Yuvavahini

APR 23, 2026 1.00 PM IST

ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಉಚಿತ ಬೇಸಿಗೆ ಶಿಬಿರ ಉದ್ಘಾಟನೆ

ಯುವವಾಹಿನಿ ಸಂಸ್ಥೆಯ ಸೇವಾ ಚಟುವಟಿಕೆಗಳು ಶ್ಲಾಘನೀಯ : ಅಭಯಚಂದ್ರ ಜೈನ್

ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ಸಹಯೋಗದಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ ಒಂದು ವಾರದ ಉಚಿತ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಏಪ್ರಿಲ್ 23ರಂದು ಮೂಡುಬಿದಿರೆಯ ಸಮಾಜ ಮಂದಿರದ ಸ್ವರ್ಣ ಮಂದಿರದಲ್ಲಿ ನೆರವೇರಿತು.

ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಯುವವಾಹಿನಿ ಸಂಸ್ಥೆಯ ಸೇವಾ ಮನೋಭಾವ ಮತ್ತು ಕಾರ್ಯವೈಖರಿಯನ್ನು ಕೊಂಡಾಡಿದರು. ಸಂಸ್ಥೆ ಬಲಿಷ್ಠವಾಗಿ ಬೆಳೆದಿದ್ದು, ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು. ಇಂತಹ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಮತ್ತು ಭವಿಷ್ಯ ನಿರ್ಮಾಣಕ್ಕೆ ಮಹತ್ವದ ಪಾತ್ರವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ. ಅವರು ಯುವವಾಹಿನಿಯ ವಿವಿಧ ಸಮಾಜಮುಖಿ ಚಟುವಟಿಕೆಗಳನ್ನು ವಿವರಿಸಿ, ಶಿಬಿರಗಳ ಅಗತ್ಯತೆಯನ್ನು ಎತ್ತಿ ಹಿಡಿದರು.
ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ನಿರ್ದೇಶಕರೂ ಆಗಿರುವ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ಶುಭಲಕ್ಷ್ಮಿ ಅವರು ಶಿಬಿರದ ರೂಪರೇಖೆ, ತರಬೇತಿ ಕಾರ್ಯಕ್ರಮಗಳು ಹಾಗೂ ವಿದ್ಯಾರ್ಥಿಗಳಿಗೆ ಲಭಿಸುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.
ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಶಿಬಿರವನ್ನು ಆಯೋಜಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು. ಈ ಮೂಲಕ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ದೊರೆತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಘಟಕದ ಕಾರ್ಯದರ್ಶಿ ಅಶ್ವಿನ್ ಪೂಜಾರಿ ಹಾಗೂ ಕೋಶಾಧಿಕಾರಿ ಜಯಶೀಲಾ ಎಸ್. ಪೂಜಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶುಭಲಕ್ಷ್ಮಿ ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!