ದಿನಾಂಕ 22/04/2026 ರಂದು ಕುಲಶೇಖರ ಪದವುದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ, ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಸೇವೆಯನ್ನು ಸಲ್ಲಿಸಲಾಯಿತು.
ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಭಾಗವಹಿಸಿ, ಭಕ್ತರಿಗೆ ವಿವಿಧ ರೀತಿಯ ಸಹಾಯ ಸಹಕಾರ ನೀಡಿದರು.



