Yuvavahini

MAR 15, 2026 11.00 AM IST

ಯುವವಾಹಿನಿ (ರಿ.) ಬಜಪೆ ಘಟಕದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು :ಯುವವಾಹಿನಿ (ರಿ.) ಬಜಪೆ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬಜಪೆ ಪಟ್ಟಣ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಆಳ್ವಾಸ್ ಆಸ್ಪತ್ರೆ, ಮೂಡಬಿದ್ರೆ ಇವರ ಸಹಯೋಗದೊಂದಿಗೆ ಮಾರ್ಚ್ 15, 2026 ರಂದು ಬಜಪೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ-ಕರಂಬಾರು ಅಧ್ಯಕ್ಷ ಶಿವರಾಮ್ ಪೂಜಾರಿ ದೀಪ ಪ್ರಜ್ವಲನೆ ಮಾಡುವ ಮೂಲಕ ಶಿಬಿರ ಉದ್ಘಾಟಿಸಿದರು. ಬಜಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಅಧ್ಯಕ್ಷತೆ ವಹಿಸಿ, ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗ ಪಡೆದು ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕೆಂದು ಸಲಹೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಗಿರೀಶ್ ಎಂ. ಅವರು ಮಾತನಾಡಿ, ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಮಾಜಮುಖಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಆರೋಗ್ಯ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು. ಇಂತಹ ಶಿಬಿರಗಳು ಸಾಮಾನ್ಯ ಜನರಿಗೆ ಬಹು ಪ್ರಯೋಜನಕಾರಿಯಾಗಿವೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಬಜಪೆ ಘಟಕದ ಅಧ್ಯಕ್ಷೆ ರೇಣುಕಾ ಶೇಖರ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪಟ್ಟಣ ಪಂಚಾಯತ್ ಸದಸ್ಯರಾದ ಪದ್ಮನಾಭ ಪೂಜಾರಿ, ಜಯಂತ್ ಪೂಜಾರಿ ಹಾಗೂ ಯಶೋಧ ಅತಿಥಿಗಳಾಗಿ ಭಾಗವಹಿಸಿದರು.
ಸುಚಿತಾ ದೇವರಾಜ್ ಮತ್ತು ಜಯಶ್ರೀ ನಾಗೇಶ್ ಪ್ರಾರ್ಥಿಸಿದರು. ಡಾ. ಶಿಲ್ಪಾ ದಿನೇಶ್ ಸ್ವಾಗತಿಸಿದರು. ಶೋಭಾ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಪೂಜಾರಿ ಧನ್ಯವಾದ ಸಲ್ಲಿಸಿದರು.
ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಸ್ತ್ರೀರೋಗ ತಪಾಸಣೆ, ಗರ್ಭಕೋಶ ಕ್ಯಾನ್ಸರ್ ಪರೀಕ್ಷೆ, ಕೀಲು ನೋವು ವಿಭಾಗದ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ, ಕಿವಿ-ಮೂಗು-ಗಂಟಲು ಪರೀಕ್ಷೆ ಹಾಗೂ ECG ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಸಲ್ಪಟ್ಟವು. ಸುಮಾರು 150ಕ್ಕೂ ಅಧಿಕ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನ ಪಡೆದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!