Yuvavahini

MAR 15, 2026 2.00 PM IST

ಯುವವಾಹಿನಿ ಮೂಡುಬಿದಿರೆ ಘಟಕದ ಪದಗ್ರಹಣ ಸಮಾರಂಭ

ಮೂಡುಬಿದಿರೆ, ಮಾ.15: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮೂಡುಬಿದಿರೆಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ಭಾನುವಾರ ಜರುಗಿತು.
ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಡಿಮೈಲಿಗೆ ವಿರೋಧಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಯುವವಾಹಿನಿ ಸಂಘಟನೆ ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ಬಲವಾಗಿ ಬೇರೂರಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಮುರಳೀಧರ ಕೋಟ್ಯಾನ್ ಮಾತನಾಡಿ, ತಮ್ಮ ಒಂದು ವರ್ಷದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ನೂತನ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಅವರಿಗೆ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿ, ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.


ಆಯ್ಕೆ ಸಮಿತಿಯ ಸಂಚಾಲಕ ಹಾಗೂ ಕೇಂದ್ರ ಸಮಿತಿಯ ಕ್ರೀಡಾ ನಿರ್ದೇಶಕರಾದ ಶಂಕರ್ ಎ. ಕೋಟ್ಯಾನ್ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸಭೆಗೆ ಪರಿಚಯಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಾರಾಯಣ ಗುರು ವಿಚಾರ ವೇದಿಕೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಮೂಡುಬಿದ್ರೆ ಪುರಸಭೆಯ ಮಾಜಿ ಉಪಾಧ್ಯಕ್ಷ ಸುರೇಶ್ ಕೋಟ್ಯಾನ್, ಯೋಜನಾ ಪ್ರಾಧಿಕಾರ ಸದಸ್ಯ ಶೇಖರ್ ಪೂಜಾರಿ ಬೊಳ್ಳಿ, ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕೆ. ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶುಭಕರ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರುಕ್ಕಯ್ಯ ಪೂಜಾರಿ ಅಳಿಯೂರು, ಗೋಪಾಲ್ ಎ. ಕೋಟ್ಯಾನ್ ಮಾರೂರು ಹಾಗೂ ಹಿರಿಯ ನಾಟಿ ವೈದ್ಯೆ ಗಿರಿಜಾ ಕೋಟ್ಯಾನ್ ಕಡಂದಲೆ ಅವರನ್ನು ಶಾಲು ಹೊದಿಸಿ ಫಲ-ಪುಷ್ಪ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಸುಶಾಂತ್ ಕರ್ಕೇರಾ, ಪ್ರಭಾಕರ್ ಚಾಮುಂಡಿಬೆಟ್ಟ ಮತ್ತು ಶೋಭಾ ಸುರೇಶ್ ಸನ್ಮಾನ ಪತ್ರ ವಾಚಿಸಿದರು. ಶಿಬಾನಿ ಪ್ರಾರ್ಥನೆಗೈದ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರು ಹಾಗೂ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸೌಮ್ಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು, ವಿನೀತ್ ಸುವರ್ಣ ವರದಿ ಮಂಡಿಸಿದರು. ಯುವಸ್ಪಂದನ ಯೋಜನೆಯ ವರದಿಯನ್ನು ನವಾನಂದ ಮೂಡುಬಿದಿರೆ ಮಂಡಿಸಿದರು. ಅಶ್ವಿನ್ ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!