದ ಶ್ರೀಗೌರಿ ಮತ್ತು ರತ್ನಾವತಿ ಜೆ. ಬೈಕಾಡಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಲೀಲಾವತಿ ಪಾಡ್ದನವನ್ನು ಹಾಡಿ ಸಭಿಕರಿಗೆ ಅದರ ವೈವಿಧ್ಯತೆಯನ್ನು ಪರಿಚಯಿಸಿದರು. ವೇದಿಕೆ ನಿರೂಪಣೆ, ರಂಗೋಲಿ ಹಾಗೂ ವಿವಿಧ ಮನರಂಜನಾ ಸ್ಪರ್ಧೆಗಳಲ್ಲಿ ವಿಜೇತರಾದ ಸದಸ್ಯರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಘಟಕದಿಂದ ಆಯೋಜಿಸಲಾದ ರಾಜಸ್ಥಾನ ಪ್ರವಾಸದಲ್ಲಿ ಭಾಗವಹಿಸಿದ ಸದಸ್ಯರಿಗೆ ಸ್ಮರಣಿಕೆಗಳನ್ನು ನೀಡಲಾಯಿತು. ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಸ್ತೂರಿ ಮಹೇಶ್ ಸ್ವಾಗತಿಸಿದರು. ಕೇಂದ್ರ ಸಮಿತಿಯ ಉಪಾಧ್ಯಕ್ಷೆ ಹಾಗೂ ಘಟಕದ ಮಾಜಿ ಅಧ್ಯಕ್ಷೆ ವಿದ್ಯಾ ರಾಕೇಶ್ ಪ್ರಸ್ತಾವನೆ ಮಾಡಿದರು. ಉಮಾ ಶ್ರೀಕಾಂತ್ ಮತ್ತು ದೀಪಿಕಾ ಮನೋಜ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸೋನಿಯಾ ರಾಜ್ ಧನ್ಯವಾದ ಅರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!